Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:33 - ಕನ್ನಡ ಸಮಕಾಲಿಕ ಅನುವಾದ

33 ಯೇಸು ಅವರಿಗೆ, “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಅನಂತರ ನನ್ನನ್ನು ಕಳುಹಿಸಿದ ತಂದೆಯ ಬಳಿಗೆ ಹೋಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆಗ ಯೇಸು ಅವರಿಗೆ “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆಗ ಯೇಸು, “ಇನ್ನು ತುಸುಕಾಲ ಮಾತ್ರ ನಾನು ನಿಮ್ಮೊಡನೆ ಇರುತ್ತೇನೆ. ಅನಂತರ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟುಹೋಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆಗ ಯೇಸು - ಇನ್ನು ಸ್ವಲ್ಪಕಾಲ ನಾನು ನಿಮ್ಮಲ್ಲಿ ಇದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆಗ ಯೇಸು, “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿರುತ್ತೇನೆ. ಬಳಿಕ, ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತನ್ನಾ ಜೆಜುನ್, “ಅನಿ ಎಕ್ ಉಲ್ಲೊಸೊಚ್ ಎಳ್ ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾತಾ, ಮಾನಾ ಮಿಯಾ ಮಾಕಾ ಧಾಡುನ್ ದಿಲ್ಲ್ಯಾಕ್ಡೆ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:33
16 ತಿಳಿವುಗಳ ಹೋಲಿಕೆ  

ಈಗ ನನ್ನನ್ನು ಕಳುಹಿಸಿದ ತಂದೆಯ ಬಳಿಗೆ ನಾನು ಹೋಗುತ್ತೇನೆ. ನಿಮ್ಮಲ್ಲಿ ಯಾರೂ, ‘ನೀವು ಎಲ್ಲಿಗೆ ಹೋಗುತ್ತೀರಿ?’ ಎಂದು ನನ್ನನ್ನು ಕೇಳಲಿಲ್ಲ.


“ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮೊಡನೆ ಇರುತ್ತೇನೆ. ‘ನೀವು ನನ್ನನ್ನು ಹುಡುಕುವಿರಿ, ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದಿ ನಾಯಕರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.


“ಈಗ ನಾನು ನಿಮ್ಮ ಬಳಿಗೆ ಬರುತ್ತೇನೆ. ನನ್ನ ಆನಂದವು ಅವರಲ್ಲಿ ಪರಿಪೂರ್ಣವಾಗುವಂತೆ ನಾನು ಲೋಕದಲ್ಲಿ ಇದ್ದು ಇವೆಲ್ಲವನ್ನು ಮಾತನಾಡುತ್ತೇನೆ.


ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತೇನೆ. ಪರಿಶುದ್ಧ ತಂದೆಯೇ, ನಾವು ಒಂದಾಗಿರುವಂತೆಯೇ ಇವರೂ ಒಂದಾಗಿರಬೇಕೆಂದು ನೀವು ನನಗೆ ಕೊಟ್ಟ ನಿಮ್ಮ ಹೆಸರಿನ ಶಕ್ತಿಯಿಂದ ಇವರನ್ನು ಕಾಪಾಡಿರಿ.


ನಾನು ತಂದೆಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ತಿರುಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತಿದ್ದೇನೆ,” ಎಂದರು.


ನಾನು ನನ್ನ ತಂದೆಯ ಬಳಿಗೆ ಹೋಗುವುದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣದಿಂದ, ನೀತಿಯ ವಿಷಯವಾಗಿಯೂ


ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ಕಾಣುವುದಿಲ್ಲ. ಆದರೆ ನೀವು ನನ್ನನ್ನು ಕಾಣುವಿರಿ. ಏಕೆಂದರೆ ನಾನು ಜೀವಿಸುವುದರಿಂದ ನೀವು ಸಹ ಜೀವಿಸುವಿರಿ.


ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾರೆಂದೂ ತಾನು ದೇವರ ಬಳಿಯಿಂದ ಬಂದು ಮರಳಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.


ಅಂದು ಪಸ್ಕಹಬ್ಬದ ಹಿಂದಿನ ದಿನವಾಗಿತ್ತು. ಯೇಸು ತಾವು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಸಮಯ ಬಂತೆಂದು ತಿಳಿದು, ಈ ಲೋಕದಲ್ಲಿದ್ದ ತಮ್ಮವರನ್ನು ಪ್ರೀತಿಸುತ್ತಿದ್ದ ಆ ಪ್ರೀತಿಯ ಪರಿಪೂರ್ಣತೆಯನ್ನು ಈಗ ತೋರಿಸಲಿದ್ದರು.


ಕರ್ತ ಯೇಸು ಅವರೊಂದಿಗೆ ಮಾತನಾಡಿದ ನಂತರ, ಅವರು ಪರಲೋಕಕ್ಕೆ ಏರಿ ದೇವರ ಬಲಪಾರ್ಶ್ವದಲ್ಲಿ ಕುಳಿತುಕೊಂಡರು.


ನನ್ನನ್ನು ಕಳುಹಿಸಿದ ತಂದೆಯ ಕೆಲಸಗಳನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬಂದಾಗ ಯಾರಿಗೂ ಕೆಲಸ ಮಾಡಲಾಗದು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಾನು ಮಾಡುವ ಕ್ರಿಯೆಗಳನ್ನು ತಾವು ಸಹ ಮಾಡುವರು. ಇವುಗಳಿಗಿಂತ ಮಹತ್ತಾದವುಗಳನ್ನು ಅವರು ಮಾಡುವರು. ಏಕೆಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.


“ ‘ನಾನು ಹೋಗಿ ತಿರುಗಿ ನಿಮ್ಮ ಬಳಿಗೆ ಬರುತ್ತೇನೆ,’ ಎಂದು ನಾನು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷ ಪಡುತ್ತಿದ್ದಿರಿ. ಏಕೆಂದರೆ ತಂದೆಯು ನನಗಿಂತಲೂ ದೊಡ್ಡವರು.


ಯೇಸು ಆಕೆಗೆ, “ನನ್ನನ್ನು ಹಿಡಿಯಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಹೋಗಲಿಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವ ತಂದೆಯ ಬಳಿಗೆ ನಾನು ಹೋಗುತ್ತೇನೆ’ ಎಂದು ತಿಳಿಸು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು