Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:36 - ಕನ್ನಡ ಸಮಕಾಲಿಕ ಅನುವಾದ

36 ಈತನು, ‘ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವುದಿಲ್ಲ ಮತ್ತು ನಾನಿರುವಲ್ಲಿಗೆ ನೀವು ಬರಲಾರಿರಿ,’ ಎಂದು ಹೇಳಿದ ಮಾತು ಏನಾಗಿರಬಹುದು?” ಎಂದು ತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ‘ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ ಮತ್ತು ನಾನು ಇರುವಲ್ಲಿಗೆ ನೀವು ಬರಲಾರಿರಿ’ ಎಂದು ಹೇಳಿದ ಮಾತಿನ ಅರ್ಥ ಏನಾಗಿರಬಹುದು?” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ‘ನನ್ನನ್ನು ಅರಸುವಿರಿ, ಆದರೆ ನಾನು ನಿಮಗೆ ಕಾಣಸಿಗುವುದಿಲ್ಲ. ನಾನಿರುವಲ್ಲಿಗೆ ನೀವು ಬರುವಂತಿಲ್ಲ’ ಎಂದು ಇವನು ಹೇಳುವುದರ ಅರ್ಥ ಏನಿರಬಹುದು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ, ನಾನು ಇರುವಲ್ಲಿಗೆ ನೀವು ಬರಲಾರಿರಿ ಎಂದು ಅವನು ಹೇಳಿದ ಮಾತು ಏನಿದ್ದೀತು? ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಇವನು (ಯೇಸು), ‘ನೀವು ನನ್ನನ್ನು ಹುಡುಕುವಿರಿ, ಆದರೆ ನೀವು ನನ್ನನ್ನು ಕಂಡುಕೊಳ್ಳುವುದಿಲ್ಲ’ ಎನ್ನುತ್ತಾನೆ. ಅಲ್ಲದೆ ಇವನು, ‘ನಾನು ಇರುವಲ್ಲಿಗೆ ನೀವು ಬರಲಾರಿರಿ’ ಎನ್ನುತ್ತಾನೆ. ಇದರರ್ಥವೇನು?” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತೊ ಅಮಿ ತೆಕಾ ಹುಡಕ್ತಾಂವ್ ಖರೆ ತೊ ಅಮ್ಕಾ ಗಾವಿನಾ, ಅನಿ ಮಿಯಾ ಖೈ ಜಾತಾ ಥೈ ಯೆವ್ಕ್ ಹೊಯ್ನಾ ಮನ್ತಾ. ಹೆಚ್ಯಾ ಗೊಸ್ಟಿಯಾಂಚೊ ಅರ್ತ್ ಕಾಯ್?” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:36
11 ತಿಳಿವುಗಳ ಹೋಲಿಕೆ  

ನಿಕೊದೇಮನು ಯೇಸುವಿಗೆ, “ಇದೆಲ್ಲಾ ಹೇಗೆ ಸಾಧ್ಯ?” ಎಂದು ಕೇಳಿದನು.


ನೀವು ನನ್ನನ್ನು ಹುಡುಕುವಿರಿ. ಆದರೆ ನನ್ನನ್ನು ಕಾಣುವುದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ,” ಎಂದರು.


ಆದರೆ ಭೌತಿಕ ಮನುಷ್ಯನು ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.


ಜನರು ಯೇಸುವಿಗೆ, “ಕ್ರಿಸ್ತ ಸದಾಕಾಲವೂ ಇರುತ್ತಾರೆ ಎಂದು ನಾವು ಮೋಶೆಯ ನಿಯಮದಿಂದ ಕೇಳಿದ್ದೇವೆ. ಹಾಗಾದರೆ ಮನುಷ್ಯಪುತ್ರನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುವುದು ಹೇಗೆ? ಈ ಮನುಷ್ಯಪುತ್ರನು ಯಾರು?” ಎಂದು ಕೇಳಿದರು.


ಯೇಸುವಿನ ಶಿಷ್ಯರಲ್ಲಿ ಅನೇಕರು ಈ ಮಾತುಗಳನ್ನು ಕೇಳಿ, “ಇದು ಕಠಿಣವಾದ ಮಾತು. ಇದನ್ನು ಯಾರು ಪಾಲಿಸುವರು?” ಎಂದರು.


ಆದ್ದರಿಂದ ಯೆಹೂದ್ಯರು ಒಬ್ಬರಿಗೊಬ್ಬರು ಚರ್ಚೆಮಾಡುತ್ತಾ, “ಈ ಮನುಷ್ಯನು ತನ್ನ ಮಾಂಸವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೆ?” ಎಂದರು.


“ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ,” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಯೇಸುವಿನ ವಿಷಯವಾಗಿ ಗೊಣಗುಟ್ಟಿ,


ನಿಕೊದೇಮನು ಯೇಸುವಿಗೆ, “ಒಬ್ಬನು ವಯಸ್ಸಾದ ಮೇಲೆ ಮತ್ತೆ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಾದೀತೇ?” ಎಂದು ಕೇಳಿದನು.


ಯೇಸು ತಿರುಗಿ ಅವರಿಗೆ, “ನಾನು ಹೊರಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.


“ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮೊಡನೆ ಇರುತ್ತೇನೆ. ‘ನೀವು ನನ್ನನ್ನು ಹುಡುಕುವಿರಿ, ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದಿ ನಾಯಕರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು