Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:54 - ಕನ್ನಡ ಸಮಕಾಲಿಕ ಅನುವಾದ

54 ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನಿತ್ಯಜೀವವನ್ನು ಹೊಂದಿದ್ದಾರೆ, ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿಯುವನೋ ಅವನು ನಿತ್ಯ ಜೀವವನ್ನು ಹೊಂದುವನು. ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನಲ್ಲಿ ನಿತ್ಯಜೀವ ಇರುತ್ತದೆ. ಅಲ್ಲದೆ ಅಂತಿಮ ದಿನದಂದು ನಾನು ಅವನನ್ನು ಜೀವಕ್ಕೆ ಎಬ್ಬಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನಿತ್ಯಜೀವವನ್ನು ಹೊಂದಿದ್ದಾನೆ; ಮತ್ತು ನಾನು ಅವನನ್ನು ಕಡೇದಿನದಲ್ಲಿ ಎಬ್ಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ನನ್ನ ದೇಹವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

54 ಜೆ ಕೊನ್ ಮಾಜೆ ಶರಿರ್ ಖಾತಾತ್, ಅನಿ ರಗಾತ್ ಫಿತಾತ್ ತೆಂಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವ್ತಾ, ಆಕ್ರಿಚ್ಯಾ ದಿಸಿ ಮಿಯಾ ತೆಂಕಾ ಝಿತ್ತೆ ಕರುನ್ ಉಟ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:54
12 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ.


ದೀನರು ಉಂಡು ತೃಪ್ತರಾಗುವರು; ಯೆಹೋವ ದೇವರನ್ನು ಹುಡುಕುವವರು ಅವರನ್ನು ಸ್ತುತಿಸುವರು; ಅಂಥವರ ಹೃದಯವು ಎಂದೆಂದಿಗೂ ಚೈತನ್ಯ ಹೊಂದಲಿ.


ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು.


ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.


ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು