Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:56 - ಕನ್ನಡ ಸಮಕಾಲಿಕ ಅನುವಾದ

56 ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ಕಾಣುವನೆಂದು ಆನಂದಿಸಿದನು ಮತ್ತು ಅದನ್ನು ಕಂಡು ಉಲ್ಲಾಸಪಟ್ಟನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ನಿಮ್ಮ ಮೂಲಪುರುಷನಾದ ಅಬ್ರಹಾಮನು ನನ್ನ ದಿನವನ್ನು ತಾನು ನೋಡುತ್ತೇನೆಂದು ಉಲ್ಲಾಸಪಟ್ಟನು ಮತ್ತು ಅದನ್ನು ನೋಡಿ ಸಂತೋಷಪಟ್ಟನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ತಾನು ಕಾಣುವನೆಂದು ಹಿಗ್ಗಿದನು. ಆತನು ಅದನ್ನು ಕಂಡೂ ಆಯಿತು; ಹಿಗ್ಗಿಯೂ ಆಯಿತು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56 ನಿಮ್ಮ ಮೂಲಪುರುಷನಾದ ಅಬ್ರಹಾಮನು ನನ್ನ ದಿನವನ್ನು ತಾನು ನೋಡೇನೆಂದು ಉಲ್ಲಾಸಪಟ್ಟನು; ಅದನ್ನು ನೋಡಿ ಸಂತೋಷಗೊಂಡನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 ನಾನು ಬರುವ ದಿನವನ್ನು ತಾನು ನೋಡುವುದಾಗಿ ನಿಮ್ಮ ತಂದೆಯಾದ ಅಬ್ರಹಾಮನು ಬಹು ಸಂತೋಷಪಟ್ಟನು. ಅವನು ಆ ದಿನವನ್ನು ಕಂಡು ಬಹು ಸಂತೋಷಗೊಂಡನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

56 ಮಿಯಾ ಯೆತಲೊ ಎಳ್ ಬಗುಕ್ ಮನುನ್ ತುಮ್ಚ್ಯಾ ಬಾಬಾ ಅಬ್ರಾಹಾಮಾಕ್ ಲೈ ಮನ್ ಹೊತ್ತೊ ತೆನಿ ತೊ ಎಳ್ ಬಗಟ್ಲ್ಯಾನ್ ಅನಿ ತೆಕಾ ಲೈ ಖುಶಿ ಹೊಲಿ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:56
11 ತಿಳಿವುಗಳ ಹೋಲಿಕೆ  

ಈ ಎಲ್ಲಾ ಜನರು ಮರಣ ಹೊಂದುವಾಗಲೂ ವಿಶ್ವಾಸದಿಂದ ಜೀವಿಸುವವರಾಗಿದ್ದರು. ವಾಗ್ದಾನದ ಸಂಗತಿಗಳನ್ನು ಅವರು ಹೊಂದಲಿಲ್ಲ. ಅವುಗಳನ್ನು ಅವರು ದೂರದಿಂದಲೇ ನೋಡಿ ಸ್ವಾಗತಿಸಿದರು. ತಾವು ಭೂಮಿಯ ಮೇಲೆ ಪರದೇಶದವರೂ ಅಪರಿಚಿತರೂ ಆಗಿದ್ದೇವೆಂದು ಒಪ್ಪಿಕೊಂಡರು.


ನೀನು ನನಗೆ ವಿಧೇಯನಾದದ್ದರಿಂದ, ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂದರು.


ಯೆಹೂದ್ಯರು ಯೇಸುವಿಗೆ, “ಅಬ್ರಹಾಮನು ನಮ್ಮ ತಂದೆ,” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನು ಮಾಡಿದ ಕ್ರಿಯೆಗಳನ್ನೇ ಮಾಡುತ್ತಿದ್ದಿರಿ.


ನಾನು ಸತ್ಯವಾಗಿ ನಿಮಗೆ ಹೇಳುತ್ತೇನೆ, ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೀವು ಕಾಣುವಂಥವುಗಳನ್ನು ಕಾಣಬೇಕೆಂದು ಅಪೇಕ್ಷಿಸಿದರೂ ಕಾಣಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ.


ಏಕೆಂದರೆ ಅನೇಕ ಪ್ರವಾದಿಗಳು ಮತ್ತು ಅರಸರು ನೀವು ಕಾಣುವಂಥವುಗಳನ್ನು ಕಾಣಬೇಕೆಂದು ಅಪೇಕ್ಷಿಸಿದರೂ ಕಾಣಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ಇವರೆಲ್ಲರೂ ತಮ್ಮ ನಂಬಿಕೆಯ ಮೂಲಕ ಒಳ್ಳೆಯ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವಾದದ್ದನ್ನು ಹೊಂದಲಿಲ್ಲ.


ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು. ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲಲು ಹುಡುಕುತ್ತೀರಿ.


ಯೇಸು ಅವರಿಗೆ, “ನಾನು ನಿಮಗೆ ಹೇಳಿದೆನು. ಆದರೆ ನೀವು ನಂಬುತ್ತಾ ಇಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು