Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:15 - ಕನ್ನಡ ಸಮಕಾಲಿಕ ಅನುವಾದ

15 ಅವರು ಬಂದು ತನ್ನನ್ನು ಹಿಡಿದುಕೊಂಡುಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ಯೇಸು ತಿಳಿದು ತಾವೊಬ್ಬರೇ ಪುನಃ ಬೆಟ್ಟದ ಕಡೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಯೇಸು, ಅವರು ಬಂದು ತನ್ನನ್ನು ಹಿಡಿದುಕೊಂಡು ಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ತಿಳಿದುಕೊಂಡು ಪುನಃ ತಾನೊಬ್ಬನೇ ಬೆಟ್ಟಕ್ಕೆ ಹೋಗಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರೆಲ್ಲರೂ ಬಂದು ತಮ್ಮನ್ನು ಹಿಡಿದು ಅರಸನನ್ನಾಗಿ ಮಾಡುವ ಯೋಚನೆಯಲ್ಲಿದ್ದಾರೆ ಎಂಬುದನ್ನು ಅರಿತ ಯೇಸು ತಾವೊಬ್ಬರೇ ಬೆಟ್ಟದ ಕಡೆಗೆ ಹೊರಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಯೇಸು - ಅವರು ಬಂದು ತನ್ನನ್ನು ಹಿಡುಕೊಂಡುಹೋಗಿ ಅರಸನನ್ನಾಗಿ ಮಾಡಬೇಕೆಂಬ ಯೋಚನೆಯಲ್ಲಿದ್ದಾರೆಂದು ತಿಳಿದುಕೊಂಡು ತಿರಿಗಿ ತಾನೊಬ್ಬನೇ ಒಂಟಿಗನಾಗಿ ಬೆಟ್ಟಕ್ಕೆ ಹೋಗಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ತನ್ನನ್ನು ಬಲವಂತದಿಂದ ರಾಜನನ್ನಾಗಿ ಮಾಡಲು ಜನರು ಯೋಚಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅಲ್ಲಿಂದ ತಾನೊಬ್ಬನೇ ಬೆಟ್ಟಕ್ಕೆ ಮತ್ತೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಲೊಕಾ ಬಳ್‍ ಜಬ್ಬರಾನ್ ಮಾಕಾ ರಾಜಾ ಕರುಕ್ ಮನುನ್ ಯೆತಾತ್ ಮನುನ್ ಜೆಜುಕ್ ಗೊತ್ತ್ ಹೊತ್ತೆ, ತಸೆ ಮನುನ್ ಜೆಜು ಅನಿ ಪರ್ತುನ್ ಮಡ್ಡಿ ವರ್ತಿ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:15
14 ತಿಳಿವುಗಳ ಹೋಲಿಕೆ  

ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನನ್ನನ್ನು ಯೆಹೂದ್ಯರಿಗೆ ಒಪ್ಪಿಸದಂತೆ ನನ್ನ ಸೇವಕರು ಹೋರಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ,” ಎಂದು ಉತ್ತರಕೊಟ್ಟರು.


“ಕರ್ತದೇವರ ಹೆಸರಿನಲ್ಲಿ ಬರುವ ಅರಸನು ಆಶೀರ್ವಾದ ಹೊಂದಲಿ!” “ಪರಲೋಕದಲ್ಲಿ ಸಮಾಧಾನ, ಅತ್ಯುನ್ನತದಲ್ಲಿ ಮಹಿಮೆ!”


ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗುತ್ತಾ, “ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!”


ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.


“ನಾನು ಮನುಷ್ಯರಿಂದ ಮಹಿಮೆಯನ್ನು ಸ್ವೀಕರಿಸುವುದಿಲ್ಲ.


ಯೇಸು ಬೆಟ್ಟವನ್ನೇರಿ ಅಲ್ಲಿ ತಮ್ಮ ಶಿಷ್ಯರೊಂದಿಗೆ ಕುಳಿತುಕೊಂಡರು.


ಯೇಸು ಜನರ ಗುಂಪನ್ನು ಕಂಡು, ಒಂದು ಬೆಟ್ಟವನ್ನೇರಿ ಕುಳಿತುಕೊಂಡರು. ಶಿಷ್ಯರು ಅವರ ಬಳಿಗೆ ಬಂದರು.


ಮರುದಿನ ಅಲ್ಲಿ ಒಂದೇ ದೋಣಿಯ ಹೊರತು ಬೇರೆ ಇರಲಿಲ್ಲವೆಂದೂ ಯೇಸುವಿನ ಶಿಷ್ಯರು ಮಾತ್ರ ಆ ದೋಣಿಯಲ್ಲಿ ಹೋದರೆಂದೂ ಯೇಸು ತಮ್ಮ ಶಿಷ್ಯರ ಸಂಗಡ ದೋಣಿಯಲ್ಲಿ ಹೋಗಲಿಲ್ಲವೆಂದೂ ಸರೋವರದ ಆಚೆಯಲ್ಲಿ ನಿಂತಿದ್ದ ಜನರು ಅರಿತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು