Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:32 - ಕನ್ನಡ ಸಮಕಾಲಿಕ ಅನುವಾದ

32 ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಸತ್ಯವು ನಿಮ್ಮನ್ನು ಸ್ವತಂತ್ರರಾಗಿ ಮಾಡುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನೀವು ಸತ್ಯವನ್ನು ಅರಿತುಕೊಳ್ಳುವಿರಿ, ಸತ್ಯವು ನಿಮಗೆ ಸ್ವಾತಂತ್ರ್ಯ ನೀಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಮತ್ತು ಸತ್ಯವು ನಿಮ್ಮನ್ನು ಬಿಡುಗಡೆಮಾಡುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನೀವು ಸತ್ಯವನ್ನು ತಿಳಿದುಕೊಳ್ಳುವಿರಿ. ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತುಮ್ಕಾ, ಖರೆ ಕಾಯ್ ಮನುನ್ ಗೊತ್ತ್ ಹೊತಾ, ಅನಿ ತೆಚ್ ಖರೆ ತುಮ್ಕಾ ಸ್ವತಂತ್ರ್ ಕರ್‍ತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:32
42 ತಿಳಿವುಗಳ ಹೋಲಿಕೆ  

ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.


ಆದ್ದರಿಂದ ದೇವಪುತ್ರನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿ ನೀವು ಬಿಡುಗಡೆಯಾಗುವಿರಿ.


ನೀವು ಸತ್ಯದಿಂದ ಇವರನ್ನು ಸಮರ್ಪಿಸಿರಿ. ನಿಮ್ಮ ವಾಕ್ಯವೇ ಸತ್ಯವು.


ಸ್ವತಂತ್ರರಾಗಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ. ದೇವರ ಸೇವಕರಂತೆಯೇ ಬಾಳಿರಿ.


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ಆದರೆ ಈಗ ನೀವು ಪಾಪದಿಂದ ಬಿಡುಗಡೆ ಹೊಂದಿದವರಾಗಿ ದೇವರಿಗೆ ಗುಲಾಮರಾಗಿರುವುದರಿಂದ, ಪವಿತ್ರವಾಗಿರುವುದೇ ನಿಮಗೆ ದೊರಕುವ ಫಲವು. ಕಡೆಗೆ ದೊರೆಯುವಂಥದು ನಿತ್ಯಜೀವವಾಗಿರುತ್ತದೆ.


ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. ಏಕೆಂದರೆ ಯೆಹೋವ ದೇವರು ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು


ನಿಮ್ಮ ಸತ್ಯದಲ್ಲಿ ಮಾರ್ಗದರ್ಶನ ನೀಡಿ ನನಗೆ ಬೋಧಿಸಿರಿ; ಏಕೆಂದರೆ ನೀವು ನನ್ನ ರಕ್ಷಕ ಆಗಿರುವ ದೇವರಾಗಿದ್ದೀರಿ; ನಿಮ್ಮನ್ನು ನಾನು ದಿನವೆಲ್ಲಾ ನಿರೀಕ್ಷಿಸುತ್ತಿದ್ದೇನೆ.


ಆದರೆ ಸ್ವಾತಂತ್ರ್ಯವನ್ನುಂಟುಮಾಡುವ ಪರಿಪೂರ್ಣವಾದ ನಿಯಮವನ್ನು ಲಕ್ಷ್ಯವಿಟ್ಟು ನೋಡುತ್ತಲೇ ಇರುವವನು, ಆ ವಾಕ್ಯವನ್ನು ಕೇಳಿದರೂ ಮರೆತು ಹೋಗದೆ ಅದರಂತೆ ನಡೆಯುವವನಾದ್ದರಿಂದ ಅವನು ಧನ್ಯನಾಗುವನು.


ಕ್ರಿಸ್ತ ಯೇಸು ನಮ್ಮನ್ನು ಸ್ವತಂತ್ರಕ್ಕಾಗಿಯೇ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಸ್ಥಿರವಾಗಿ ನಿಲ್ಲಿರಿ. ನೀವು ನಿಯಮದ ದಾಸತ್ವದ ನೊಗದಲ್ಲಿ ಪುನಃ ಸಿಕ್ಕಿಕೊಳ್ಳಬೇಡಿರಿ.


ಸ್ವಾತಂತ್ರ್ಯವನ್ನು ಉಂಟುಮಾಡುವ ನಿಯಮದಿಂದ ನಾವು ತೀರ್ಪುಹೊಂದುವೆವು ಎಂದು ತಿಳಿದು, ನಮ್ಮ ಮಾತುಗಳೂ ಕೃತ್ಯಗಳೂ ಅದಕ್ಕೆ ಅನುಸಾರವಾಗಿರಲಿ.


ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ, ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ, ಒಳ್ಳೆಯ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ. ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕುವುದು, ಆದರೆ ಅವರು, ‘ನಾವು ನಡೆಯುವುದಿಲ್ಲ,’ ಎಂದರು.


ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು.


ನಾವು ಯೆಹೋವ ದೇವರನ್ನು ತಿಳಿದುಕೊಳ್ಳಲು, ಅವರನ್ನು ಹಿಂಬಾಲಿಸಿದರೆ ತಿಳಿದುಕೊಳ್ಳುವೆವು. ಅವರ ಆಗಮನವು ಅರುಣೋದಯದಂತೆ ನಿಶ್ಚಯ. ಅವರು ಮಳೆಯಂತೆಯೂ ಮುಂಗಾರಿನಂತೆಯೂ, ಭೂಮಿಯನ್ನು ತಂಪು ಮಾಡುವ ಹಿಂಗಾರಿನಂತೆಯೂ ಬಳಿಗೆ ಬರುವರು.


ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುತ್ತೇವೆ.


ಆದರೆ ಸತ್ಯದ ಆತ್ಮ ಬಂದಾಗ ಅವರು ನಿಮ್ಮನ್ನು ಎಲ್ಲಾ ಸತ್ಯದೊಳಗೆ ನಡೆಸುವರು. ಅವರು ತಮ್ಮಷ್ಟಕ್ಕೆ ತಾವೇ ಮಾತನಾಡದೆ ತಾವು ಕೇಳಿದವುಗಳನ್ನೇ ಮಾತನಾಡುವರು. ಮುಂದೆ ನಡೆಯಲಿರುವ ವಿಷಯಗಳನ್ನು ಅವರು ನಿಮಗೆ ಪ್ರಕಟಿಸುವರು.


ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ ಇದರಲ್ಲೇ ನಡೆಯಿರಿ,” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.


ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.


ನನ್ನ ಗದರಿಕೆ ಕೇಳಿ ನೀವು ಪಶ್ಚಾತ್ತಾಪಪಡಿರಿ! ಆಗ ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನಿಮಗೆ ನನ್ನ ಬೋಧನೆಗಳನ್ನು ಪ್ರಕಟಿಸುವೆನು.


ಇಂಥ ಸ್ತ್ರೀಯರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಜ್ಞಾನಕ್ಕೆ ಬರಲಾರದವರು ಆಗಿರುವರು.


ಅಲ್ಲಿ ರಾಜಮಾರ್ಗ ಇರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನು ಅದರ ಮೇಲೆ ಹಾದು ಹೋಗನು. ಆದರೆ ಅದು ದೇವಜನರಿಗಾಗಿ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿ ತಪ್ಪನು.


ನಿಮ್ಮ ಸೂತ್ರಗಳನ್ನು ನಾನು ಹುಡುಕುವುದರಿಂದ, ನಾನು ಸ್ವತಂತ್ರವಾಗಿಯೇ ಜೀವಿಸುವೆನು.


ನೀತಿವಂತರ ಮಾರ್ಗವು ಮುಂಜಾನೆಯ ಸೂರ್ಯನ ಬೆಳಕಿನಂತೆ ಇದ್ದು, ದಿನದ ಪೂರ್ಣ ಬೆಳಕಿನವರೆಗೂ ಪ್ರಕಾಶಿಸಿ ಹೊಳೆಯುತ್ತಾ ಇರುವುದು.


ಏಕೆಂದರೆ ಅವರು ಅರಿವನ್ನು ಹಗೆಮಾಡಿ, ಯೆಹೋವ ದೇವರಿಗೆ ಭಯಪಡುವುದನ್ನು ಆರಿಸಿಕೊಳ್ಳದೆ ಹೋದರು.


‘ಅವರೆಲ್ಲರೂ ದೇವರಿಂದಲೇ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ.


ನಿನ್ನ ಮಕ್ಕಳೆಲ್ಲಾ ಯೆಹೋವ ದೇವರಿಂದಲೇ ಬೋಧನೆ ಪಡೆಯುವರು. ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರುವುದು.


ಅನೇಕ ಪ್ರಜೆಗಳು ಬಂದು ಹೀಗೆ ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ, ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ದೇವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು, ನಾವು ಅವರ ದಾರಿಗಳಲ್ಲಿ ನಡೆಯುವೆವು.” ಏಕೆಂದರೆ ಚೀಯೋನಿನಿಂದ ದೇವರ ನಿಯಮವೂ, ಯೆರೂಸಲೇಮಿನಿಂದ ಯೆಹೋವ ದೇವರ ವಾಕ್ಯವೂ ಹೊರಡುವುವು.


ನಾನು ಸಾತ್ವಿಕನೂ ದೀನ ಹೃದಯದವನೂ ಆಗಿರುವುದರಿಂದ ನೀವು ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ. ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.


ದೇವರು ಕರೆದಾಗ ಒಬ್ಬನು ದಾಸನಾಗಿದ್ದರೂ, ಅವನು ಕರ್ತ ದೇವರಲ್ಲಿ ಸ್ವತಂತ್ರನು. ಅದೇ ಪ್ರಕಾರ, ಒಬ್ಬನು ಸ್ವತಂತ್ರನಾಗಿದ್ದಾಗ ಕರ್ತದೇವರ ಕರೆಹೊಂದಿದ್ದರೆ, ಅವನು ಕ್ರಿಸ್ತನಿಗೆ ದಾಸನು.


ಸಭಾಹಿರಿಯನಾದ ನಾನು, ನಮ್ಮಲ್ಲಿ ವಾಸಿಸುವ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿ ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ


ತರುವಾಯ ಅವನು ನಿನ್ನ ಬಳಿಯಿಂದ ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೆ ಹಿಂದಿರುಗಬೇಕು. ತನ್ನ ಪಿತೃಗಳ ಸೊತ್ತಿಗೂ ಅವನು ಹಿಂದಿರುಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು