Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:24 - ಕನ್ನಡ ಸಮಕಾಲಿಕ ಅನುವಾದ

24 ಆದ್ದರಿಂದ, ‘ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,’ ಎಂದು ನಾನು ನಿಮಗೆ ಹೇಳಿದೆನು. ಏಕೆಂದರೆ ನೀವು ನನ್ನನ್ನು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವು ನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಿಮ್ಮ ಪಾಪಗಳಲ್ಲೇ ನೀವು ಸಾಯುವಿರೆಂದು ನಾನು ಹೇಳಿದುದು ಇದಕ್ಕಾಗಿಯೇ. ‘ಇರುವಾತನೇ ನಾನು’ ಎಂಬುದನ್ನು ನೀವು ವಿಶ್ವಾಸಿಸದೆಹೋದರೆ ನಿಮ್ಮ ಪಾಪಗಳಲ್ಲೇ ಸಾಯುವಿರಿ,” ಎಂದು ಯೇಸು ಅವರಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ಹೇಳಿದೆನು; ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನೀವು ನಿಮ್ಮ ಪಾಪಗಳಲ್ಲೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆ. ಹೌದು, ನಾನೇ ಆತನೆಂಬುದನ್ನು ನೀವು ನಂಬದಿದ್ದರೆ ನಿಮ್ಮ ಪಾಪಗಳಲ್ಲಿಯೇ ನೀವು ಸಾಯುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತೆಚೆಸಾಟ್ನಿ ತುಮಿ ತುಮ್ಚ್ಯಾ ಪಾಪಾತುಚ್ ಮರ್‍ತ್ಯಾಶಿ ಮನುನ್ ಮಿಯಾ ಸಾಂಗಟ್ಲೊ. ಅನಿ ಮಿಯಾ ಕೊನ್ ಕಾಯ್ ಮನುನ್ ತುಮಿ ವಿಶ್ವಾಸ್ ಕರುನಸ್ಲ್ಯಾರ್ ತುಮಿ ತುಮ್ಚ್ಯಾ ಪಾಪಾತ್ನಿಚ್ ಮರ್‍ತ್ಯಾಶಿ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:24
18 ತಿಳಿವುಗಳ ಹೋಲಿಕೆ  

ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು,” ಎಂದು ಹೇಳಿದನು.


ಮಗನನ್ನು ನಂಬುವವನಿಗೆ ತೀರ್ಪು ಆಗುವುದಿಲ್ಲ. ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ ಅವನು ದೇವರ ಒಬ್ಬನೇ ಪುತ್ರನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ಆದರೆ ನನ್ನನ್ನು ಬಿಟ್ಟು ದೂರಹೋಗುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ, ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”


“ಅದು ಆಗುವುದು, ‘ನಾನೇ ಆತನು’ ಎಂದು ನೀವು ನಂಬುವಂತೆ ಅದು ಸಂಭವಿಸುವುದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತಿದ್ದೇನೆ.


ಯೇಸು ಆಕೆಗೆ, “ನಿನ್ನೊಂದಿಗೆ ಮಾತನಾಡುವ ನಾನೇ ಆತನು!” ಎಂದರು.


ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.


ಯೇಸು ತಿರುಗಿ ಅವರಿಗೆ, “ನಾನು ಹೊರಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.


ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ,” ಎಂದನು.


ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.


ಅದಕ್ಕೆ ಯೇಸು, “ನೀವು ಮೋಸಹೋಗದಂತೆ ಎಚ್ಚರಿಕೆಯಾಗಿರಿ. ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಅವರು,’ ಎಂದೂ ‘ಸಮಯ ಸಮೀಪಿಸಿದೆ,’ ಎಂದೂ ಹಕ್ಕು ಸಾಧಿಸುವರು. ನೀವು ಅವರನ್ನು ಹಿಂಬಾಲಿಸಬೇಡಿರಿ.


ಆಗ ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ. ‘ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು,” ಎಂದರು.


ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.


ಅವರು ಯೇಸುವಿಗೆ, “ನೀನು ಯಾರು?” ಎಂದರು. ಅದಕ್ಕೆ ಯೇಸು ಅವರಿಗೆ, “ಮೊದಲಿನಿಂದ ನಾನು ನಿಮಗೆ ಹೇಳಿದಂತವನೇ.


ಯೇಸು ಅವರಿಗೆ, “ಮನುಷ್ಯಪುತ್ರನಾದ ನನ್ನನ್ನು ನೀವು ಮೇಲಕ್ಕೇರಿಸಿದಾಗ ‘ನಾನೇ ಆತನು’ ಎಂದು ನಿಮಗೆ ತಿಳಿಯುವುದು. ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ಬೋಧಿಸಿದಂತೆ ನಾನು ಈ ಸಂಗತಿಗಳನ್ನು ಮಾತನಾಡುತ್ತೇನೆ ಎಂದೂ ನೀವು ತಿಳಿದುಕೊಳ್ಳುವಿರಿ.


ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಇದ್ದೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು