ಯೋಹಾನ 6:31 - ಕನ್ನಡ ಸಮಕಾಲಿಕ ಅನುವಾದ31 ‘ಅವರಿಗೆ ಪರಲೋಕದಿಂದ ರೊಟ್ಟಿ ಕೊಡಲಾಯಿತು’ ಎಂದು ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅರಣ್ಯದಲ್ಲಿ ಮನ್ನಾ ಎಂಬ ಆಹಾರವನ್ನು ತಿಂದರು,” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನಮ್ಮ ಪೂರ್ವಿಕರು ಅರಣ್ಯದಲ್ಲಿ ಮನ್ನಾ ತಿಂದರು. ‘ಪರಲೋಕದಿಂದ ರೊಟ್ಟಿಯನ್ನು ಅವರಿಗೆ ತಿನ್ನುವುದಕ್ಕೆ ಕೊಟ್ಟನು’ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲಾ” ಎಂದು ಕೇಳಿದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ನಮ್ಮ ಪೂರ್ವಜರಿಗೆ ಮರುಭೂಮಿಯಲ್ಲಿ ತಿನ್ನಲು ‘ಮನ್ನಾ’ ಸಿಕ್ಕಿತು. ತಿನ್ನಲು ಅವರಿಗೆ ಸ್ವರ್ಗದಿಂದ ರೊಟ್ಟಿ ದೊರಕಿತು, ಎಂದು ಪವಿತ್ರಗ್ರಂಥವೇ ಹೇಳುತ್ತದೆಯಲ್ಲವೇ?’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನಮ್ಮ ಹಿರಿಯರು ಅಡವಿಯಲ್ಲಿ ಮನ್ನಾ ತಿಂದರು; ಪರಲೋಕದಿಂದ ರೊಟ್ಟಿಯನ್ನು ಅವರಿಗೆ ತಿನ್ನುವದಕ್ಕೆ ಕೊಟ್ಟನು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ, ನೀನು ಏನು ಕೆಲಸ ನಡಿಸುತ್ತೀ? ಎಂದು ಕೇಳಿದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ನಮ್ಮ ಪಿತೃಗಳು ತಮಗೆ ದೇವರು ಮರುಭೂಮಿಯಲ್ಲಿ ಕೊಟ್ಟ ಮನ್ನವನ್ನು (ಆಹಾರವನ್ನು) ತಿಂದರು. ‘ದೇವರು ಅವರಿಗೆ ತಿನ್ನಲು ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಪವಿತ್ರ್ ಪುಸ್ತಕಾತ್ “ತೆನಿ ತೆಂಕಾ ಸರ್‍ಗಾ ವೈನಾ ಬಾಕ್ರಿ ದಿಲ್ಯಾನ್, ಅನಿ ತೆನಿ ಖಾಲ್ಯಾನಿ ಮಟ್ಲ್ಯಾ ಸರ್ಕೆ ಅಮ್ಚ್ಯಾ ಅದ್ಲ್ಯಾ ಲೊಕಾನಿ ಮರುಭುಮಿತ್ ಮನ್ನಾ ಖಾಲ್ಯಾನಿ”. ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |