Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:70 - ಕನ್ನಡ ಸಮಕಾಲಿಕ ಅನುವಾದ

70 ಅದಕ್ಕೆ ಯೇಸು ಅವರಿಗೆ, “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿಕೊಂಡೆನಲ್ಲವೇ? ಆದರೆ ನಿಮ್ಮಲ್ಲಿಯೂ ಒಬ್ಬನು ಪಿಶಾಚನಾಗಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

70 ಅದಕ್ಕೆ ಯೇಸು “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

70 ಆಗ ಯೇಸು, “ನಿಮ್ಮಲ್ಲಿ ಹನ್ನೆರಡುಮಂದಿಯನ್ನು ನಾನು ಆಯ್ದುಕೊಂಡೆನಲ್ಲವೆ? ಆದರೂ ನಿಮ್ಮಲ್ಲಿ ಒಬ್ಬನು ಪಿಶಾಚಿಯಾಗಿ ಇದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

70 ಅದಕ್ಕೆ ಯೇಸು - ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೋ? ನಿಮ್ಮಲ್ಲಿಯೂ ಒಬ್ಬನು ಸೈತಾನನ ಮಗನಾಗಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

70 ಬಳಿಕ ಯೇಸು, “ನಾನು ಆರಿಸಿಕೊಂಡ ಹನ್ನೆರಡು ಮಂದಿ ನೀವೇ. ಆದರೆ ನಿಮ್ಮಲ್ಲಿರುವ ಒಬ್ಬನು ಸೈತಾನನ ಮಗನಾಗಿದ್ದಾನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

70 ತನ್ನಾ ಜೆಜುನ್ ಜವಾಬ್ ದಿಲ್ಲ್ಯಾನ್ “ತುಮ್ಚ್ಯಾ ಬಾರಾ ಜಾನಾಕ್ನಿ ಮಿಯಾಚ್ ಎಚುಕ್ನಾ ಕಾಯ್? ಜಾಲ್ಯಾರ್‍ಬಿ ತುಮ್ಚ್ಯಾ ಮದ್ದಿ ಎಕ್ಲೊ ಗಿರೊ ಹಾಯ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:70
21 ತಿಳಿವುಗಳ ಹೋಲಿಕೆ  

ಅವನು ರೊಟ್ಟಿಯ ತುಂಡನ್ನು ತೆಗೆದುಕೊಂಡು ತಿಂದನು. ಅನಂತರ ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, “ನೀನು ಮಾಡುವುದನ್ನು ಬೇಗನೆ ಮಾಡು,” ಎಂದು ಹೇಳಿದರು.


ಸಾಯಂಕಾಲ ಊಟದ ಸಮಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಯೋಚನೆಯನ್ನು, ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಹಾಕಿದ್ದನು.


ನಾನು ಇವರೊಡನೆ ಇದ್ದಾಗ ನೀವು ನನಗೆ ಕೊಟ್ಟ ನಿಮ್ಮ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಪವಿತ್ರ ವಾಕ್ಯವು ನೆರವೇರುವಂತೆ ಆ ನಾಶದ ಮಗನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.


“ನಾನು ನಿಮ್ಮೆಲ್ಲರನ್ನು ಕುರಿತು ಮಾತನಾಡುತ್ತಿಲ್ಲ. ನಾನು ಆರಿಸಿಕೊಂಡವರನ್ನು ನಾನು ಬಲ್ಲೆನು. ಆದರೆ ‘ನನ್ನ ಸಂಗಡ ರೊಟ್ಟಿಯನ್ನು ತಿಂದವನೇ, ನನಗೆ ದ್ರೋಹ ಬಗೆದನು,’ ಎಂಬ ಪವಿತ್ರ ವಾಕ್ಯವು ನೆರವೇರಬೇಕಾಗಿದೆ.


ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ,” ಎಂದರು. ನಂಬದವರು ಯಾರೆಂದೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸು ಮೊದಲಿನಿಂದಲೂ ತಿಳಿದಿದ್ದರು.


ಪಾಪದಲ್ಲಿ ಮುಂದುವರೆಯುವವರು ಸೈತಾನನಿಗೆ ಸೇರಿದವರು. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ದೇವಪುತ್ರ ಯೇಸು ಸೈತಾನನ ಕೆಲಸಗಳನ್ನು ಲಯ ಮಾಡುವುದಕ್ಕೋಸ್ಕರವೇ ಪ್ರತ್ಯಕ್ಷರಾದರು.


ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು. ಚಾಡಿ ಹೇಳದವರೂ ಸ್ವಸ್ಥ ಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.


ಈ ಯೂದನು ನಮ್ಮಲ್ಲಿ ಒಬ್ಬನಾಗಿದ್ದು ಈ ಸೇವೆಯಲ್ಲಿ ಪಾಲುಗಾರನಾಗಿದ್ದನು.”


ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ಪ್ರೀತಿಸುತ್ತಿತ್ತು. ಆದರೆ ನೀವು ಲೋಕದವರಲ್ಲದೆ ಇರುವುದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.


ಯೇಸು ಇವುಗಳನ್ನು ಹೇಳುತ್ತಾ ಆತ್ಮದಲ್ಲಿ ನೊಂದುಕೊಂಡವರಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುವನು,” ಎಂದು ಸ್ವಷ್ಟವಾಗಿ ಹೇಳಿದರು.


ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.


ಅದೇ ಪ್ರಕಾರ, ವೃದ್ಧಸ್ತ್ರೀಯರು ನಡತೆಯಲ್ಲಿ ಭಕ್ತಿಗೆ ತಕ್ಕ ಹಾಗೆ ಇರುವವರಾಗಿರಬೇಕು. ಅವರು ಸುಳ್ಳಾಗಿ ದೂರುವವರೂ ಮದ್ಯಾಸಕ್ತರೂ ಆಗಿರದೆ, ಒಳ್ಳೆಯವುಗಳನ್ನು ಬೋಧಿಸುವವರಾಗಿರಬೇಕು ಎಂದು ಅವರಿಗೆ ಉಪದೇಶಿಸು.


“ಎಲೈ ಸೈತಾನನ ಮಗನೇ, ನೀತಿಗೆಲ್ಲಾ ವೈರಿಯೇ, ನಿನ್ನಲ್ಲಿ ಎಲ್ಲಾ ತರದ ಮೋಸವೂ ಕುತಂತ್ರವೂ ತುಂಬಿವೆ. ಕರ್ತದೇವರ ಸನ್ಮಾರ್ಗಗಳಿಗೆ ಅಡ್ಡಿಯಾಗುವುದನ್ನು ನೀನೆಂದೂ ನಿಲ್ಲಿಸುವುದಿಲ್ಲವೋ?


ಯೇಸು ಮತ್ತು ಅವರ ಶಿಷ್ಯರು ಮದುವೆಗೆ ಆಮಂತ್ರಿತರಾಗಿದ್ದರು.


ಆದಕಾರಣ ಯೇಸು ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಲು,


ಸೀಮೋನನ ಮಗ ಇಸ್ಕರಿಯೋತ ಯೂದನ ವಿಷಯವಾಗಿ ಯೇಸು ಹೀಗೆ ಹೇಳಿದರು. ಏಕೆಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದ ಇವನೇ ಯೇಸುವನ್ನು ಹಿಡಿದು ಕೊಡುವುದಕ್ಕಿದ್ದನು.


ಆದರೆ ಯೇಸು ಬಂದಾಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ದಿದುಮನು ಎನಿಸಿಕೊಂಡ ತೋಮನು ಅವರ ಸಂಗಡ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು