Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:38 - ಕನ್ನಡ ಸಮಕಾಲಿಕ ಅನುವಾದ

38 ನಾನು ತಂದೆಯ ಬಳಿಯಲ್ಲಿ ಕಂಡದ್ದನ್ನೇ ಮಾತನಾಡುತ್ತೇನೆ. ನೀವಾದರೋ ನಿಮ್ಮ ತಂದೆಯಿಂದ ಕೇಳಿದ್ದನ್ನು ಮಾಡುತ್ತೀರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ನಾನು ತಂದೆಯ ಬಳಿಯಲ್ಲಿ ನೋಡಿದ್ದನ್ನೇ ಮಾತನಾಡುತ್ತೇನೆ, ನೀವು ತಂದೆಯಿಂದ ಕೇಳಿದ್ದನ್ನೇ ಮಾಡಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ನಾನಾಡುವ ಮಾತುಗಳು ಪಿತನ ಸನ್ನಿಧಿಯಲ್ಲಿ ನಾನು ಕಂಡದ್ದನ್ನೇ ನಿರೂಪಿಸುತ್ತವೆ. ನೀವು ಮಾಡುವ ಕಾರ್ಯಗಳೋ ನಿಮ್ಮ ತಂದೆಯಿಂದ ನೀವು ಕಲಿತದ್ದನ್ನೇ ವ್ಯಕ್ತಪಡಿಸುತ್ತವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ನಾನು ತಂದೆಯ ಬಳಿಯಲ್ಲಿ ನೋಡಿದ್ದನ್ನು ಹೇಳುತ್ತೇನೆ; ನೀವೂ ತಂದೆಯಿಂದ ಕೇಳಿದ್ದನ್ನು ಮಾಡಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನನ್ನ ತಂದೆಯು ನನಗೆ ತೋರಿಸಿರುವುದನ್ನೇ ನಾನು ನಿಮಗೆ ಹೇಳುತ್ತಿದ್ದೇನೆ. ನೀವಾದರೋ ನಿಮ್ಮ ತಂದೆ ನಿಮಗೆ ಹೇಳಿದ ಸಂಗತಿಗಳನ್ನೇ ಮಾಡುತ್ತೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಜೆ ಕಾಯ್ ಮಾಜ್ಯಾ ಬಾಬಾನ್ ಮಾಕಾ ದಾಕ್ವುಲ್ಯಾನಾಯ್ ತೆಚ್ಯಾ ವಿಶಯಾತ್ ಮಿಯಾ ಬೊಲುಲಾ, ಖರೆ ತುಮಿ ತುಮ್ಚ್ಯಾ ಬಾಬಾನ್ ತುಮ್ಕಾ ಸಾಂಗಲ್ಲ್ಯಾ ಸರ್ಕೆ ಕರುಕ್ ಲಾಗ್ಲ್ಯಾಶಿ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:38
12 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಪುತ್ರನು ಮಾಡುತ್ತಾನೆ ಹೊರತು ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ತಂದೆ ಯಾವುದನ್ನೆಲ್ಲಾ ಮಾಡುವರೋ ಹಾಗೆಯೇ ಪುತ್ರನೂ ಮಾಡುವನು.


ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.


ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ,” ಎಂದರು. ಅದಕ್ಕವರು, “ನಾವು ಅನೈತಿಕತೆಯಿಂದ ಹುಟ್ಟಿದವರಲ್ಲ. ನಮಗೆ ದೇವರೇ ತಂದೆ,” ಎಂದು ಪ್ರತಿಭಟಿಸಿದರು.


ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು. ನಾನು ಕೇಳಿರುವಂತೆಯೇ ತೀರ್ಪು ಮಾಡುತ್ತೇನೆ. ನನ್ನ ತೀರ್ಪು ನ್ಯಾಯವಾದದ್ದು. ಏಕೆಂದರೆ ನಾನು ನನ್ನ ಚಿತ್ತವನ್ನಲ್ಲ, ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ನೆರವೇರಿಸಲು ಅಪೇಕ್ಷಿಸುತ್ತೇನೆ.


ನನ್ನನ್ನು ಪ್ರೀತಿಸದವನು ನನ್ನ ವಾಕ್ಯಗಳನ್ನು ಕೈಗೊಳ್ಳುವುದಿಲ್ಲ. ನೀವು ಕೇಳಿದ ವಾಕ್ಯವು ನನ್ನ ವಾಕ್ಯಗಳಲ್ಲ. ಅವು ನನ್ನನ್ನು ಕಳುಹಿಸಿದ ನನ್ನ ತಂದೆಯ ವಾಕ್ಯಗಳಾಗಿವೆ.


ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾರೆ ಎಂದು ನೀನು ನಂಬುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವುದಿಲ್ಲ; ನನ್ನಲ್ಲಿರುವ ತಂದೆಯೇ ತಮ್ಮ ಕ್ರಿಯೆಗಳನ್ನು ಮಾಡುತ್ತಾರೆ.


ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ ತೀರ್ಪುಮಾಡುವುದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ನಾನು ಅವರಿಂದ ಕೇಳಿದವುಗಳನ್ನು ಮಾತ್ರವೇ ಲೋಕಕ್ಕೆ ಹೇಳುತ್ತೇನೆ,” ಎಂದರು.


ಅವರು ಯಾವುದನ್ನು ಕಂಡು ಕೇಳಿದರೋ ಅದಕ್ಕೆ ಸಾಕ್ಷಿಕೊಡುತ್ತಾರೆ. ಆದರೆ ಅವರ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.


ಏಕೆಂದರೆ ನೀವು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ, ಇವರು ಅಂಗೀಕರಿಸಿದ್ದಾರೆ ಮತ್ತು ನಾನು ನಿಮ್ಮ ಬಳಿಯಿಂದ ಬಂದವನೆಂದು ಇವರು ನಿಶ್ಚಯವಾಗಿ ತಿಳಿದು, ನೀವೇ ನನ್ನನ್ನು ಕಳುಹಿಸಿದ್ದೀರಿ, ಎಂದು ನಂಬಿದ್ದಾರೆ.


ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು