Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:51 - ಕನ್ನಡ ಸಮಕಾಲಿಕ ಅನುವಾದ

51 ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಪರಲೋಕದಿಂದ ಇಳಿದುಬರುವ ಜೀವವುಳ್ಳ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾಕಾಲ ಬದುಕುವನು. ಮತ್ತು ನಾನು ಕೊಡುವ ರೊಟ್ಟಿ ನನ್ನ ಮಾಂಸವೇ; ಅದನ್ನು ಲೋಕದ ಜೀವಕ್ಕೋಸ್ಕರ ಕೊಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಪರಲೋಕದಿಂದ ಇಳಿದುಬಂದ ಜೀವವುಳ್ಳ ರೊಟ್ಟಿ ನಾನೇ. ಈ ರೊಟ್ಟಿಯನ್ನು ತಿನ್ನುವವನು ಶಾಶ್ವತವಾಗಿ ಜೀವಿಸುವನು. ಈ ರೊಟ್ಟಿಯೇ ನನ್ನ ದೇಹ. ಈ ಲೋಕದಲ್ಲಿರುವ ಜನರು ಜೀವವನ್ನು ಹೊಂದಿಕೊಳ್ಳಲೆಂದು ನಾನು ನನ್ನ ದೇಹವನ್ನೇ ಕೊಡುತ್ತೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಮಿಯಾ ಸರ್ಗಾವೈನಾ, ಉತ್ರುನ್ ಯೆಲ್ಲಿ ಝಿತ್ತಿ ಭಾಕ್ರಿ, ಹಿ ಭಾಕ್ರಿ ತುಮಿ ಖಾಲ್ಯಾಶಿ ತರ್, ತುಮ್ಕಾ ಮರಾನುಚ್‍ ನಾ, ಅನಿ ಹ್ಯಾ ಜಗಾಕ್ ಜಿವ್ ದಿವ್‍ಸಾಟಿ ಮನುನ್ ಮಿಯಾ ತುಮ್ಕಾ ದಿತಲಿ ಭಾಕ್ರಿ ಮಾಜೆ ಶರಿರ್, ಜಗ್ ಝಿತ್ತೊ ರ್‍ಹಾವ್ಕ್ ಪಾಜೆ ಮನುನ್ ತೆಚ್ಯಾ ಸಾಟ್ನಿ ಮಿಯಾ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:51
30 ತಿಳಿವುಗಳ ಹೋಲಿಕೆ  

ಆಮೇಲೆ ಯೇಸು ರೊಟ್ಟಿಯನ್ನು ತೆಗೆದುಕೊಂಡು, ಸ್ತೋತ್ರಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.


ಪರಲೋಕದಿಂದ ಇಳಿದುಬಂದು ಲೋಕಕ್ಕೆ ಜೀವವನ್ನು ಕೊಡುವ ದೇವರ ರೊಟ್ಟಿಯು ನಾನೇ,” ಎಂದರು.


ಪರಲೋಕದಿಂದ ಇಳಿದು ಬಂದ ಮನುಷ್ಯಪುತ್ರನಾದ ನನ್ನನ್ನು ಹೊರತು ಯಾರೂ ಪರಲೋಕಕ್ಕೆ ಏರಿ ಹೋದವರಿಲ್ಲ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನೇ ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.


ಹೊಸ ಹಾಗೂ ಸಜೀವವಾದ ಮಾರ್ಗವಿರುವುದರಿಂದ ಅತಿಪರಿಶುದ್ಧವಾದ ಸ್ಥಳವನ್ನು ಪ್ರವೇಶಿಸಲು ಭರವಸೆಯಿದೆ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ನೀವು ಸಜೀವ ಕಲ್ಲಾಗಿರುವವರ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿರಾಕರಿಸಿದರೂ ಅದು ದೇವರಿಂದ ಆರಿಸಿಕೊಂಡದ್ದೂ ಅವರಿಗೆ ಅಮೂಲ್ಯವಾದದ್ದೂ ಆಯಿತು.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.


ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


ತಂದೆಯು ಮಗನನ್ನು ಲೋಕ ರಕ್ಷಕರನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ನೋಡಿದ್ದೇವೆ ಮತ್ತು ಅದಕ್ಕೆ ನಾವು ಸಾಕ್ಷಿ ಹೇಳುತ್ತೇವೆ.


ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ.


ಕ್ರಿಸ್ತ ಯೇಸು ನಮ್ಮ ಪಾಪಗಳನ್ನು ಪರಿಹರಿಸುವ ಬಲಿಯಾಗಿದ್ದಾರೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನೂ ಪರಿಹರಿಸುತ್ತಾರೆ.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ಗಂಡಂದಿರೇ, ಕ್ರಿಸ್ತ ಯೇಸು ಸಭೆಯನ್ನು ಪ್ರೀತಿಸಿ, ಅದಕ್ಕಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಂತೆಯೇ ನೀವು ನಿಮ್ಮ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.


ಹೇಗೆಂದರೆ, ದೇವರು ಮನುಷ್ಯರ ಪಾಪಗಳನ್ನು ಅವರಿಗೆ ವಿರೋಧವಾಗಿ ಲೆಕ್ಕಿಸದೆ, ಕ್ರಿಸ್ತ ಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಂದಿಗೆ ಸಮಾಧಾನಪಡಿಸುತ್ತಿದ್ದಾರೆ. ಈ ಸಮಾಧಾನದ ಸಂದೇಶವನ್ನೇ ದೇವರು ನಮಗೊಪ್ಪಿಸಿ ಕೊಟ್ಟಿದ್ದಾರೆ.


ಪವಿತ್ರ ವೇದವು ಹೇಳಿದ ಪ್ರಕಾರ ನನ್ನಲ್ಲಿ ನಂಬಿಕೆಯಿಡುವವರ ಅಂತರಂಗದಿಂದ ಜೀವಜಲದ ಹೊಳೆಗಳು ಹರಿಯುವವು,” ಎಂದು ಕೂಗಿ ಹೇಳಿದರು.


ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಮೇಲೆ ಎತ್ತಿದ ಹಾಗೆಯೇ ಮನುಷ್ಯಪುತ್ರನಾದ ನನ್ನನ್ನು ಸಹ ಮೇಲಕ್ಕೆ ಏರಿಸಬೇಕು.


ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು,” ಎಂದು ಹೇಳಿದನು.


“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.


ಯೇಸು ಅವರಿಗೆ, “ನಾನೇ ಜೀವದ ರೊಟ್ಟಿ. ನನ್ನ ಬಳಿಗೆ ಬರುವವರಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವರಿಗೆ ಎಂದಿಗೂ ದಾಹವಾಗುವುದಿಲ್ಲ.


“ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ,” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಯೇಸುವಿನ ವಿಷಯವಾಗಿ ಗೊಣಗುಟ್ಟಿ,


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ.


ಯಾರು ತಿಂದರೂ ಸಾಯದೇ ಇರುವಂತೆ ಪರಲೋಕದಿಂದ ಇಳಿದು ಬಂದ ಜೀವದ ರೊಟ್ಟಿ ಇದೇ.


ಜೀವಿಸುವ ಪ್ರತಿಯೊಬ್ಬರೂ ನನ್ನಲ್ಲಿ ನಂಬಿಕೆಯಿಟ್ಟರೆ, ಅವರು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯಾ?” ಎಂದು ಕೇಳಿದ್ದಕ್ಕೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು