Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:40 - ಕನ್ನಡ ಸಮಕಾಲಿಕ ಅನುವಾದ

40 ನನ್ನ ತಂದೆಯ ಚಿತ್ತವೇನೆಂದರೆ ನನ್ನನ್ನು ನೋಡಿ ನನ್ನಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವುದೇ; ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಪುತ್ರನನ್ನು ಕಂಡು ಆತನಲ್ಲಿ ವಿಶ್ವಾಸ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ಪಿತನ ಸಂಕಲ್ಪ. ಅಂಥವನನ್ನು ಅಂತಿಮ ದಿನದಂದು ನಾನು ಜೀವಕ್ಕೆ ಎಬ್ಬಿಸುತ್ತೇನೆ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ನಿತ್ಯ ಜೀವವು ಸಿಕ್ಕಬೇಕೆಂಬದೇ ನನ್ನ ತಂದೆಯ ಚಿತ್ತವಾಗಿದೆ; ಮತ್ತು ನಾನು ಕಡೇದಿನದಲ್ಲಿ ಅವನನ್ನು ಎಬ್ಬಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಮಗನನ್ನು ನೋಡಿ ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು. ನನ್ನ ತಂದೆಯು ಬಯಸುವುದು ಇದನ್ನೇ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತೆಚೆಸಾಟ್ನಿ ಲೆಕಾಕ್ ಬಗುನ್ ತ್ಯೆಚೆವರ್ತಿ ವಿಶ್ವಾಸ್, ಕರಲ್ಲ್ಯಾಕ್ನಿ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವುಚೆ ಮನ್ತಲಿಚ್ ಮಾಜ್ಯಾ ಬಾಬಾಚಿ ಆಶಾ, ಅನಿ ಮಿಯಾ ತೆಂಕಾ ಆಕ್ರಿಚ್ಯಾ ದಿಸಿ ಝಿತ್ತೊ ಕರುನ್ ಉಟ್ವುತಾ”, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:40
37 ತಿಳಿವುಗಳ ಹೋಲಿಕೆ  

ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನಿತ್ಯಜೀವವನ್ನು ಹೊಂದಿದ್ದಾರೆ, ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು.


“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.


ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು.


ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.


ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ಕಾಣುವುದಿಲ್ಲ. ಆದರೆ ನೀವು ನನ್ನನ್ನು ಕಾಣುವಿರಿ. ಏಕೆಂದರೆ ನಾನು ಜೀವಿಸುವುದರಿಂದ ನೀವು ಸಹ ಜೀವಿಸುವಿರಿ.


ನನ್ನನ್ನು ನೋಡುವವರು ನನ್ನನ್ನು ಕಳುಹಿಸಿದ ತಂದೆಯನ್ನೇ ಕಾಣುತ್ತಾರೆ.


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು.


ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು,” ಎಂದು ಹೇಳಿದನು.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ನನ್ನ ಕಣ್ಣುಗಳು ನಿಮ್ಮ ರಕ್ಷಣೆಯನ್ನು ಕಂಡವು,


ಇದೇ ಕ್ರಿಸ್ತ ಯೇಸು ನಮಗೆ ವಾಗ್ದಾನ ಮಾಡಿರುವ ನಿತ್ಯಜೀವವಾಗಿರುತ್ತದೆ.


ಯೆಹೋವ ದೇವರು ತಮ್ಮ ಪವಿತ್ರ ಬಾಹುವನ್ನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತೋರಿಸಿಕೊಂಡಿದ್ದಾನೆ ಮತ್ತು ಭೂಮಿಯ ಅಂತ್ಯದವರೆಗೂ ನಮ್ಮ ದೇವರ ರಕ್ಷಣೆಯನ್ನು ಕಾಣುವರು.


ನೀವು ಎಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವಿರಿ.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದಿಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.


ನಿತ್ಯಜೀವಕ್ಕಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕರುಣೆಗೋಸ್ಕರ ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.


ನೀವು ಕ್ರಿಸ್ತ ಯೇಸುವನ್ನು ನೋಡಲಿಲ್ಲವಾದರೂ ಅವರನ್ನು ಪ್ರೀತಿಸುತ್ತೀರಿ. ನೀವು ಈಗ ಅವರನ್ನು ಕಾಣದಿದ್ದರೂ ಅವರಲ್ಲಿ ನಂಬಿಕೆಯಿಟ್ಟು ವ್ಯಕ್ತಪಡಿಸಲಾಗದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು.


ಅವರ ಆಜ್ಞೆಯು ನಿತ್ಯಜೀವಕ್ಕೆ ಮಾರ್ಗವಾಗಿದೆ ಎಂದು ನಾನು ಬಲ್ಲೆನು. ಆದ್ದರಿಂದ, ತಂದೆಯು ನನಗೆ ಹೇಳಿದಂತೆಯೇ ಮಾತನಾಡುತ್ತೇನೆ,” ಎಂದು ಹೇಳಿದರು.


ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ಕಾಣುವನೆಂದು ಆನಂದಿಸಿದನು ಮತ್ತು ಅದನ್ನು ಕಂಡು ಉಲ್ಲಾಸಪಟ್ಟನು,” ಎಂದು ಹೇಳಿದರು.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ಅವನು ಚಿಗುರಿನಂತೆಯೂ, ಒಣ ನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಯೆಹೋವ ದೇವರ ಮುಂದೆ ಬೆಳೆಯುವನು. ಅವನಿಗೆ ಯಾವ ಸೌಂದರ್ಯವಾಗಲಿ ಇಲ್ಲವೆ ಘನತೆಯಾಗಲಿ ಇರಲಿಲ್ಲ. ನಾವು ಅವನನ್ನು ನೋಡಿದಾಗ, ಅವನಲ್ಲಿ ಆಕರ್ಷಿಸತಕ್ಕ ಯಾವ ಚಂದವು ಇರಲಿಲ್ಲ.


ನಂಬಿಕೆ ಎಂಬುದು ನಾವು ನಿರೀಕ್ಷಿಸುವವುಗಳ ನಿಶ್ಚಯವೂ ಕಾಣದವುಗಳ ನಿದರ್ಶನವೂ ಆಗಿದೆ.


ನಂಬಿಕೆಯಿಂದಲೇ ಮೋಶೆ ಅರಸನ ಕೋಪಕ್ಕೆ ಭಯಪಡದೆ ಈಜಿಪ್ಟನ್ನು ಬಿಟ್ಟುಹೋದನು. ಏಕೆಂದರೆ ಅವನು ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿದ್ದನು.


ಅವರೇ ಸತ್ಯದ ಆತ್ಮರಾಗಿದ್ದಾರೆ. ಲೋಕವು ಅವರನ್ನು ನೋಡದೆಯೂ ತಿಳಿಯದೆಯೂ ಇರುವುದರಿಂದ ಸತ್ಯದ ಆತ್ಮರಾಗಿರುವ ಅವರನ್ನು ಸ್ವೀಕರಿಸಲಾರದು. ನೀವು ಅವರನ್ನು ಬಲ್ಲಿರಿ. ಏಕೆಂದರೆ ಅವರು ನಿಮ್ಮೊಂದಿಗಿರುವರು ಮತ್ತು ನಿಮ್ಮೊಳಗೂ ನೆಲೆಸಿರುವರು.


ನ್ಯಾಯತೀರ್ಪಿನ ದಿನದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಗತಿಯು ಆ ಪಟ್ಟಣಕ್ಕಿಂತ ಹೆಚ್ಚು ತಾಳುವಂಥದ್ದಾಗಿರುವುದು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


“ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು,” ಎಂದು ಹೇಳುವೆನು.


ನನ್ನನ್ನು ಕಳುಹಿಸಿಕೊಟ್ಟ ತಂದೆಯ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಕಡೆಯ ದಿನದಲ್ಲಿ ಅವರನ್ನು ಎಬ್ಬಿಸುವುದೇ.


ನನ್ನನ್ನು ಕಳುಹಿಸಿದ ತಂದೆ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬರಲಾರರು. ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು.


ಮಾರ್ಥಳು ಯೇಸುವಿಗೆ, “ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನು ಪುನಃ ಎದ್ದು ಬರುವನೆಂದು ನಾನು ಬಲ್ಲೆನು,” ಎಂದು ಹೇಳಿದಳು.


ಆಗ ಮೋಶೆಯು ಕಂಚಿನ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟನು. ಸರ್ಪದಿಂದ ಕಚ್ಚಿಸಿಕೊಂಡವರಲ್ಲಿ ಯಾರು ಆ ಕಂಚಿನ ಸರ್ಪದ ಕಡೆಗೆ ದೃಷ್ಟಿ ಇಟ್ಟು ನೋಡಿದರೋ, ಅವರು ಬದುಕಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು