ಯೋಹಾನ 7:18 - ಕನ್ನಡ ಸಮಕಾಲಿಕ ಅನುವಾದ18 ತಮ್ಮಷ್ಟಕ್ಕೆ ತಾವೇ ಮಾತನಾಡುವವರು ತಮ್ಮ ಸ್ವಂತ ಮಹಿಮೆಯನ್ನು ಹುಡುಕುತ್ತಾರೆ. ಆದರೆ ತನ್ನನ್ನು ಕಳುಹಿಸಿದ ತಂದೆಯ ಮಹಿಮೆಯನ್ನು ಹುಡುಕುವ ಮನುಷ್ಯನು ಸತ್ಯವಂತನು; ಆತನಲ್ಲಿ ಅನೀತಿಯಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸ್ವಂತ ಕಲ್ಪನೆಯಿಂದ ಮಾತನಾಡುವವನು ತನ್ನ ಸ್ವಪ್ರತಿಷ್ಠೆಯನ್ನು ಬಯಸುತ್ತಾನೆ. ತನ್ನನ್ನು ಕಳುಹಿಸಿದಾತನ ಪ್ರತಿಷ್ಠೆಯನ್ನು ಬಯಸುವವನು ಪ್ರಾಮಾಣಿಕನು. ಕಪಟವೆಂಬುದು ಅವನಲ್ಲಿ ಇರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಕಲ್ಪಿಸಿ ಹೇಳುವವನು ತನಗೆ ಮಾನ ಬರಬೇಕೆಂದು ಅಪೇಕ್ಷಿಸುತ್ತಾನೆ; ತನ್ನನ್ನು ಕಳುಹಿಸಿದವನಿಗೆ ಮಾನಬರಬೇಕೆಂದು ಅಪೇಕ್ಷಿಸುವವನು ಸತ್ಯವಂತನು, ಅಧರ್ಮವು ಅವನಲ್ಲಿ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ತನ್ನ ಸ್ವಂತ ಆಲೋಚನೆಗಳನ್ನು ಉಪದೇಶಿಸುವವನು, ತನಗೇ ಘನತೆಯನ್ನು ಉಂಟುಮಾಡಿಕೊಳ್ಳಲು ಪ್ರಯತ್ನಿಸುತ್ತಾನೆ. ಆದರೆ ತನ್ನನ್ನು ಕಳುಹಿಸಿದಾತನಿಗೆ ಘನತೆಯನ್ನು ಉಂಟುಮಾಡಲು ಪ್ರಯತ್ನಿಸುವವನು ಸತ್ಯವನ್ನೇ ಹೇಳುತ್ತಾನೆ. ಆತನಲ್ಲಿ ಯಾವ ಸುಳ್ಳೂ ಇಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಜೆ ಕೊನ್ ಸ್ವತಾಚ್ಯಾ ಅದಿಕಾರ್‍ಯಾನ್ ಬೊಲ್ತ್ಯಾತ್, ತೆನಿ ಅಪ್ನಾಚ್ಯಾ ಅಪ್ನಿ ಮಹಿಮಾ ಜೊಡುನ್ ಘೆವ್ಕ್ ಕಟ್ಪಟ್ತಾತ್. ಖರೆ ಜೆ ಕೊನಾಕ್ ತೆಕಾ ಧಾಡುನ್ ದಿಲ್ಲ್ಯಾಚಿ ಮಹಿಮಾ ಪಾಜೆ ತೊ ನಿಯತ್ತಿಚೊ, ಅನಿ ತೆಚ್ಯಾ ಭುತ್ತುರ್ ಕಾಯ್ಬಿ ಝುಟೆ ಮನ್ತಲೆ ನಾ. ಅಧ್ಯಾಯವನ್ನು ನೋಡಿ |