ಯೋಹಾನ 8:33 - ಕನ್ನಡ ಸಮಕಾಲಿಕ ಅನುವಾದ33 ಅದಕ್ಕೆ ಅವರು ಯೇಸುವಿಗೆ, “ನಾವು ಅಬ್ರಹಾಮನ ಸಂತತಿಯವರು, ನಾವು ಯಾರಿಗೂ ಎಂದೂ ಗುಲಾಮರಾಗಿರಲಿಲ್ಲ. ನೀವು ಸ್ವತಂತ್ರರಾಗುವಿರಿ ಎಂದು ನೀನು ಹೇಳುವುದು ಹೇಗೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅದಕ್ಕವರು ಆತನಿಗೆ, “ನಾವು ಅಬ್ರಹಾಮನ ಸಂತಾನದವರು ಮತ್ತು ನಾವು ಎಂದೂ ಯಾರಿಗೂ ದಾಸರಾಗಿಲ್ಲ, ನಿಮಗೆ ಬಿಡುಗಡೆಯಾಗುವುದೆಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅದಕ್ಕೆ ಯೆಹೂದ್ಯರು, “ನಾವು ಅಬ್ರಹಾಮನ ವಂಶಜರು; ಯಾರಿಗೂ ಎಂದೂ ನಾವು ದಾಸರಾಗಿಲ್ಲ. ಅಂದಮೇಲೆ ನಾವು ಸ್ವತಂತ್ರರಾಗುತ್ತೇವೆ, ಎಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅದಕ್ಕವರು - ನಾವು ಅಬ್ರಹಾಮನ ಸಂತಾನದವರು; ನಾವು ಯಾರಿಗೂ ಎಂದೂ ದಾಸರಾಗಿಲ್ಲ; ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಳುವದು ಹೇಗೆ? ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಯೆಹೂದ್ಯರು, “ನಾವು ಅಬ್ರಹಾಮನ ಮಕ್ಕಳು. ನಾವೆಂದೂ ಯಾರ ಗುಲಾಮರೂ ಆಗಿರಲಿಲ್ಲ. ಹೀಗಿದ್ದರೂ, ನಮಗೆ ಬಿಡುಗಡೆ ಆಗುವುದೆಂದು ನೀನು ಹೇಳುವುದೇಕೆ?” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತನ್ನಾ ತೆನಿ ಅಮಿ ಅಬ್ರಾಹಾಮಾಚ್ಯಾ ಘರಾನ್ಯಾಚೆ ಅನಿ ಅಮಿ ಕನ್ನಾಚ್ ಕೊನಾಚೆ ಗುಲಾಮ್ ಹೊವ್ಕನಾವ್. ತುಮಿ ಸ್ವತಂತ್ರ್ ಹೊತ್ಯಾಶಿ ಮನುನ್ ತಿಯಾ ಸಾಂಗಲ್ಲ್ಯಾ ಗೊಸ್ಟಿಚೊ ಅರ್ತ್ ಕಾಯ್? ಮನುನ್ ಜಬಾಬ್ ದಿಲ್ಯಾನಿ. ಅಧ್ಯಾಯವನ್ನು ನೋಡಿ |