ಯೋಹಾನ 7:7 - ಕನ್ನಡ ಸಮಕಾಲಿಕ ಅನುವಾದ7 ಲೋಕವು ನಿಮ್ಮನ್ನು ದ್ವೇಷಿಸಲಾರದು. ಲೋಕದ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯದಲ್ಲಿ ನಾನು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿಹೇಳುವದರಿಂದ ನನ್ನನ್ನು ಹಗೆಮಾಡುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಹ್ಯೊ ಜಗ್ ತುಮ್ಚೊ ದ್ವೆಸ್ ಕರಿನಾ ಖರೆ ತೊ ಮಾಜೊ ದ್ವೆಸ್ ಕರ್‍ತಾ ಕಶ್ಯಾಕ್ ಮಟ್ಲ್ಯಾರ್ ಮಿಯಾ ತೆಚಿ ವಾಟಾ ಬುರ್ಶ್ಯಾ ಹಾತ್ ಮನುನ್ ಸಾಂಗುಂಗೆತ್ ರ್‍ಹಾತಾ. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.