Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:63 - ಕನ್ನಡ ಸಮಕಾಲಿಕ ಅನುವಾದ

63 ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

63 ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

63 ಸಜ್ಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

63 ಬದುಕಿಸುವಂಥದು ಆತ್ಮವೇ; ಮಾಂಸವು ಯಾವದಕ್ಕೂ ಬರುವದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಅವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

63 ಒಬ್ಬನಿಗೆ ಜೀವವನ್ನು ಕೊಡುವಂಥದ್ದು ದೈಹಿಕ ಸಂಗತಿಗಳಲ್ಲ. ಜೀವವನ್ನು ಕೊಡುವಂಥದ್ದು ದೇವರಾತ್ಮ. ನಾನು ನಿಮಗೆ ಹೇಳಿದ ಸಂಗತಿಗಳು ಆತ್ಮಿಕ ಸಂಗತಿಗಳಾಗಿವೆ. ಆದ್ದರಿಂದ ಈ ಸಂಗತಿಗಳೇ ಜೀವವನ್ನು ಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

63 ದೆವಾಚೊ ಆತ್ಮೊ ಜಿವ್ ದಿತಾ, ಮಾನ್ಸಾಚ್ಯಾ ತಾಕ್ತಿಚೊ ಕಾಯ್ಬಿ ಫಾಯ್ದೊ ನಾ. ಮಿಯಾ ತುಮ್ಚ್ಯಾ ಕಡೆ ಬೊಲಲ್ಲ್ಯಾ ಹ್ಯಾ ಗೊಸ್ಟಿಯಾ ದೆವಾಚ್ಯಾ ಆತ್ಮೊ ಹೊಲಾ ಹ್ಯೊ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:63
31 ತಿಳಿವುಗಳ ಹೋಲಿಕೆ  

ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ.


ನಾವು ದೇವರ ಆತ್ಮದಿಂದ ಜೀವಿಸುತ್ತಿರಲಾಗಿ ಆತ್ಮರನ್ನನುಸರಿಸಿ ನಡೆಯೋಣ.


ನಿಮ್ಮ ಸೂತ್ರಗಳನ್ನು ನಾನು ಎಂದಿಗೂ ಮರೆಯುವುದಿಲ್ಲ, ಏಕೆಂದರೆ ಅವುಗಳಿಂದ ನನ್ನ ಜೀವವನ್ನು ಪರಿಪಾಲಿಸಿದ್ದೀರಿ.


ಸೀಮೋನ್ ಪೇತ್ರನು ಯೇಸುವಿಗೆ, “ಸ್ವಾಮೀ, ನಾವು ಯಾರ ಬಳಿಗೆ ಹೋಗೋಣ? ನಿಮ್ಮಲ್ಲಿಯೇ ನಿತ್ಯಜೀವದ ವಾಕ್ಯಗಳಿವೆ.


ನಿಮ್ಮ ವಾಗ್ದಾನವು ನನ್ನ ಜೀವದ ಸಂರಕ್ಷಣೆಯಾಗಿದೆ. ಅವು ನನ್ನ ಸಂಕಷ್ಟಗಳಲ್ಲಿ ಆದರಣೆಯಾಗಿವೆ.


ಏಕೆಂದರೆ ನೀವು ತಿರುಗಿ ಹುಟ್ಟಿದವರಾಗಿದ್ದೀರಲ್ಲಾ! ಆ ಜನ್ಮವು ನಾಶವಾಗುವ ಬೀಜದಿಂದಲ್ಲ. ಆದರೆ ನಾಶವಾಗದಂಥದ್ದರಿಂದ ಸಜೀವವಾದ ಸದಾಕಾಲವಿರುವ ದೇವರ ವಾಕ್ಯದ ಮೂಲಕ ಆಗಿದೆ.


ನಿಮ್ಮ ವಾಕ್ಯಗಳನ್ನು ತೆರೆಯುವಾಗ, ಅದು ಬೆಳಕನ್ನು ಕೊಡುವುದು; ಅದು ಮುಗ್ಧರಿಗೆ ಅರಿವನ್ನು ನೀಡುವುದು.


ಏಕೆಂದರೆ ಇದು ನಿಮಗೆ ಕೇವಲ ವ್ಯರ್ಥವಾದದ್ದಲ್ಲ. ಇದು ನಿಮಗೆ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ,” ಎಂದು ಹೇಳಿದನು.


“ಮೊದಲನೆಯ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು,” ಎಂದು ಬರೆದಿದೆಯಲ್ಲವೇ? ಕಡೇ ಆದಾಮನು ಜೀವಕೊಡುವ ಆತ್ಮನಾದನು.


ಆದಕಾರಣ, ತಕ್ಕ ವಾಕ್ಯವನ್ನು ಕೇಳುವುದರಿಂದಲೇ ವಿಶ್ವಾಸವು ಬರುತ್ತದೆ, ಅದು ಕ್ರಿಸ್ತನ ವಾಕ್ಯವನ್ನು ಕೇಳುವುದರಿಂದಲೇ ಬರುತ್ತದೆ.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ಈ ಕಾರಣಕ್ಕಾಗಿಯೇ ನಂಬುವವರಾದ ನಿಮ್ಮಲ್ಲಿ ಕಾರ್ಯಸಾಧಿಸುವ ದೇವರ ವಾಕ್ಯವನ್ನು ನಮ್ಮಿಂದ ನೀವು ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ, ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.


ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.


ಹೀಗಿರಲು ಯೆಹೋವ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ, ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು ಆಗ ಅವನು ಜೀವಿಸುವ ವ್ಯಕ್ತಿಯಾದನು.


ಈ ನೀರು ದೀಕ್ಷಾಸ್ನಾನವನ್ನು ಸೂಚಿಸುವಂತದ್ದಾಗಿದೆ. ಈ ದೀಕ್ಷಾಸ್ನಾನ ಕ್ರಿಸ್ತ ಯೇಸುವಿನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿಯು ಬೇಕೆಂದು ದೇವರನ್ನು ಬೇಡಿಕೊಳ್ಳುವಂಥದ್ದಾಗಿದೆ.


ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು.


ವಿಚಿತ್ರವಾದ ವಿವಿಧ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ಏಕೆಂದರೆ ಕೃಪೆಯ ಮೂಲಕ ಹೃದಯವನ್ನು ಬಲಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳಲ್ಲಿ ಮಗ್ನರಾದವರು, ಅವುಗಳಿಂದ ಏನೂ ಪ್ರಯೋಜನ ಹೊಂದಲಿಲ್ಲ.


ಸುನ್ನತಿಯಾಗುವುದರಿಂದ ಇಲ್ಲವೆ, ಸುನ್ನತಿಯಾಗದೆ ಇರುವುದರಿಂದ ಏನೂ ಪ್ರಯೋಜನವಿಲ್ಲ. ಆದರೆ ಹೊಸ ಸೃಷ್ಟಿಯೇ ಬೇಕು.


ನೀನು ನಿಯಮವನ್ನು ಕೈಕೊಳ್ಳುವವನಾದರೆ, ಸುನ್ನತಿ ಪ್ರಯೋಜನಕರವಾಗಿರುವುದು. ಆದರೆ ನೀನು ನಿಯಮವನ್ನು ಮೀರಿ ನಡೆಯುವವನಾದರೆ, ನಿನಗೆ ಸುನ್ನತಿಯಾಗಿದ್ದರೂ ಇಲ್ಲದಂತಾಗಿರುವುದು.


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ; ಸದುಪದೇಶವನ್ನು ಕಾಪಾಡಿಕೋ, ಏಕೆಂದರೆ ಅದು ನಿನ್ನ ಜೀವವಾಗಿದೆ.


ತಂದೆ ಸತ್ತವರನ್ನು ಎಬ್ಬಿಸಿ ಬದುಕಿಸುವಂತೆಯೇ ಪುತ್ರನೂ ತನಗಿಷ್ಟ ಬಂದವರನ್ನು ಬದುಕಿಸುತ್ತಾರೆ.


“ಹೋಗಿರಿ, ದೇವಾಲಯದ ಅಂಗಳದಲ್ಲಿ ನಿಂತುಕೊಂಡು, ಈ ಜೀವವಾಕ್ಯಗಳನ್ನೆಲ್ಲಾ ಜನರಿಗೆ ಬೋಧಿಸಿರಿ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು