Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:32 - ಕನ್ನಡ ಸಮಕಾಲಿಕ ಅನುವಾದ

32 ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮಗೆ ಪರಲೋಕದಿಂದ ರೊಟ್ಟಿಯನ್ನು ಮೋಶೆ ಕೊಡಲಿಲ್ಲ. ನನ್ನ ತಂದೆಯೇ ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದಲೇ ಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯೇಸು ಅವರಿಗೆ “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ, ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ; ಸ್ವರ್ಗದಿಂದ ನಿಮಗೆ ರೊಟ್ಟಿಯನ್ನು ಕೊಟ್ಟವನು ಮೋಶೆಯಲ್ಲ; ನಿಮಗೆ ಸ್ವರ್ಗದಿಂದ ನಿಜವಾದ ರೊಟ್ಟಿಯನ್ನು ಕೊಡುವವರು ನನ್ನ ಪಿತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ; ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ಜನರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟವನು ಮೋಶೆಯಲ್ಲ. ಆದರೆ ನನ್ನ ತಂದೆಯು ನಿಮಗೆ ಪರಲೋಕದಿಂದ ನಿಜವಾದ ರೊಟ್ಟಿಯನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತನ್ನಾ ಜೆಜುನ್, “ಮಿಯಾ ತುಮ್ಕಾ ಖರೆ ಕಾಯ್‍ ತೆ ಸಾಂಗ್ತಾ: ಮೊಯ್ಜೆನ್ ತುಮ್ಕಾ ಸರ್‍ಗಾ ವೈಲಿ ಭಾಕ್ರಿ ದಿವ್‍ನತ್ತ್ಯಾನ್, ಹ್ಯೊ ಮಾಜೊ ಬಾಬಾ ತುಮ್ಕಾ ಖರಿ ಸರ್‍ಗಾ ವೈಲಿ ಭಾಕ್ರಿ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:32
14 ತಿಳಿವುಗಳ ಹೋಲಿಕೆ  

“ನಾನೇ ನಿಜವಾದ ದ್ರಾಕ್ಷಿಯ ಬಳ್ಳಿ, ನನ್ನ ತಂದೆಯೇ ತೋಟಗಾರರು.


ಪರಲೋಕದಿಂದ ಬಂದ ರೊಟ್ಟಿಯು ಇದೇ. ನಿಮ್ಮ ಪಿತೃಗಳು ‘ಮನ್ನಾ’ ತಿಂದರೂ ಸತ್ತರು. ಇದು ಹಾಗಲ್ಲ, ಈ ರೊಟ್ಟಿಯನ್ನು ತಿನ್ನುವವರು ಸದಾಕಾಲಕ್ಕೂ ಜೀವಿಸುವರು,” ಎಂದರು.


ಆಗ ಯೆಹೋವ ದೇವರು ಮೋಶೆಗೆ, “ನಾನು ರೊಟ್ಟಿಯನ್ನು ನಿಮಗಾಗಿ ಆಕಾಶದಿಂದ ಸುರಿಸುತ್ತೇನೆ. ಜನರು ಹೊರಗೆ ಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದದ್ದನ್ನು ಕೂಡಿಸಲಿ. ಇದರಿಂದ ಅವರು ನನ್ನ ಆಜ್ಞೆಗಳನ್ನು ಕೈಗೊಳ್ಳುವರೋ, ಇಲ್ಲವೋ ಎಂಬುದನ್ನು ಪರೀಕ್ಷಿಸುತ್ತೇನೆ.


ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು.


ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.


ಯಾರು ತಿಂದರೂ ಸಾಯದೇ ಇರುವಂತೆ ಪರಲೋಕದಿಂದ ಇಳಿದು ಬಂದ ಜೀವದ ರೊಟ್ಟಿ ಇದೇ.


“ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ,” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಯೇಸುವಿನ ವಿಷಯವಾಗಿ ಗೊಣಗುಟ್ಟಿ,


ಯೇಸು ಅವರಿಗೆ, “ನಾನೇ ಜೀವದ ರೊಟ್ಟಿ. ನನ್ನ ಬಳಿಗೆ ಬರುವವರಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವರಿಗೆ ಎಂದಿಗೂ ದಾಹವಾಗುವುದಿಲ್ಲ.


ಪರಲೋಕದಿಂದ ಇಳಿದುಬಂದು ಲೋಕಕ್ಕೆ ಜೀವವನ್ನು ಕೊಡುವ ದೇವರ ರೊಟ್ಟಿಯು ನಾನೇ,” ಎಂದರು.


ನಿಜ ಬೆಳಕು ಲೋಕಕ್ಕೆ ಬರುವುದಾಗಿತ್ತು. ಆ ಬೆಳಕೇ ಪ್ರತಿ ಮಾನವನಿಗೂ ಬೆಳಕನ್ನು ನೀಡುವುದಾಗಿತ್ತು.


ಆದರೆ ದೇವರು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ, ಆಕಾಶದ ಕದಗಳನ್ನು ತೆರೆದರು.


ಮೋಶೆ ಮುಂದುವರಿಸಿ, “ಸಂಜೆಯಲ್ಲಿ ಯೆಹೋವ ದೇವರು ನಿಮಗೆ ಮಾಂಸಾಹಾರವನ್ನೂ, ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ಕೊಡುವರು. ನಿಮ್ಮ ಗೊಣಗುಟ್ಟುವಿಕೆಯು ಯೆಹೋವ ದೇವರಿಗೆ ಹೊರತು ನಮಗಲ್ಲ. ನಾವು ಎಷ್ಟು ಮಾತ್ರದವರು,” ಎಂದನು.


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


‘ಅವರಿಗೆ ಪರಲೋಕದಿಂದ ರೊಟ್ಟಿ ಕೊಡಲಾಯಿತು’ ಎಂದು ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅರಣ್ಯದಲ್ಲಿ ಮನ್ನಾ ಎಂಬ ಆಹಾರವನ್ನು ತಿಂದರು,” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು