Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:33 - ಕನ್ನಡ ಸಮಕಾಲಿಕ ಅನುವಾದ

33 ಪರಲೋಕದಿಂದ ಇಳಿದುಬಂದು ಲೋಕಕ್ಕೆ ಜೀವವನ್ನು ಕೊಡುವ ದೇವರ ರೊಟ್ಟಿಯು ನಾನೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ದೇವರು ಕೊಡುವ ಆ ರೊಟ್ಟಿ ಯಾವುದೆಂದರೆ, ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದ್ದೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಏಕೆಂದರೆ, ಸ್ವರ್ಗದಿಂದ ಇಳಿದುಬಂದು ಲೋಕಕ್ಕೆ ಸಜ್ಜೀವವನ್ನೀಯುವಾತನೇ ದೇವರು ಕೊಡುವ ರೊಟ್ಟಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ದೇವರು ಕೊಡುವ ಆ ರೊಟ್ಟಿ ಯಾವದಂದರೆ ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದೇ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ದೇವರ ರೊಟ್ಟಿ ಯಾವುದು? ಪರಲೋಕದಿಂದ ಇಳಿದುಬಂದು ಈ ಲೋಕಕ್ಕಾಗಿ ಜೀವವನ್ನು ಕೊಡುವಾತನೇ ದೇವರು ಕೊಡುವ ರೊಟ್ಟಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ದೆವಾಚಿ ಭಾಕ್ರಿ ದಿತಾ ಸರ್ಗಾವೈನಾ ಉತ್ರುನ್ ಯೆತಾ, ಅನಿ ಜಗಾಕ್ ಜಿವ್ ದಿತಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:33
13 ತಿಳಿವುಗಳ ಹೋಲಿಕೆ  

ಏಕೆಂದರೆ ನೀವು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ, ಇವರು ಅಂಗೀಕರಿಸಿದ್ದಾರೆ ಮತ್ತು ನಾನು ನಿಮ್ಮ ಬಳಿಯಿಂದ ಬಂದವನೆಂದು ಇವರು ನಿಶ್ಚಯವಾಗಿ ತಿಳಿದು, ನೀವೇ ನನ್ನನ್ನು ಕಳುಹಿಸಿದ್ದೀರಿ, ಎಂದು ನಂಬಿದ್ದಾರೆ.


ಯೇಸು ಅವರಿಗೆ, “ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ಏಕೆಂದರೆ ನಾನು ದೇವರಿಂದ ಹೊರಟು ಬಂದಿದ್ದೇನೆ. ನಾನು ನನ್ನಷ್ಟಕ್ಕೆ ಬರಲಿಲ್ಲ. ಆದರೆ ದೇವರೇ ನನ್ನನ್ನು ಕಳುಹಿಸಿದ್ದು.


ನಾನು ತಂದೆಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ತಿರುಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತಿದ್ದೇನೆ,” ಎಂದರು.


ಯಾರು ತಿಂದರೂ ಸಾಯದೇ ಇರುವಂತೆ ಪರಲೋಕದಿಂದ ಇಳಿದು ಬಂದ ಜೀವದ ರೊಟ್ಟಿ ಇದೇ.


ನಾನು ನನ್ನ ಚಿತ್ತವನ್ನು ಮಾಡುವುದಕ್ಕಲ್ಲ. ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ಮಾಡುವುದಕ್ಕೆ ಪರಲೋಕದಿಂದ ಬಂದೆನು.


ಪರಲೋಕದಿಂದ ಇಳಿದು ಬಂದ ಮನುಷ್ಯಪುತ್ರನಾದ ನನ್ನನ್ನು ಹೊರತು ಯಾರೂ ಪರಲೋಕಕ್ಕೆ ಏರಿ ಹೋದವರಿಲ್ಲ.


ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದರು, ಎಂಬ ವಾಕ್ಯವು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ. ಆ ಪಾಪಿಗಳಲ್ಲಿ ನಾನೇ ಮುಖ್ಯನು.


ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾರೆಂದೂ ತಾನು ದೇವರ ಬಳಿಯಿಂದ ಬಂದು ಮರಳಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.


ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮಗೆ ಪರಲೋಕದಿಂದ ರೊಟ್ಟಿಯನ್ನು ಮೋಶೆ ಕೊಡಲಿಲ್ಲ. ನನ್ನ ತಂದೆಯೇ ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದಲೇ ಕೊಡುತ್ತಾರೆ.


“ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ,” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಯೇಸುವಿನ ವಿಷಯವಾಗಿ ಗೊಣಗುಟ್ಟಿ,


ಪರಲೋಕದಿಂದ ಬಂದ ರೊಟ್ಟಿಯು ಇದೇ. ನಿಮ್ಮ ಪಿತೃಗಳು ‘ಮನ್ನಾ’ ತಿಂದರೂ ಸತ್ತರು. ಇದು ಹಾಗಲ್ಲ, ಈ ರೊಟ್ಟಿಯನ್ನು ತಿನ್ನುವವರು ಸದಾಕಾಲಕ್ಕೂ ಜೀವಿಸುವರು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು