Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:55 - ಕನ್ನಡ ಸಮಕಾಲಿಕ ಅನುವಾದ

55 ನೀವು ಅವರನ್ನು ಅರಿತುಕೊಂಡಿಲ್ಲ; ಆದರೆ ನಾನು ಅವರನ್ನು ಅರಿತಿದ್ದೇನೆ. ನಾನು ಅವರನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗುವೆನು. ಆದರೆ ನಾನು ಅವರನ್ನು ಅರಿತಿದ್ದೇನೆ. ಅವರ ಮಾತನ್ನು ಪಾಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ. ನಾನಂತೂ ಆತನನ್ನು ಬಲ್ಲೆನು, ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು. ಆದರೆ ನಾನು ಆತನನ್ನು ತಿಳಿದಿದ್ದೇನೆ. ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಆದರೆ ಅವರ ಅರಿವು ನಿಮಗಿಲ್ಲ; ನನಗಿದೆ. ಅವರ ಅರಿವು ನನಗಿಲ್ಲವೆಂದು ನಾನು ಹೇಳಿದೆಯಾದರೆ ನಿಮ್ಮಂತೆ ನಾನೂ ಸುಳ್ಳುಗಾರನಾಗುತ್ತೇನೆ. ಅವರ ಅರಿವು ನನಗಿದೆ. ಅವರ ಮಾತನ್ನು ನಾನು ಪಾಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ನಾನಂತು ಆತನನ್ನು ಬಲ್ಲೆನು; ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು; ಆದರೆ ಆತನನ್ನು ತಿಳಿದಿದ್ದೇನೆ, ಆತನ ವಾಕ್ಯವನ್ನು ಕೈಕೊಂಡು ನಡೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಆದರೆ ನೀವು ಆತನನ್ನು ನಿಜವಾಗಿಯೂ ತಿಳಿದಿಲ್ಲ. ನಾನು ಆತನನ್ನು ಬಲ್ಲೆನು. ನಾನು ಆತನನ್ನು ತಿಳಿದಿಲ್ಲವೆಂದು ಹೇಳಿದರೆ ನಿಮ್ಮಂತೆ ನಾನು ಸಹ ಸುಳ್ಳುಗಾರನಾಗುತ್ತೇನೆ. ನಾನು ಆತನನ್ನು ಬಲ್ಲೆನು. ನಾನು ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

55 ತುಮಿ ತೆಕಾ ಕನ್ನಾಬಿ ವಳ್ಕಿನ್ಯಾಶಿ ಖರೆ ಮಿಯಾ ತೆಕಾ ವಳಕ್ತಾ, ಅನಿ ಮಿಯಾ ತೆಕಾ ವಳ್ಕಿನಾ ಮನುನ್ ಸಾಂಗಟ್ಲ್ಯಾರ್ ಮಿಯಾಬಿ ತುಮ್ಚ್ಯಾ ಸರ್ಕೊಚ್ ಝುಟೊ ಹೊತಾ. ಖರೆ ಮಿಯಾ ತೆಕಾ ವಳಕ್ತಾ ಅನಿ ತೆಚ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊವ್ನ್ ಚಲ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:55
25 ತಿಳಿವುಗಳ ಹೋಲಿಕೆ  

ಆಗ ಅವರು, “ನಿನ್ನ ತಂದೆ ಎಲ್ಲಿ?” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ತಿಳಿದಿಲ್ಲ, ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿಯುತ್ತಿದ್ದೀರಿ,” ಎಂದು ಉತ್ತರಕೊಟ್ಟರು.


ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.


ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾರು ನನ್ನ ಮಾತನ್ನು ಪಾಲಿಸುತ್ತಾರೋ ಅವರು ಎಂದೆಂದಿಗೂ ಮರಣವನ್ನು ಕಾಣುವುದಿಲ್ಲ,” ಎಂದರು.


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಬೇರೆ ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾನೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು.


ದೇವಪುತ್ರ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟವರು ಆ ಸಾಕ್ಷಿಯನ್ನು ಸ್ವೀಕರಿಸುತ್ತಾರೆ. ದೇವರನ್ನು ನಂಬದವರು ದೇವರನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾರೆ. ಹೇಗೆಂದರೆ ದೇವರು ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅಂಥವರು ನಂಬಿಕೆಯಿಡಲಿಲ್ಲ.


ಆದರೆ ಅವರು ನನ್ನನ್ನು ಕಳುಹಿಸಿದ ತಂದೆಯನ್ನು ತಿಳಿಯದಿರುವುದರಿಂದಲೇ ನನ್ನ ಹೆಸರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.


ಸುಳ್ಳುಗಾರನು ಯಾರು? ಮನುಷ್ಯನಾಗಿ ಬಂದ ಯೇಸುವು ಕ್ರಿಸ್ತ ಅಲ್ಲ ಎಂದು ಯಾವನು ಅಲ್ಲಗಳೆಯುತ್ತಾನೋ ಅವನೇ ಸುಳ್ಳುಗಾರನು. ಅವನೇ ತಂದೆಯನ್ನೂ ಮಗನನ್ನೂ ಅಲ್ಲಗಳೆಯುವ ಕ್ರಿಸ್ತವಿರೋಧಿಯಾಗಿದ್ದಾನೆ.


ಒಬ್ಬನು, “ನಾನು ಅವರನ್ನು ಬಲ್ಲೆನು,” ಎಂದು ಹೇಳಿ ಅವರ ಆಜ್ಞೆಗಳನ್ನು ಕೈಗೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವು ಅವನಲ್ಲಿ ಇಲ್ಲ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ನಾನು ಸುತ್ತಮುತ್ತಲೂ ತಿರುಗಾಡುತ್ತಾ, ನಿಮ್ಮ ಆರಾಧನಾ ವಿಗ್ರಹಗಳನ್ನು ಲಕ್ಷ್ಯವಿಟ್ಟು ಗಮನಿಸಿದಾಗ, ‘ತಿಳಿಯದ ದೇವರಿಗೆ’ ಎಂಬ ಬರಹವಿದ್ದ ಬಲಿಪೀಠವನ್ನು ನೋಡಿದೆನು. ಆದ್ದರಿಂದ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿರುವಿರೋ ಅದನ್ನೇ ನಾನು ನಿಮಗೆ ಪ್ರಕಟಿಸುತ್ತೇನೆ.


“ನೀತಿಯುಳ್ಳ ತಂದೆಯೇ, ಲೋಕವು ನಿಜವಾಗಿಯೂ ನಿಮ್ಮನ್ನು ತಿಳಿಯಲಿಲ್ಲ. ಆದರೆ ನಾನು ನಿಮ್ಮನ್ನು ತಿಳಿದಿದ್ದೇನೆ ಮತ್ತು ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ಇವರು ತಿಳಿದಿದ್ದಾರೆ.


ಅವರು ತಂದೆಯನ್ನಾಗಲಿ ನನ್ನನ್ನಾಗಲಿ ತಿಳಿಯದ ಕಾರಣ ಇವೆಲ್ಲವುಗಳನ್ನು ಮಾಡುವರು.


ನಾನು ನನ್ನ ತಂದೆಯ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನೆಲೆಗೊಂಡಿರುವಂತೆಯೇ ನೀವು ನನ್ನ ಆಜ್ಞೆಗಳನ್ನು ಪಾಲಿಸಿ ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಳ್ಳುವಿರಿ.


ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ.


ನನ್ನನ್ನು ಕಳುಹಿಸಿದ ತಂದೆ ನನ್ನ ಸಂಗಡ ಇದ್ದಾರೆ. ಅವರು ನನ್ನನ್ನು ಒಬ್ಬಂಟಿಗನನ್ನಾಗಿ ಬಿಡಲಿಲ್ಲ, ಏಕೆಂದರೆ ಅವರಿಗೆ ಮೆಚ್ಚಿದವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ,” ಎಂದರು.


ದೇವರಿಂದ ಬಂದಿರುವ ನಾನೇ ತಂದೆಯನ್ನು ನೋಡಿದ್ದೇನೆ, ಬೇರೆ ಯಾರೂ ತಂದೆಯನ್ನು ನೋಡಲಿಲ್ಲ.


ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾರೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು,” ಎಂದರು.


“ಅವರು ತಮ್ಮ ದೇವರ ಬಳಿಗೆ ತಿರುಗಿಕೊಳ್ಳದಂತೆ, ಅವರ ದುಷ್ಕೃತ್ಯಗಳು ಅವರಿಗೆ ಅಡ್ಡಿಯಾಗಿವೆ. ವ್ಯಭಿಚಾರದ ಆತ್ಮವು ಅವರ ಹೃದಯದಲ್ಲಿದೆ. ಅವರು ಯೆಹೋವ ದೇವರನ್ನು ಸ್ವೀಕರಿಸಿಕೊಳ್ಳುವುದಿಲ್ಲ.


“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವುದಿಲ್ಲ. ಏಕೆಂದರೆ ಅವರು ಒಂದು ಪಾಪದಿಂದ ಇನ್ನೊಂದು ಪಾಪಕ್ಕೆ ಹೋಗುತ್ತಾ, ನನ್ನನ್ನು ಅರಿಯದೆ ಇದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


“ಏಕೆಂದರೆ ನನ್ನ ಜನರು ಮೂಢರಾಗಿದ್ದಾರೆ. ನನ್ನನ್ನು ಅವರು ಅರಿಯರು; ಮೂರ್ಖ ಮಕ್ಕಳಾಗಿದ್ದಾರೆ, ಅವರು ಗ್ರಹಿಕೆಯಿಲ್ಲದವರು; ಕೆಟ್ಟದ್ದನ್ನು ಮಾಡುವುದಕ್ಕೆ ಜಾಣರಾಗಿದ್ದಾರೆ, ಆದರೆ ಒಳ್ಳೆಯದನ್ನು ಮಾಡುವುದಕ್ಕೆ ಅರಿಯರು.”


ಆಗ ಯೆಹೂದಿ ನಾಯಕರು ಯೇಸುವಿಗೆ, “ನಿನಗೆ ದೆವ್ವ ಹಿಡಿದಿದೆ ಎಂದು ನಮಗೆ ಈಗ ತಿಳಿಯಿತು. ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು. ಆದರೆ, ‘ಯಾರಾದರೂ ನನ್ನ ಮಾತನ್ನು ಪಾಲಿಸಿದರೆ ಅವರು ಎಂದೆಂದಿಗೂ ಮರಣ ಹೊಂದುವುದಿಲ್ಲ,’ ಎಂದು ನೀನು ಹೇಳುತ್ತೀಯಲ್ಲಾ?


ನಾವು ದೇವರ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೂ ಸುಳ್ಳಾಡುವವರಾಗಿದ್ದರೆ, ನಾವು ಸತ್ಯವನ್ನು ಅನುಸರಿಸುವವರಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು