Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:56 - ಕನ್ನಡ ಸಮಕಾಲಿಕ ಅನುವಾದ

56 ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನನ್ನಲ್ಲಿ ನೆಲೆಸಿರುತ್ತಾರೆ. ನಾನು ಅವರಲ್ಲಿ ನೆಲೆಸಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 ನನ್ನ ಮಾಂಸವನ್ನು ತಿಂದು, ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ನೆಲೆಸಿರುತ್ತಾನೆ. ನಾನು ಅವನಲ್ಲಿ ನೆಲೆಸಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56 ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ಇರುತ್ತಾನೆ; ನಾನು ಅವನಲ್ಲಿ ಇರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 ನನ್ನ ದೇಹವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ವಾಸಿಸುತ್ತಾನೆ. ನಾನು ಅವನಲ್ಲಿ ವಾಸಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

56 ಜೆ ಕೊನ್ ಮಾಜೆ ಶರಿರ್ ಖಾತಾತ್ ಅನಿ ರಗಾತ್ ಫಿತಾತ್ ತೆನಿ ಮಾಜ್ಯಾ ಭುತ್ತುರ್ ಜಿವನ್ ಕರ್‍ತಾತ್ ಅನಿ ಮಿಯಾ ತೆಂಚ್ಯಾ ಭುತ್ತುರ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:56
16 ತಿಳಿವುಗಳ ಹೋಲಿಕೆ  

ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.


ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವವನು ದೇವರಲ್ಲಿ ವಾಸಮಾಡುತ್ತಾನೆ ಮತ್ತು ದೇವರು ಅವನಲ್ಲಿ ವಾಸಮಾಡುತ್ತಾರೆ. ದೇವರು ನಮ್ಮಲ್ಲಿ ವಾಸಮಾಡುತ್ತಾರೆಂದು ದೇವರು ನಮಗೆ ದಯಪಾಲಿಸಿದ ಆತ್ಮನಿಂದಲೇ ನಾವು ಬಲ್ಲೆವು.


ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.


ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ಅವನು ನನ್ನ ವಾಕ್ಯವನ್ನು ಕೈಗೊಳ್ಳುವನು. ನನ್ನ ತಂದೆಯು ಅವನನ್ನು ಪ್ರೀತಿಸುವರು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಿವಾಸಮಾಡಿಕೊಳ್ಳುವೆವು.


“ಮಹೋನ್ನತ ದೇವರು ನಮ್ಮ ಆಶ್ರಯ,” ಎಂದು ಹೇಳುವದಾದರೆ, ಯೆಹೋವ ದೇವರು ನಿಮ್ಮ ನಿವಾಸವಾಗಿ ಮಾಡಿಕೊಂಡರೆ,


ದೇವರನ್ನು ಯಾರೂ ಎಂದೂ ನೋಡಿಲ್ಲ, ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರು ನಮ್ಮಲ್ಲಿ ನೆಲೆಗೊಂಡಿದ್ದಾರೆ ಮತ್ತು ಅವರ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.


ದೇವರ ಆಲಯಕ್ಕೂ ವಿಗ್ರಹಗಳಿಗೂ ಏನು ಒಪ್ಪಂದ? ನಾವು ಜೀವಿಸುವ ದೇವರ ಆಲಯವಾಗಿದ್ದೇವೆ. ದೇವರು ಹೀಗೆ ಹೇಳಿದ್ದಾರೆ: “ನಾನು ಅವರೊಂದಿಗೆ ವಾಸಿಸುವೆನು, ಅವರ ಮಧ್ಯದಲ್ಲಿ ತಿರುಗಾಡುವೆನು. ನಾನು ಅವರಿಗೆ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.”


ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಲಿ. ನೀವು ಪ್ರೀತಿಯಲ್ಲಿ ಬೇರೂರಿ ನೆಲೆಗೊಂಡು ನಿಂತು


“ಯೆಹೋವ ದೇವರೇ ನನ್ನ ಪಾಲು, ಆದ್ದರಿಂದ ನಾನು ಅವರಿಗಾಗಿ ಕಾದಿರುತ್ತೇನೆ,” ಎಂದು ನಾನು ನನ್ನೊಳಗೆ ಎಂದುಕೊಳ್ಳುವೆನು.


ಮಹೋನ್ನತ ದೇವರ ಆಶ್ರಯದಲ್ಲಿ ವಾಸಿಸುವವರು ಸರ್ವಶಕ್ತರ ನೆರಳಿನಲ್ಲಿ ವಿಶ್ರಮಿಸುವರು.


ಯೆಹೋವ ದೇವರೇ, ತಲತಲಾಂತರಗಳಲ್ಲಿ ನೀವು ನಮ್ಮ ವಾಸಸ್ಥಾನವಾಗಿದ್ದೀರಿ.


ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.


ನೀವಂತೂ ಯಾವುದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಹಾಗಿದ್ದರೆ, ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿರುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು