ಯೋಹಾನ 7:39 - ಕನ್ನಡ ಸಮಕಾಲಿಕ ಅನುವಾದ39 ಆದರೆ ಯೇಸು ತಮ್ಮಲ್ಲಿ ನಂಬಿಕೆಯಿಡುವವರು ಹೊಂದಲಿರುವ ಪವಿತ್ರಾತ್ಮರನ್ನು ಕುರಿತು ಹೀಗೆ ಹೇಳಿದರು. ಯೇಸು ಇನ್ನೂ ಮಹಿಮೆ ಹೊಂದಿರಲಿಲ್ಲ. ಈ ಕಾರಣದಿಂದ ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ತಮ್ಮಲ್ಲಿ ವಿಶ್ವಾಸವಿಡುವವರು ಪಡೆಯಲಿದ್ದ ಪವಿತ್ರಾತ್ಮರನ್ನು ಕುರಿತೇ ಯೇಸು ಹೀಗೆ ಹೇಳಿದ್ದು. ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಏಕೆಂದರೆ, ಯೇಸು ಇನ್ನೂ ಮೇಲೇರಿ ಮಹಿಮೆಯನ್ನು ಪಡೆದಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಇದನ್ನು ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೇಳಿದನು; ಆತನು ಇನ್ನೂ ತನ್ನ ಮಹಿಮೆಯ ಪದವಿಯನ್ನು ಹೊಂದದೆ ಇದ್ದಕಾರಣ ಪವಿತ್ರಾತ್ಮವರವು ಇನ್ನೂ ಬಂದಿದ್ದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮನನ್ನು ಕುರಿತು ಹೇಳಿದನು. ಆತನು ಇನ್ನೂ ತನ್ನ ಮಹಿಮೆಯನ್ನು ಹೊಂದಿಲ್ಲದಿದ್ದ ಕಾರಣ ಪವಿತ್ರಾತ್ಮನು ಇನ್ನೂ ಬಂದಿರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ಜೆಜು ಆತ್ಮ್ಯಾಚ್ಯಾ ವಿಶಯಾತ್ ಬೊಲ್ಲ್ಯಾನ್. ಹೆ ಅಪ್ನಾಚ್ಯಾ ವರ್ತಿ ವಿಶ್ವಾಸ್ ಕರ್‍ತಲ್ಯಾಕ್ನಿ ಗಾವ್ತಲೆ ಹೊತ್ತೆ. ಪವಿತ್ರ್ ತ್ಯಾ ಎಳಾರ್ ಅಜುನ್ ಪವಿತ್ರ್ ಆತ್ಮ್ಯಾಕ್ ದಿಲ್ಲೆ ನತ್ತೆ, ಕಶ್ಯಾಕ್ ಮಟ್ಲ್ಯಾರ್, ಅಜುನ್ ಬಿ ಜೆಜುಕ್ ಮಹಿಮೆಚ್ಯಾ ವಾಂಗ್ಡಾ ಉಟ್ವಲ್ಲೆ ನತ್ತೆ. ಅಧ್ಯಾಯವನ್ನು ನೋಡಿ |