Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:31 - ಕನ್ನಡ ಸಮಕಾಲಿಕ ಅನುವಾದ

31 ಯೇಸು ತಮ್ಮನ್ನು ನಂಬಿದ್ದ ಯೆಹೂದ್ಯರಿಗೆ ಹೇಳಿದ್ದೇನೆಂದರೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾಗಿಯೂ ನೀವು ನನ್ನ ಶಿಷ್ಯರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ - ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡವರಾದರೆ ನಿಜವಾಗಿ ನನ್ನ ಶಿಷ್ಯರಾಗಿದ್ದು ಸತ್ಯವನ್ನು ತಿಳಿದುಕೊಳ್ಳುವಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದ್ದರಿಂದ ಯೇಸು ತನ್ನಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ, “ನೀವು ನನ್ನ ಉಪದೇಶಕ್ಕೆ ವಿಧೇಯರಾಗಿದ್ದರೆ, ನೀವು ನಿಜವಾಗಿಯೂ ನನ್ನ ಹಿಂಬಾಲಕರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ಜೆಜುನ್ ಅಪ್ನಾಚ್ಯಾ ವರ್ತಿ ವಿಶ್ವಾಸ್ ಕರ್‍ತಲ್ಯಾ ಜುದೆವಾಕ್ನಿ, “ತುಮಿ ಮಿಯಾ ಶಿಕ್ವುತಲ್ಯಾಕ್ ಖಾಲ್ತಿ ಹೊಲ್ಯಾರ್ ತುಮಿ ಖರೆಚ್! ಮಾಜಿ ಶಿಸಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:31
25 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳದೆ ಅದನ್ನು ಅತಿಕ್ರಮಿಸುವವರಿಗೆ ದೇವರಿಲ್ಲ. ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳುವವರಿಗೆ ತಂದೆ ಮತ್ತು ಪುತ್ರ ಇಬ್ಬರೂಇರುತ್ತಾರೆ.


ನೀನಾದರೋ, ಕಲಿತು ನಿಶ್ಚಯಗೊಂಡವುಗಳಲ್ಲಿ ಮುಂದುವರಿಯುತ್ತಿರು. ನಿನಗೆ ಕಲಿಸಿಕೊಟ್ಟವರು ಯಾರೆಂಬುದು ನಿನಗೆ ತಿಳಿದಿದೆ.


ಆದರೆ ಸ್ವಾತಂತ್ರ್ಯವನ್ನುಂಟುಮಾಡುವ ಪರಿಪೂರ್ಣವಾದ ನಿಯಮವನ್ನು ಲಕ್ಷ್ಯವಿಟ್ಟು ನೋಡುತ್ತಲೇ ಇರುವವನು, ಆ ವಾಕ್ಯವನ್ನು ಕೇಳಿದರೂ ಮರೆತು ಹೋಗದೆ ಅದರಂತೆ ನಡೆಯುವವನಾದ್ದರಿಂದ ಅವನು ಧನ್ಯನಾಗುವನು.


ನಿನ್ನ ವಿಷಯದಲ್ಲಿಯೂ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿಯೇ ನಿರತನಾಗಿರು. ಹೀಗೆ ಮಾಡುವುದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವೆ.


ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.


ನೀವು ಯೆಹೋವ ದೇವರ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಯೆಹೋವ ದೇವರಿಗೆ ಭಯಪಟ್ಟು ಅವರನ್ನು ಸೇವಿಸಿ, ಅವರ ಮಾತಿಗೆ ವಿಧೇಯರಾದರೆ ನೀವೂ, ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಯೆಹೋವ ದೇವರನ್ನು ತಪ್ಪದೆ ಹಿಂಬಾಲಿಸುವಿರಿ.


ಮೊದಲಿನಿಂದಿರುವ ನಮ್ಮ ನಿರೀಕ್ಷೆಯನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡಿದುಕೊಳ್ಳುವುದಾದರೆ ಕ್ರಿಸ್ತ ಯೇಸುವಿನ ಭಾಗಿಗಳಾಗಿದ್ದೇವಲ್ಲಾ!


ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.


ನೀವಂತೂ ಯಾವುದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಹಾಗಿದ್ದರೆ, ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿರುತ್ತೀರಿ.


ಆದ್ದರಿಂದ, ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು. ಬಿದ್ದವರ ಕಡೆಗೆ ಅವರ ಕಾಠಿಣ್ಯವಿದೆ, ನೀನು ದೇವರ ದಯೆಯಲ್ಲಿಯೇ ಮುಂದುವರಿಯುವುದಾದರೆ ನಿನ್ನ ಮೇಲೆ ದೇವರ ದಯೆಯಿರುವುದು. ಇಲ್ಲದೆ ಹೋದರೆ, ನೀನು ಕೂಡ ಕಡಿದುಹಾಕಲಾಗುವೆ.


ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.


ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.


ಆದ್ದರಿಂದ ದೇವಪುತ್ರನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿ ನೀವು ಬಿಡುಗಡೆಯಾಗುವಿರಿ.


ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.


ಸಭೆಯು ಮುಗಿದ ತರುವಾಯ ಅನೇಕ ಯೆಹೂದ್ಯರೂ ದೇವಭಕ್ತಿವುಳ್ಳ ಯೆಹೂದಿ ಮಾರ್ಗದ ವಿಶ್ವಾಸಿಗಳು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಪೌಲ ಬಾರ್ನಬರು ತಮ್ಮೊಂದಿಗೆ ಬಂದವರ ಜೊತೆ ಮಾತನಾಡಿ ದೇವರ ಕೃಪೆಯಲ್ಲಿ ಮುಂದುವರಿಯಲು ಅವರನ್ನು ಒಡಂಬಡಿಸಿದರು.


ಅವರು ನಮ್ಮಿಂದ ಹೊರಟು ಹೋದರು. ಆದರೆ ಅವರು ನಮ್ಮವರಾಗಿರಲಿಲ್ಲ. ಏಕೆಂದರೆ ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ತೋರಿಬಂತು.


ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು, ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ದಿವಸದಂದು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ. ಆದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ, ಎಂದು ಕರ್ತದೇವರು ಹೇಳುತ್ತಾರೆ.


ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆ, ಪ್ರೀತಿ ಹಾಗೂ ಪರಿಶುದ್ಧತೆಯಲ್ಲಿ ನೆಲೆಗೊಂಡಿದ್ದರೆ ಅವರು ಮಗುವನ್ನು ಹೆರುವುದರ ಮೂಲಕ ರಕ್ಷಣೆಹೊಂದುವರು.


ನತಾನಯೇಲನು ತಮ್ಮ ಬಳಿಗೆ ಬರುವುದನ್ನು ಯೇಸು ಕಂಡು ಅವನ ವಿಷಯವಾಗಿ, “ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ,” ಎಂದು ಹೇಳಿದರು.


ಆದರೆ ನಾನು ಇಂದಿನವರೆಗೂ ದೇವರಿಂದ ಸಹಾಯವನ್ನು ಪಡೆದಿರುತ್ತೇನೆ. ಹೀಗೆ ನಾನು ಇಲ್ಲಿ ನಿಂತುಕೊಂಡು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಕೊಡುತ್ತಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಏನು ಸಂಭವಿಸುತ್ತದೆಯೆಂದು ಹೇಳಿದ್ದಕ್ಕಿಂತ ಹೆಚ್ಚಾಗಿ ನಾನು ಏನನ್ನೂ ಹೇಳಲಿಲ್ಲ.


ಯೇಸು ಮತ್ತು ಅವರ ಶಿಷ್ಯರು ಮದುವೆಗೆ ಆಮಂತ್ರಿತರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು