Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:19 - ಕನ್ನಡ ಸಮಕಾಲಿಕ ಅನುವಾದ

19 ಮೋಶೆಯು ನಿಮಗೆ ನಿಯಮವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಯಾರೂ ಆ ನಿಯಮದಂತೆ ನಡೆಯುವುದಿಲ್ಲ. ನೀವು ನನ್ನನ್ನು ಕೊಲ್ಲಲು ಹುಡುಕುವುದೇಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮೋಶೆ ಕೊಟ್ಟ ಧರ್ಮಶಾಸ್ತ್ರ ನಿಮಗಿದೆಯಲ್ಲವೇ, ಆದರೂ ಅದಕ್ಕೆ ಸರಿಯಾಗಿ ನಡೆಯುವವರಾರೂ ನಿಮ್ಮಲ್ಲಿ ಇಲ್ಲ. ನನ್ನನ್ನು ಕೊಲ್ಲಬೇಕೆಂದು ನೀವು ಹವಣಿಸುವುದೇಕೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಟ್ಟಿದ್ದರೂ ನಿಮ್ಮಲ್ಲಿ ಒಬ್ಬನಾದರೂ ಧರ್ಮಶಾಸ್ತ್ರದಂತೆ ನಡೆಯುವದಿಲ್ಲವಲ್ಲಾ; ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ? ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಟ್ಟನು. ಹೌದಲ್ಲವೇ? ಆದರೆ ನಿಮ್ಮಲ್ಲಿ ಒಬ್ಬರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುತ್ತಿಲ್ಲ. ನೀವು ನನ್ನನ್ನು ಕೊಲ್ಲಲು ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತುಮ್ಕಾ ಮೊಯ್ಜೆನ್ ಖಾಯ್ದೆ ದಿಲ್ಲೆ ಹೊಯ್ ಕಿ ನ್ಹಯ್? ಖರೆ ತುಮ್ಚ್ಯಾತ್ಲೊ ಕೊನ್ಬಿ ಹೆ ಖಾಯ್ದೆ ಪಾಳಿನಾ. ತುಮಿ ಮಾಕಾ ಜಿವಾನಿ ಮಾರುಕ್ ಕಶ್ಯಾಕ್ ಬಗುಲ್ಯಾಸಿ?" ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:19
27 ತಿಳಿವುಗಳ ಹೋಲಿಕೆ  

ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.


ಅವರು ಆ ದಿನದಿಂದ ಯೇಸುವನ್ನು ಕೊಲ್ಲಬೇಕೆಂಬ ಒಳಸಂಚು ಮಾಡಿಕೊಂಡರು.


ಇವುಗಳಾದ ಮೇಲೆ ಯೇಸು ಗಲಿಲಾಯದ ಪ್ರಾಂತದಲ್ಲಿ ಸಂಚಾರ ಮಾಡಿದರು. ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದುದರಿಂದ ಯೂದಾಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.


ಆದರೆ ಫರಿಸಾಯರು ಹೊರಗೆ ಹೋಗಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಆಲೋಚನೆಮಾಡಿದರು.


ಸುನ್ನತಿ ಮಾಡಿಸಿಕೊಳ್ಳುವ ತಾವಾದರೋ ನಿಯಮವನ್ನು ಕೈಗೊಂಡು ನಡೆಯುವುದಿಲ್ಲ. ಆದರೆ ಅವರು ನಿಮ್ಮ ಶರೀರದ ಸುನ್ನತಿಯಿಂದ ಹೆಚ್ಚಳಪಡುವಂತೆ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.


ಯಾಕೋಬನ ಸಂತತಿಯವರಾದ ನಮಗೆ, ಮೋಶೆಯು ನಿಯಮವನ್ನು ಸೊತ್ತಾಗಿ ಕೊಟ್ಟಿದ್ದಾನೆ.


ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ಮಾಡಬೇಡಿರಿ. ಹಿರಿಯನನ್ನು ಹೇಗೋ ಹಾಗೆಯೇ ಕಿರಿಯನನ್ನು ಕೇಳಬೇಕು. ಯಾವ ಮನುಷ್ಯನಿಗೂ ಹೆದರಬೇಡಿರಿ. ಆದರೆ ನ್ಯಾಯ ತೀರ್ವಿಕೆಯು ದೇವರದೇ. ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ, ನಾನು ಅದನ್ನು ತೀರಿಸುವೆನು,” ಎಂದು ಹೇಳಿದೆ.


ಹಾಗಾದರೆ ಮೋಶೆಯ ನಿಯಮವನ್ನು ಏಕೆ ಕೊಡಲಾಯಿತು? ಅಪರಾಧಗಳ ಅರಿವನ್ನು ಮೂಡಿಸುವುದಕ್ಕಾಗಿ, ನಿಯಮವು ಸೇರಿಸಲಾಯಿತು. ಇದು ಆ ಸಂತತಿಯಾದಾತನು ಬರುವ ವಾಗ್ದಾನದ ತನಕ ಮಾತ್ರವಾಗಿರುವುದು. ಹೀಗೆ ನಿಯಮವು ದೇವದೂತರ ಮುಖಾಂತರ ಮಧ್ಯಸ್ಥನಾದ ಮೋಶೆಯ ಕೈಯಲ್ಲಿ ಕೊಡಲಾಯಿತು.


ಇವನು ಇಸ್ರಾಯೇಲರು ಅರಣ್ಯದಲ್ಲಿ ದೊಡ್ಡಗುಂಪಾಗಿದ್ದಾಗ ಅವರ ಮಧ್ಯದಲ್ಲಿದ್ದವನು. ಸೀನಾಯಿ ಬೆಟ್ಟದ ಮೇಲೆ ಅವನೊಂದಿಗೆ ಮಾತನಾಡಿದ ದೇವದೂತನೊಂದಿಗಿದ್ದವನು. ಇವನು ನಮ್ಮ ಪಿತೃಗಳೊಂದಿಗೂ ಮಧ್ಯಸ್ಥನಾಗಿ ಇದ್ದವನು. ನಮಗೆ ಕೊಡುವುದಕ್ಕಾಗಿ ಜೀವ ವಾಕ್ಯಗಳನ್ನು ಸ್ವೀಕರಿಸಿದವನು ಈ ಮೋಶೆಯೇ.


ತಿರುಗಿ ಅವರು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಯೇಸು ಅವರ ಕೈಯಿಂದ ತಪ್ಪಿಸಿಕೊಂಡು ಹೋದರು.


ಆಮೇಲೆ ಯೆರೂಸಲೇಮಿನ ಕೆಲವರು, “ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ?


“ತಂದೆಯ ಮುಂದೆ ನಿಮ್ಮ ಮೇಲೆ ನಾನು ದೂರು ಹೇಳುತ್ತಿರುವೆನೆಂದು ನೀವು ನೆನಸಬೇಡಿರಿ. ನಿಮ್ಮ ಮೇಲೆ ದೂರು ಹೇಳುವವನು ಒಬ್ಬನಿದ್ದಾನೆ; ನೀವು ನಿರೀಕ್ಷೆಯಿಟ್ಟಿರುವ ಮೋಶೆಯೇ.


ಯೇಸು ಸಬ್ಬತ್ ದಿನವನ್ನು ಮುರಿದದ್ದು ಅಲ್ಲದೆ ದೇವರನ್ನು ತಮ್ಮ ಸ್ವಂತ ತಂದೆ ಎಂದು ಹೇಳಿ ತಮ್ಮನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಮಾಡಿದರು.


ಯೇಸು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು.


ಫರಿಸಾಯರು ಅಲ್ಲಿಂದ ಹೊರಗೆ ಹೋಗಿ ಕೂಡಲೇ ಹೆರೋದ್ಯರೊಂದಿಗೆ ಸೇರಿಕೊಂಡು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಒಳಸಂಚು ಮಾಡಿದರು.


ಆಗ ಯೇಸು ಅವರನ್ನು, “ಸಬ್ಬತ್ ದಿನದಲ್ಲಿ ಒಳ್ಳೆಯದನ್ನು ಮಾಡುವುದು ನಿಯಮಕ್ಕೆ ಸಮ್ಮತವೋ ಅಥವಾ ಕೆಟ್ಟದ್ದನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ತೆಗೆಯುವುದೋ?” ಎಂದು ಕೇಳಿದರು. ಅದಕ್ಕೆ ಅವರು ಸುಮ್ಮನಿದ್ದರು.


“ಆದರೆ ಗೇಣಿಗೆದಾರರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ, ‘ಇವನೇ ಬಾಧ್ಯಸ್ಥನು. ಬನ್ನಿರಿ, ನಾವು ಇವನನ್ನು ಕೊಂದು ಇವನ ಆಸ್ತಿಯನ್ನು ಕಿತ್ತುಕೊಳ್ಳೋಣ,’ ಎಂದುಕೊಂಡು,


ಮುಖ್ಯಯಾಜಕರೂ ನಿಯಮ ಬೋಧಕರೂ ಅದನ್ನು ಕೇಳಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಯೇಸುವಿನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಯೇಸುವಿಗೆ ಭಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು