Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:29 - ಕನ್ನಡ ಸಮಕಾಲಿಕ ಅನುವಾದ

29 ನಾನಾದರೋ ಅವರನ್ನು ಅರಿತಿದ್ದೇನೆ. ಏಕೆಂದರೆ ನಾನು ಅವರ ಕಡೆಯಿಂದ ಬಂದವನು. ಅವರೇ ನನ್ನನ್ನು ಕಳುಹಿಸಿಕೊಟ್ಟಿದ್ದಾರೆ,” ಎಂದು ಗಟ್ಟಿಯಾಗಿ ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೆ ನಾನು ಆತನನ್ನು ಬಲ್ಲೆನು ಏಕೆಂದರೆ, ನಾನು ಆತನ ಕಡೆಯಿಂದ ಬಂದವನು ಮತ್ತು ಆತನೇ ನನ್ನನ್ನು ಕಳುಹಿಸಿದನು” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಾನಾದರೋ ಆತನನ್ನು ಅರಿತಿದ್ದೇನೆ. ಏಕೆಂದರೆ, ನಾನು ಬಂದುದು ಆತನಿಂದಲೇ. ಆತನೇ ನನ್ನನ್ನು ಕಳುಹಿಸಿದ್ದು,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಾನು ಆತನನ್ನು ಬಲ್ಲೆನು; ಆತನ ಕಡೆಯಿಂದ ಬಂದವನಾದದರಿಂದಲೂ ನನ್ನನ್ನು ಆತನೇ ಕಳುಹಿಸಿದ್ದರಿಂದಲೂ ಆತನನ್ನು ಬಲ್ಲೆನೆಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದರೆ ನಾನು ಆತನನ್ನು ಬಲ್ಲೆನು. ನಾನು ಆತನಿಂದಲೇ ಬಂದೆನು ಮತ್ತು ಆತನೇ ನನ್ನನ್ನು ಕಳುಹಿಸಿದನು” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಖರೆ ಮಿಯಾ ತೆಕಾ ವಳಕ್ತಾ, ಕಶ್ಯಾಕ್ ಮಟ್ಲ್ಯಾರ್ ಮಿಯಾ ತೆಚೆಕ್ನಾಚ್ ಯೆಲಾ ಅನಿ ತೆನಿಚ್ ಮಾಕಾ ಧಾಡುನ್ ದಿಲ್ಯಾನಾಯ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:29
13 ತಿಳಿವುಗಳ ಹೋಲಿಕೆ  

ನೀವು ಅವರನ್ನು ಅರಿತುಕೊಂಡಿಲ್ಲ; ಆದರೆ ನಾನು ಅವರನ್ನು ಅರಿತಿದ್ದೇನೆ. ನಾನು ಅವರನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗುವೆನು. ಆದರೆ ನಾನು ಅವರನ್ನು ಅರಿತಿದ್ದೇನೆ. ಅವರ ಮಾತನ್ನು ಪಾಲಿಸುತ್ತೇನೆ.


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಬೇರೆ ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾನೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು.


ನೀವು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.


ದೇವರಿಂದ ಬಂದಿರುವ ನಾನೇ ತಂದೆಯನ್ನು ನೋಡಿದ್ದೇನೆ, ಬೇರೆ ಯಾರೂ ತಂದೆಯನ್ನು ನೋಡಲಿಲ್ಲ.


ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.


ತಂದೆಯು ಮಗನನ್ನು ಲೋಕ ರಕ್ಷಕರನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ನೋಡಿದ್ದೇವೆ ಮತ್ತು ಅದಕ್ಕೆ ನಾವು ಸಾಕ್ಷಿ ಹೇಳುತ್ತೇವೆ.


ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮೂಲಕ ನಾವು ಜೀವಿಸುವುದಕ್ಕಾಗಿ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ಇದರಿಂದಲೇ ದೇವರು ತಮ್ಮ ಪ್ರೀತಿಯನ್ನು ನಮ್ಮ ನಡುವೆ ತೋರಿಸಿದರು.


ಈ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು, ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ.


ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾರೆಂದೂ ತಾನು ದೇವರ ಬಳಿಯಿಂದ ಬಂದು ಮರಳಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.


ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು