Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:18 - ಕನ್ನಡ ಸಮಕಾಲಿಕ ಅನುವಾದ

18 ನನ್ನ ವಿಷಯವಾಗಿ ಸಾಕ್ಷಿ ನೀಡುವವನು ನಾನೇ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿ ನೀಡುತ್ತಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ವಿಷಯವಾಗಿ ಸಾಕ್ಷಿ ನೀಡುವವನು ನಾನೇ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿ ನೀಡುತ್ತಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಾನು ನನ್ನ ಪರವಾಗಿ ಸಾಕ್ಷಿ ಹೇಳುತ್ತೇನೆ; ನನ್ನನ್ನು ಕಳುಹಿಸಿದ ಪಿತ ಸಹ ನನ್ನ ಪರವಾಗಿ ಸಾಕ್ಷಿ ಹೇಳುತ್ತಾರೆ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನನ್ನು ಕುರಿತು ನಾನು ಸಾಕ್ಷಿ ಹೇಳುವವನಾಗಿದ್ದೇನೆ, ಅದಲ್ಲದೆ ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಹೇಳುತ್ತಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಪರವಾದ ಸಾಕ್ಷಿಗಳಲ್ಲಿ ನಾನೂ ಒಬ್ಬನಾಗಿದ್ದೇನೆ, ನನ್ನನ್ನು ಕಳುಹಿಸಿದ ತಂದೆಯು ನನ್ನ ಮತ್ತೊಬ್ಬ ಸಾಕ್ಷಿಯಾಗಿದ್ದಾನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ಮಾಜ್ಯಾ ಸ್ವತಾಚ್ಯಾ ವಿಶಯಾತ್ ಸಾಕ್ಷಿ ದಿತಾ, ಅನಿ ಮಾಕಾ ಧಾಡಲ್ಲೊ ಮಾಜೊ ಬಾಬಾಬಿ ಮಾಜ್ಯಾ ವಿಶಯಾತುಚ್ ಸಾಕ್ಷಿ ದಿತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:18
16 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಇದ್ದೇನೆ,” ಎಂದರು.


ನಾನು ತಂದೆಯ ಬಳಿಯಲ್ಲಿ ಕಂಡದ್ದನ್ನೇ ಮಾತನಾಡುತ್ತೇನೆ. ನೀವಾದರೋ ನಿಮ್ಮ ತಂದೆಯಿಂದ ಕೇಳಿದ್ದನ್ನು ಮಾಡುತ್ತೀರಿ,” ಎಂದರು.


ದೇವರು ಸಹ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ತಮ್ಮ ಚಿತ್ತಾನುಸಾರವಾಗಿ ದಯಪಾಲಿಸಿದ ಪವಿತ್ರಾತ್ಮರ ವರದಾನಗಳಿಂದಲೂ ಸಾಕ್ಷಿನೀಡಿ ದೃಢಪಡಿಸಿದ್ದಾರೆ.


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


“ನಾನೇ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ನನ್ನ ಕುರಿಗಳು ನನ್ನನ್ನು ತಿಳಿದಿವೆ.


“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.


ನಾನೇ ಬಾಗಿಲು; ನನ್ನ ಮೂಲಕವಾಗಿ ಯಾರು ಪ್ರವೇಶಿಸುವರೋ ಅವರೇ ಸುರಕ್ಷಿತವಾಗಿರುವರು. ಇದಲ್ಲದೆ ಅವರು ಒಳಗೆ ಹೋಗುವರು, ಹೊರಗೆ ಬರುವರು ಮತ್ತು ಮೇವನ್ನು ಕಂಡುಕೊಳ್ಳುವರು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾರು ನನ್ನ ಮಾತನ್ನು ಪಾಲಿಸುತ್ತಾರೋ ಅವರು ಎಂದೆಂದಿಗೂ ಮರಣವನ್ನು ಕಾಣುವುದಿಲ್ಲ,” ಎಂದರು.


ಅವರು ಯೇಸುವಿಗೆ, “ನೀನು ಯಾರು?” ಎಂದರು. ಅದಕ್ಕೆ ಯೇಸು ಅವರಿಗೆ, “ಮೊದಲಿನಿಂದ ನಾನು ನಿಮಗೆ ಹೇಳಿದಂತವನೇ.


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವರು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ. ಅವರು ಜೀವದ ಬೆಳಕನ್ನು ಹೊಂದಿರುವರು,” ಎಂದು ಹೇಳಿದರು.


ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ,” ಎಂದು ಉತ್ತರಕೊಟ್ಟರು.


ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು.


“ ‘ಪ್ರಾಣಹತ್ಯೆ ಮಾಡಿದ ಕೊಲೆಪಾತಕನನ್ನು ಸಾಕ್ಷಿಗಳನ್ನು ವಿಚಾರಿಸಿಕೊಂಡೇ ಅವನಿಗೆ ಮರಣಶಿಕ್ಷೆಯನ್ನು ವಿಧಿಸಬೇಕು. ಒಬ್ಬನೇ ಸಾಕ್ಷಿಯು ಒಂದು ಪ್ರಾಣಕ್ಕೆ ವಿರೋಧವಾಗಿ ಸಾಯುವ ಹಾಗೆ ಸಾಕ್ಷಿ ಕೊಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು