Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:39 - ಕನ್ನಡ ಸಮಕಾಲಿಕ ಅನುವಾದ

39 ಯೆಹೂದ್ಯರು ಯೇಸುವಿಗೆ, “ಅಬ್ರಹಾಮನು ನಮ್ಮ ತಂದೆ,” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನು ಮಾಡಿದ ಕ್ರಿಯೆಗಳನ್ನೇ ಮಾಡುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅದಕ್ಕೆ ಅವರು, “ನಮ್ಮ ತಂದೆಯು ಅಬ್ರಹಾಮನೇ” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆಗ ಆ ಯೆಹೂದ್ಯರು, ಅಬ್ರಹಾಮನೇ ನಮ್ಮ ತಂದೆ,” ಎಂದು ಮರುನುಡಿದರು. ಯೇಸು, “ಅಬ್ರಹಾಮನ ಮಕ್ಕಳು ನೀವಾಗಿದ್ದರೆ ಅಬ್ರಹಾಮನು ಮಾಡಿದಂತೆ ನೀವು ಮಾಡುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅದಕ್ಕವರು - ನಮ್ಮ ತಂದೆಯು ಅಬ್ರಹಾಮನೇ ಅಂದಾಗ ಯೇಸು ಅವರಿಗೆ - ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಯೆಹೂದ್ಯರು, “ಅಬ್ರಹಾಮನೇ ನಮ್ಮ ತಂದೆ” ಎಂದು ಹೇಳಿದರು. ಯೇಸು, “ನೀವು ನಿಜವಾಗಿಯೂ ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದ ಕಾರ್ಯಗಳನ್ನೇ ಮಾಡುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತೆನಿ ತೆಕಾ, “ಅಬ್ರಾಹಾಮ್ ಅಮ್ಚೊ ಬಾಬಾ”, ಮನುನ್ ಜಬಾಬ್ ದಿಲ್ಯಾನಿ. ಜೆಜುನ್ ತೆಂಕಾ, “ಖರೆಚ್! ತುಮಿ ಅಬ್ರಾಹಾಮಾಚಿ ಪೊರಾ ಹೊಲ್ಯಾರ್, ಅಬ್ರಾಮಾನ್ ಕರಲ್ಲ್ಯಾ ಸರ್ಕೆಚ್ ತುಮಿಬಿ ಕರಿ ಹೊತ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:39
13 ತಿಳಿವುಗಳ ಹೋಲಿಕೆ  

ಆದ್ದರಿಂದ ನಂಬುವವರೇ, ಅಬ್ರಹಾಮನ ಮಕ್ಕಳೆಂದು ನೀವು ಅರ್ಥಮಾಡಿಕೊಳ್ಳಿರಿ.


ಅಥವಾ ಅಬ್ರಹಾಮನ ಸಂತತಿಯವರೆಲ್ಲ ಅವನ ಮಕ್ಕಳಲ್ಲ. ಆದರೆ, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂದು ಹೇಳಲಾಗಿದೆ.


ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು. ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲಲು ಹುಡುಕುತ್ತೀರಿ.


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಅವರು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ. ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆ ಸುರಿಸುತ್ತಾರೆ.


‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ.


ಆದರೆ ನೀವು ಕ್ರಿಸ್ತನವರಾಗಿದ್ದರೆ, ಅಬ್ರಹಾಮನ ಸಂತತಿಯವರಾಗಿದ್ದೀರಿ ಮಾತ್ರವಲ್ಲದೆ ವಾಗ್ದಾನಕ್ಕನುಸಾರವಾಗಿ ವಾರಸುದಾರರೂ ಆಗಿದ್ದೀರಿ.


ಆದ್ದರಿಂದ ಆ ಬಾಧ್ಯತೆಯು ಕೃಪೆಯಿಂದಲೇ, ನಂಬಿಕೆಯ ಮೂಲಕ ದೊರಕುತ್ತದೆ. ಈ ವಾಗ್ದಾನವು ನಿಯಮದ ಸಂತತಿಯವರಿಗೆ ಮಾತ್ರವಲ್ಲ ಅಬ್ರಹಾಮನಲ್ಲಿ ಇದ್ದ ನಂಬಿಕೆ ಇರುವವರ ಸಂತತಿಯವರೆಲ್ಲರಿಗೂ ಶಾಶ್ವತವಾಗಿ ದೊರಕುವುದು. ಏಕೆಂದರೆ ಅವನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.


ನಮ್ಮ ಪಿತೃವಾದ ಅಬ್ರಹಾಮನು ಸುನ್ನತಿ ಹೊಂದಿದವರಿಗೆ ಮಾತ್ರವೇ ತಂದೆಯಾಗಿರದೆ ಅವನಿಗೆ ಸುನ್ನತಿ ಆಗುವ ಮೊದಲು ಇದ್ದ ನಂಬಿಕೆಯ ಹೆಜ್ಜೆಯಲ್ಲಿ ನಡೆಯುವವರಿಗೂ ತಂದೆಯಾಗಿರುತ್ತಾನೆ.


ಅದಕ್ಕೆ ಅವರು ಯೇಸುವಿಗೆ, “ನಾವು ಅಬ್ರಹಾಮನ ಸಂತತಿಯವರು, ನಾವು ಯಾರಿಗೂ ಎಂದೂ ಗುಲಾಮರಾಗಿರಲಿಲ್ಲ. ನೀವು ಸ್ವತಂತ್ರರಾಗುವಿರಿ ಎಂದು ನೀನು ಹೇಳುವುದು ಹೇಗೆ?” ಎಂದು ಕೇಳಿದರು.


ನೀವು ನನ್ನ ಮಾತನ್ನು ಅರ್ಥಮಾಡಿಕೊಳ್ಳದಿರುವುದು ಯಾಕೆ? ನಾನು ಹೇಳುವುದನ್ನು ನೀವು ಕೇಳದೇ ಇರುವುದೇ ಇದಕ್ಕೆ ಕಾರಣ.


ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ಕಾಣುವನೆಂದು ಆನಂದಿಸಿದನು ಮತ್ತು ಅದನ್ನು ಕಂಡು ಉಲ್ಲಾಸಪಟ್ಟನು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು