ಯೋಹಾನ 8:44 - ಕನ್ನಡ ಸಮಕಾಲಿಕ ಅನುವಾದ44 ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಸೈತಾನನು ನಿಮ್ಮ ತಂದೆ; ನೀವು ಆ ತಂದೆಯಿಂದ ಹುಟ್ಟಿದವರಾಗಿದ್ದು ನಿಮ್ಮ ತಂದೆಯ ದುರಿಚ್ಫೆಗಳನ್ನೇ ನಡಿಸಬೇಕೆಂದಿದ್ದೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ; ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸುಳ್ಳಾಡುವಾಗ ಸ್ವಭಾವಾನುಸಾರವಾಗಿ ಆಡುತ್ತಾನೆ; ಅವನು ಸುಳ್ಳುಗಾರನೂ ಸುಳ್ಳಿಗೆ ಮೂಲಪುರುಷನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಸೈತಾನನೇ ನಿಮ್ಮ ತಂದೆ. ನೀವು ಅವನಿಗೆ ಹುಟ್ಟಿದವರಾಗಿದ್ದೀರಿ. ಅವನ ದುರಿಚ್ಛೆಗಳನ್ನು ಮಾಡಬಯಸುತ್ತೀರಿ. ಅವನು ಆರಂಭದಿಂದಲೂ ಕೊಲೆಗಾರನಾಗಿದ್ದು ಸತ್ಯಕ್ಕೆ ವಿರೋಧವಾಗಿದ್ದನು. ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸ್ವಭಾವಾನುಸಾರವಾಗಿ ಸುಳ್ಳಾಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿಗೆ ತಂದೆಯೂ ಆಗಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ತುಮಿ ತುಮ್ಚ್ಯಾ ಬಾಬಾ ಗಿರೊ ಪೊರಾ, ತುಮಿ ತುಮ್ಚ್ಯಾ ಬಾಬಾಕ್ ಕಶೆ ಪಾಜೆ ತಶೆಚ್ ಚಲ್ತ್ಯಾಶಿ. ಪಯ್ಲೆಚ್ಯಾನುಚ್ ತೊ ಎಕ್ ಜಿವಾನಿ ಮಾರ್‍ತಲೊ, ಅನಿ ತೊ ಕನ್ನಾಚ್ ಖರೆ ಹಾಯ್ ಥೈ ಯೆಯ್ನಾ, ಕಶ್ಯಾಕ್ ಮಟ್ಲ್ಯಾರ್ ತ್ಯೆಚ್ಯಾ ಭುತ್ತುರ್ ಖರೆ ಮನ್ತಲೆಚ್ ನಾ. ತೊ ಝುಟೆ ಬೊಲ್ತಾನಾ, ಅಪ್ನಾಕ್ ಬರೆ ದಿಸ್ತಾ ತಶೆ ತೊ ಬೊಲ್ತಾ. ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಝುಟೊ ಅನಿ ಝುಟೆ ಬೊಲ್ತಲ್ಯಾಂಚೊ ಬಾಬಾ. ಅಧ್ಯಾಯವನ್ನು ನೋಡಿ |