Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:13 - ಕನ್ನಡ ಸಮಕಾಲಿಕ ಅನುವಾದ

13 ಆದರೂ ಯೆಹೂದ್ಯರ ಭಯದ ನಿಮಿತ್ತ ಯೇಸುವಿನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಬಹಿರಂಗವಾಗಿ ಮಾತನಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೆಹೂದ್ಯರಿಗೆ ಅಂಜಿ ಅವರಾರೂ ಬಹಿರಂಗವಾಗಿ ಮಾತನಾಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಧಾರಾಳವಾಗಿ ಮಾತಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಯೇಸುವಿನ ಬಗ್ಗೆ ಬಹಿರಂಗವಾಗಿ ಮಾತಾಡಲು ಆ ಜನರಲ್ಲಿ ಯಾರಿಗೂ ಸಾಕಷ್ಟು ಧೈರ್ಯವಿರಲಿಲ್ಲ. ಜನರು ಯೆಹೂದ್ಯ ನಾಯಕರುಗಳಿಗೆ ಹೆದರಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ಕೊನ್ಬಿ ತ್ಯೆಚ್ಯಾ ವಿಶಯಾತ್ ಫೊಡುನ್ ಬೊಲುಕ್ನ್ಯಾತ್, ಕಶ್ಯಾಕ್ ಮಟ್ಲ್ಯಾರ್ ತೆನಿ ಜುದೆವಾಂಚ್ಯಾ ಅದಿಕಾರ್‍ಯಾಕ್ನಿ ಭಿಂವುಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:13
13 ತಿಳಿವುಗಳ ಹೋಲಿಕೆ  

ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಭಯಪಟ್ಟಿದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ, ಅವರನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯ ನಾಯಕರು ಈ ಮೊದಲೇ ಗೊತ್ತುಮಾಡಿದ್ದರು.


ತರುವಾಯ ಯೆಹೂದ್ಯರ ಭಯದ ನಿಮಿತ್ತದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಯೇಸುವಿನ ದೇಹವನ್ನು ತೆಗೆದುಕೊಂಡು ಹೋದನು.


ಅದೇ ಭಾನುವಾರದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿದ್ದ ಮನೆಯ ಬಾಗಿಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದು ಅವರಿಗೆ ಹೇಳಿದರು.


ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು, ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನನ್ನು ಕೊಲ್ಲಲಾದ ದಿನಗಳಲ್ಲಿಯೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಅಲ್ಲಗಳೆಯಲಿಲ್ಲ.


ಅದಕ್ಕೆ ಅವರು, “ನೀನು ಪಾಪದಲ್ಲಿಯೇ ಪೂರ್ಣವಾಗಿ ಹುಟ್ಟಿದವನು. ನೀನು ನಮಗೆ ಬೋಧಿಸುತ್ತೀಯಾ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ಇವನು ಒಂದು ರಾತ್ರಿ ಯೇಸುವಿನ ಬಳಿಗೆ ಬಂದು, “ಗುರುವೇ, ನೀವು ದೇವರ ಬಳಿಯಿಂದ ಬಂದ ಬೋಧಕರೆಂದು ನಾವು ಬಲ್ಲೆವು. ಏಕೆಂದರೆ ದೇವರು ಒಬ್ಬನ ಸಂಗಡ ಇಲ್ಲದಿದ್ದರೆ ನೀವು ಮಾಡುವ ಸೂಚಕಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು,” ಎಂದನು.


ಇವುಗಳಾದ ಮೇಲೆ ಯೇಸು ಗಲಿಲಾಯದ ಪ್ರಾಂತದಲ್ಲಿ ಸಂಚಾರ ಮಾಡಿದರು. ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದುದರಿಂದ ಯೂದಾಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.


ಯೆಹೂದ್ಯರು ಆ ಹಬ್ಬದಲ್ಲಿ, “ಆ ಮನುಷ್ಯನು ಎಲ್ಲಿ?” ಎಂದು ಹುಡುಕುತ್ತಿದ್ದರು.


ಯೆಹೂದ್ಯರು ಆಶ್ಚರ್ಯಪಟ್ಟು, “ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಷ್ಟೆಲ್ಲಾ ಜ್ಞಾನ ತಿಳಿದಿರುವುದು ಹೇಗೆ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು