Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:14 - ಕನ್ನಡ ಸಮಕಾಲಿಕ ಅನುವಾದ

14 ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾಲಯಕ್ಕೆ ಹೋಗಿ ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹಬ್ಬದ ಮಧ್ಯಕಾಲದಲ್ಲಿ ಯೇಸು ದೇವಾಲಯಕ್ಕೆ ಹೋಗಿ ಬೋಧಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹಬ್ಬವು ಅರ್ಧಕ್ಕೆ ಅರ್ಧ ಮುಗಿಯತು. ಆಗ ಯೇಸು ಮಹಾದೇವಾಲಯಕ್ಕೆ ಹೋಗಿ ಬೋಧನೆ ಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಜಾತ್ರೆಯ ಮಧ್ಯಕಾಲದಲ್ಲಿ ಯೇಸು ದೇವಾಲಯಕ್ಕೆ ಹೋಗಿ ಬೋಧಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹಬ್ಬದಲ್ಲಿ ಸುಮಾರು ಅರ್ಧಭಾಗ ಮುಗಿದುಹೋಗಿತ್ತು. ಆಗ ಯೇಸು ದೇವಾಲಯಕ್ಕೆ ಹೋಗಿ ಉಪದೇಶಿಸಲು ಆರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಸನ್ ಜಗ್ಗೊಳ್ ಅರ್ದೊ ಹೊಲ್ಲೊ ತನ್ನಾ ಜೆಜು ಗುಡಿತ್ ಗೆಲೊ, ಅನಿ ಶಿಕ್ವುಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:14
16 ತಿಳಿವುಗಳ ಹೋಲಿಕೆ  

ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ. ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ತಂದೆಯನ್ನು ನೀವು ಅರಿತವರಲ್ಲ.


ಯೇಸು ಪ್ರತಿದಿನವೂ ದೇವಾಲಯದಲ್ಲಿ ಬೋಧಿಸುತ್ತಿದ್ದರು. ಆದರೆ ಮುಖ್ಯಯಾಜಕರೂ ನಿಯಮ ಬೋಧಕರೂ ಜನರ ಪ್ರಮುಖರೂ ಯೇಸುವನ್ನು ಕೊಲ್ಲುವುದಕ್ಕೆ ಹವಣಿಸುತ್ತಿದ್ದರು.


ಯೇಸು ಅವನಿಗೆ, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿಬರುವ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸುತ್ತಿದ್ದೆನು. ನಾನು ಮುಚ್ಚುಮರೆಯಾಗಿ ಏನೂ ಮಾತನಾಡಲಿಲ್ಲ.


ಬೆಳಿಗ್ಗೆ ಯೇಸು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಅವರ ಬಳಿಗೆ ಬಂದರು. ಯೇಸು ಕುಳಿತುಕೊಂಡು ಅವರಿಗೆ ಬೋಧಿಸಿದರು.


ಹಬ್ಬದ ಆ ಮಹಾದಿವಸವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು, “ಯಾರಿಗಾದರೂ ಬಾಯಾರಿಕೆಯಾಗಿದ್ದರೆ ಅವರು ನನ್ನ ಬಳಿಗೆ ಬಂದು ಕುಡಿಯಲಿ.


ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.


ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ಇಗೋ, ನೀನು ಸ್ವಸ್ಥನಾಗಿರುವೆ, ಹೆಚ್ಚಿನ ಕೇಡು ಬಾರದಂತೆ ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.


ಅದೇ ಗಳಿಗೆಯಲ್ಲಿ ಯೇಸು ಜನಸಮೂಹಕ್ಕೆ, “ಒಬ್ಬ ಕಳ್ಳನನ್ನು ಹಿಡಿಯುವುದಕ್ಕೆ ಬರುವಂತೆ ಖಡ್ಗಗಳೊಂದಿಗೆ ದೊಣ್ಣೆಗಳೊಂದಿಗೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ? ನಾನು ದಿನಾಲು ನಿಮ್ಮ ಸಂಗಡ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ.


ಯೇಸು ದೇವಾಲಯದ ಅಂಗಳದೊಳಗೆ ಹೋಗಿ ಮಾರುತ್ತಿದ್ದವರನ್ನೂ ಕೊಂಡುಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ಹಣ ವಿನಿಮಯ ಮಾಡುತ್ತಿದ್ದವರ ಮೇಜುಗಳನ್ನೂ ಪಾರಿವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿದರು.


“ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


“ ‘ಎರಡನೆಯ ದಿವಸದಲ್ಲಿ ಕಳಂಕವಿಲ್ಲದ ಹನ್ನೆರಡು ಎಳೆಯ ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,


“ ‘ಮೂರನೆಯ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,


ಯೇಸು ದೇವಾಲಯದ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಸ್ಥಳದಲ್ಲಿ ಬೋಧಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದರು. ಆದರೆ ಯೇಸುವಿನ ಸಮಯ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು