Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:52 - ಕನ್ನಡ ಸಮಕಾಲಿಕ ಅನುವಾದ

52 ಆಗ ಯೆಹೂದಿ ನಾಯಕರು ಯೇಸುವಿಗೆ, “ನಿನಗೆ ದೆವ್ವ ಹಿಡಿದಿದೆ ಎಂದು ನಮಗೆ ಈಗ ತಿಳಿಯಿತು. ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು. ಆದರೆ, ‘ಯಾರಾದರೂ ನನ್ನ ಮಾತನ್ನು ಪಾಲಿಸಿದರೆ ಅವರು ಎಂದೆಂದಿಗೂ ಮರಣ ಹೊಂದುವುದಿಲ್ಲ,’ ಎಂದು ನೀನು ಹೇಳುತ್ತೀಯಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 “ನೀನು ದೆವ್ವಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಅದಕ್ಕೆ ಯೆಹೂದ್ಯರು - ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು; ಅಬ್ರಹಾಮನು ಸತ್ತನು. ಪ್ರವಾದಿಗಳೂ ಸತ್ತರು; ಆದರೆ ನೀನು - ನನ್ನ ವಾಕ್ಯವನ್ನು ಕೈಕೊಂಡು ನಡೆಯುವವನು ಎಂದಿಗೂ ಸಾವನ್ನು ಅನುಭವಿಸುವದಿಲ್ಲವೆಂದು ಹೇಳುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಯೆಹೂದ್ಯರು ಆತನಿಗೆ, “ನಿನ್ನೊಳಗೆ ದೆವ್ವವಿದೆ ಎಂದು ಈಗ ನಮಗೆ ತಿಳಿಯಿತು! ಅಬ್ರಹಾಮನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಆದರೆ ‘ನನ್ನ ಉಪದೇಶಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ’ ಎಂದು ನೀನು ಹೇಳುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ಜುದೆವಾನಿ ತೆಕಾ ಖರೆ ಸಾಂಗಲ್ಲ್ಯಾನಿ , “ಅತ್ತಾ ತುಕಾ ಗಿರೊ ಲಾಗಲ್ಲೆ ಖರೆಚ್!” ಮನುನ್ ಅಮ್ಕಾ ಖಾತ್ರಿ ಹೊಲಿ! ಅಬ್ರಾಹಾಮ್ ಮರ್‍ಲೊ, ಪ್ರವಾದಿಬಿ ಮರುನ್ ಗೆಲೆ, ಖರೆ ತಿಯಾ ಮನ್ತೆಯ್ ಜೊ ಕೊನ್ ಮಾಜೆ ಶಿಕ್ವುತಲ್ಯಾನಿ ಖಾಲ್ತಿ ಹೊವ್ನ್ ಚಲ್ತಾತ್ ತೆನಿ ಕನ್ನಾಚ್ ಮರಿನ್ಯಾತ್ ಮನುನ್ ಮನ್ತೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:52
14 ತಿಳಿವುಗಳ ಹೋಲಿಕೆ  

ಆದರೂ ದೇವದೂತರಿಗಿಂತ ಸ್ವಲ್ಪಕಾಲ ಕಡಿಮೆಯಾಗಿ ಮಾಡಲಾದ ಆ ಒಬ್ಬಾತನು ಯೇಸುವೇ. ಈ ಯೇಸು ಬಾಧೆಪಟ್ಟು ಮೃತಪಟ್ಟಿದ್ದರಿಂದಲೇ ಮಹಿಮೆಯನ್ನೂ ಮಾನವನ್ನೂ ಕಿರೀಟವಾಗಿ ಹೊಂದಿದರೆಂದು ಎಂದು ನಾವು ಕಾಣುತ್ತೇವೆ. ದೇವರ ಕೃಪೆಯಿಂದಲೇ ಎಲ್ಲರಿಗೋಸ್ಕರ ಮರಣವನ್ನು ಈ ಯೇಸು ಅನುಭವಿಸಬೇಕಾಗಿತ್ತು.


ಅವರು ಕುರುಡನಾಗಿದ್ದವನನ್ನು ಮತ್ತೊಮ್ಮೆ ಕರೆದು ಅವನಿಗೆ, “ದೇವರಿಗೆ ಮಹಿಮೆಯನ್ನು ಸಲ್ಲಿಸು, ಆ ಮನುಷ್ಯ ಪಾಪಿ ಎಂದು ನಾವು ಬಲ್ಲೆವು,” ಎಂದರು.


ಅದಕ್ಕೆ ಯೆಹೂದಿ ನಾಯಕರು ಯೇಸುವಿಗೆ, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವ ಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೇ?” ಎಂದು ಕೇಳಿದರು.


ಈ ಎಲ್ಲಾ ಜನರು ಮರಣ ಹೊಂದುವಾಗಲೂ ವಿಶ್ವಾಸದಿಂದ ಜೀವಿಸುವವರಾಗಿದ್ದರು. ವಾಗ್ದಾನದ ಸಂಗತಿಗಳನ್ನು ಅವರು ಹೊಂದಲಿಲ್ಲ. ಅವುಗಳನ್ನು ಅವರು ದೂರದಿಂದಲೇ ನೋಡಿ ಸ್ವಾಗತಿಸಿದರು. ತಾವು ಭೂಮಿಯ ಮೇಲೆ ಪರದೇಶದವರೂ ಅಪರಿಚಿತರೂ ಆಗಿದ್ದೇವೆಂದು ಒಪ್ಪಿಕೊಂಡರು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾರು ನನ್ನ ಮಾತನ್ನು ಪಾಲಿಸುತ್ತಾರೋ ಅವರು ಎಂದೆಂದಿಗೂ ಮರಣವನ್ನು ಕಾಣುವುದಿಲ್ಲ,” ಎಂದರು.


“ಏಕೆಂದರೆ ಯೋಹಾನನು ಅನ್ನಪಾನಗಳನ್ನು ತೆಗೆದುಕೊಳ್ಳಲಿಲ್ಲ. ಅದಕ್ಕೆ ಅವರು, ‘ಅವನಿಗೆ ದೆವ್ವ ಹಿಡಿದಿದೆ,’ ಎಂದರು.


ಯೆರೂಸಲೇಮಿನ ಯೆಹೂದ್ಯ ನಾಯಕರು, ಯಾಜಕರನ್ನು ಮತ್ತು ಲೇವಿಯರನ್ನು ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದರು.


ಅದಕ್ಕೆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಹುಡುಕುವವರು ಯಾರು?” ಎಂದರು.


ಅದಕ್ಕೆ ಯೆಹೂದ್ಯರು, “ಈತನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದಾನೋ? ಏಕೆಂದರೆ, ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ,’ ಎಂದು ಹೇಳುತ್ತಾನಲ್ಲಾ?” ಎಂದರು.


ನೀವು ಅವರನ್ನು ಅರಿತುಕೊಂಡಿಲ್ಲ; ಆದರೆ ನಾನು ಅವರನ್ನು ಅರಿತಿದ್ದೇನೆ. ನಾನು ಅವರನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗುವೆನು. ಆದರೆ ನಾನು ಅವರನ್ನು ಅರಿತಿದ್ದೇನೆ. ಅವರ ಮಾತನ್ನು ಪಾಲಿಸುತ್ತೇನೆ.


ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ಅವನು ನನ್ನ ವಾಕ್ಯವನ್ನು ಕೈಗೊಳ್ಳುವನು. ನನ್ನ ತಂದೆಯು ಅವನನ್ನು ಪ್ರೀತಿಸುವರು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಿವಾಸಮಾಡಿಕೊಳ್ಳುವೆವು.


‘ಧಣಿಗಿಂತ ಆಳು ದೊಡ್ಡವನಲ್ಲ,’ ಎಂದು ನಾನು ನಿಮಗೆ ಹೇಳಿದ ಮಾತನ್ನು ನೆನಪಿಗೆ ತಂದುಕೊಳ್ಳಿರಿ. ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಅನುಸರಿಸಿದರೆ ನಿಮ್ಮ ಮಾತನ್ನು ಸಹ ಅನುಸರಿಸುವರು.


“ಲೋಕದೊಳಗಿಂದ ನೀವು ನನಗೆ ಕೊಟ್ಟ ಈ ನನ್ನ ಶಿಷ್ಯರಿಗೆ ನಾನು ನಿಮ್ಮ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ನೀವು ಇವರನ್ನು ನನಗೆ ಕೊಟ್ಟಿದ್ದೀರಿ. ಇವರು ನಿಮ್ಮ ವಾಕ್ಯವನ್ನು ಕೈಗೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು