Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:22 - ಕನ್ನಡ ಸಮಕಾಲಿಕ ಅನುವಾದ

22 ಅದಕ್ಕೆ ಯೆಹೂದ್ಯರು, “ಈತನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದಾನೋ? ಏಕೆಂದರೆ, ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ,’ ಎಂದು ಹೇಳುತ್ತಾನಲ್ಲಾ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಕ್ಕೆ ಯೆಹೂದ್ಯರು, “ನಾವು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ?” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅದಕ್ಕೆ ಯೆಹೂದ್ಯರು, ‘ತಾನು ಹೋಗುವಲ್ಲಿಗೆ ನಮ್ಮಿಂದ ಬರಲಾಗದಂತೆ! ಹಾಗೆಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬುದು ಇವನ ಇಂಗಿತವೆ?’ ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ಮಾತಿಗೆ ಯೆಹೂದ್ಯರು - ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದ್ದರಿಂದ ಯೆಹೂದ್ಯರು, “ಯೇಸು ತನ್ನನ್ನು ತಾನೇ ಕೊಂದುಕೊಳ್ಳುವನೇ? ಅದಕ್ಕಾಗಿಯೇ, ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳಿದನೇ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೆಚೆಸಾಟ್ನಿ ಜುದೆವಾಂಚ್ಯಾ “ಹ್ಯೊ, ತೊ ಜಾತಾ ಥೈ ಅಮ್ಚ್ಯಾನ್ ಜಾವ್ಕ್ ಹೊಯ್ನಾ ಮನುನ್ ಮನುಲಾ, ಅಶೆ ಮಟ್ಲ್ಯಾರ್ ಹ್ಯೊ ಅಪ್ನಾಚೊಚ್ ಜಿವ್ ಕಾಡುನ್ ಘೆಟ್ನಾರ್ ಹಾಯ್ ಕಿ ಕಾಯ್?” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:22
11 ತಿಳಿವುಗಳ ಹೋಲಿಕೆ  

ಆಗ ಯೆಹೂದಿ ನಾಯಕರು ಯೇಸುವಿಗೆ, “ನಿನಗೆ ದೆವ್ವ ಹಿಡಿದಿದೆ ಎಂದು ನಮಗೆ ಈಗ ತಿಳಿಯಿತು. ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು. ಆದರೆ, ‘ಯಾರಾದರೂ ನನ್ನ ಮಾತನ್ನು ಪಾಲಿಸಿದರೆ ಅವರು ಎಂದೆಂದಿಗೂ ಮರಣ ಹೊಂದುವುದಿಲ್ಲ,’ ಎಂದು ನೀನು ಹೇಳುತ್ತೀಯಲ್ಲಾ?


ಅದಕ್ಕೆ ಯೆಹೂದಿ ನಾಯಕರು ಯೇಸುವಿಗೆ, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವ ಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೇ?” ಎಂದು ಕೇಳಿದರು.


ಆದರೆ ನಾನು ಹುಳದಂಥವನೇ ಹೊರತು ಮನುಷ್ಯನಲ್ಲ; ನಾನು ಮನುಷ್ಯರಿಂದ ನಿಂದೆ ಹಾಗು ತಿರಸ್ಕಾರಕ್ಕೆ ಗುರಿಯಾಗಿದ್ದೇನೆ.


ಆದ್ದರಿಂದ ನಾವು ಯೇಸು ಹೇಗೆ ನಿಂದನೆಯನ್ನು ಹೊತ್ತುಕೊಂಡರೋ ಹಾಗೆ ಹೊತ್ತು ಪಾಳೆಯದ ಆಚೆ ಅವರ ಬಳಿಗೆ ಹೊರಟು ಹೋಗೋಣ.


ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡ ಯೇಸುವನ್ನು ಕುರಿತು ನೀವು ಯೋಚಿಸಿರಿ.


ಅವರಲ್ಲಿ ಅನೇಕರು, “ಆತನಿಗೆ ದೆವ್ವ ಹಿಡಿದಿದೆ. ಆತನು ಹುಚ್ಚನಾಗಿದ್ದಾನೆ, ನೀವು ಏಕೆ ಆತನಿಗೆ ಕಿವಿಗೊಡುತ್ತೀರಿ?” ಎಂದರು.


ಆಗ ಯೆಹೂದಿ ನಾಯಕರು, “ನಾವು ಈತನನ್ನು ಕಾಣದ ಹಾಗೆ ಈತ ಎಲ್ಲಿಗೆ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿ ಹೋದವರ ಬಳಿಗೆ ಹೋಗಿ ಗ್ರೀಕರಿಗೆ ಬೋಧಿಸುವನೋ?


ಅದಕ್ಕೆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಹುಡುಕುವವರು ಯಾರು?” ಎಂದರು.


ನಾವು ಸುಖಭೋಗಿಗಳ ಗೇಲಿಯನ್ನೂ ಗರ್ವಿಷ್ಠರಿಂದ ತಿರಸ್ಕಾರವನ್ನೂ ಅನುಭವಿಸಿದ್ದೇವೆ.


ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ, ಕಠಿಣವಾಗಿಯೂ ಮಾತನಾಡುವ ಸುಳ್ಳಿನ ತುಟಿಗಳು ಮೌನವಾಗಲಿ.


ಯೆರೂಸಲೇಮಿನ ಯೆಹೂದ್ಯ ನಾಯಕರು, ಯಾಜಕರನ್ನು ಮತ್ತು ಲೇವಿಯರನ್ನು ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು