Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:18 - ಕನ್ನಡ ಸಮಕಾಲಿಕ ಅನುವಾದ

18 ದೃಷ್ಟಿಹೊಂದಿದವನ ತಂದೆತಾಯಿಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ, ಅವನು ಕುರುಡನಾಗಿದ್ದು ದೃಷ್ಟಿಹೊಂದಿದನೆಂದು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ದೃಷ್ಟಿ ಹೊಂದಿದವನ ವಿಷಯವಾಗಿ ಆ ಯೆಹೂದ್ಯರು; ಅವನ ತಂದೆತಾಯಿಗಳನ್ನು ಕರೆದು ವಿಚಾರಿಸುವವರೆಗೂ, ಅವನು ಹುಟ್ಟು ಕುರುಡನಾಗಿದ್ದು, ಈಗ ದೃಷ್ಟಿ ಹೊಂದಿದ್ದಾನೆಂಬುದನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ಕುರುಡನು ಹಿಂದೆ ನಿಜವಾಗಿಯೂ ಕುರುಡನಾಗಿದ್ದು ಈಗ ದೃಷ್ಟಿಪಡೆದಿದ್ದಾನೆ ಎಂದು ಯೆಹೂದ್ಯ ಅಧಿಕಾರಿಗಳು ನಂಬಲು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ಕಣ್ಣುಬಂದವನ ವಿಷಯವಾಗಿ ಆ ಯೆಹೂದ್ಯರು - ಇವನು ಕುರುಡನಾಗಿದ್ದು ಈಗ ಕಣ್ಣುಳ್ಳವನಾದನೆಂದು ನಂಬದೆ ಅವನ ತಂದೆತಾಯಿಗಳನ್ನು ಕರೆಯಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈ ಮನುಷ್ಯನು ಮೊದಲು ಕುರುಡನಾಗಿದ್ದನು. ಆದರೆ ಈಗ ಇವನಿಗೆ ಗುಣವಾಗಿದೆ ಎಂದು ಯೆಹೂದ್ಯನಾಯಕರುಗಳು ನಂಬಲಿಲ್ಲ. ಆದ್ದರಿಂದ ಅವರು ಅವನ ತಂದೆತಾಯಿಗಳನ್ನು ಕರೆಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೊ ಕುಡ್ಡೊ ಹೊತ್ತೊ, ಅತ್ತಾ ತೆಕಾ ದಿಸುಲಾಲಾ ಮನುನ್ ಅಜುನ್ಬಿ ಜುದೆವಾಂಚ್ಯಾ ಫುಡಾರ್‍ಯಾಕ್ನಿ ವಿಶ್ವಾಸ್‍ ನತ್ತೊ, ತಸೆಮನುನ್ ತೆನಿ ತ್ಯಾ ಮಾನ್ಸಾಚ್ಯಾ ಬಾಯ್-ಬಾಬಾಕ್ ಬಲ್ವುನ್ ಘೆವ್ನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:18
11 ತಿಳಿವುಗಳ ಹೋಲಿಕೆ  

ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಿಸೋಣ. ನಮ್ಮಲ್ಲಿ ಯಾರೂ ಆ ಜನರ ಅವಿಧೇಯತೆಯನ್ನು ಅನುಸರಿಸಿ, ನಾಶರಾಗದೇ ಇರೋಣ.


ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಭಯಪಟ್ಟಿದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ, ಅವರನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯ ನಾಯಕರು ಈ ಮೊದಲೇ ಗೊತ್ತುಮಾಡಿದ್ದರು.


ಒಬ್ಬರೇ ದೇವರಿಂದ ಬರುವ ಮಹಿಮೆಯನ್ನು ಹುಡುಕದೆ ಒಬ್ಬರಿಂದೊಬ್ಬರಿಗೆ ಬರುವ ಮಹಿಮೆಯನ್ನು ಸ್ವೀಕರಿಸುವ ನಿಮಗೆ ನಂಬಲು ಹೇಗೆ ಸಾಧ್ಯ?


ಯೆರೂಸಲೇಮಿನ ಯೆಹೂದ್ಯ ನಾಯಕರು, ಯಾಜಕರನ್ನು ಮತ್ತು ಲೇವಿಯರನ್ನು ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದರು.


“ಅದಕ್ಕೆ ಅಬ್ರಹಾಮನು ಅವನಿಗೆ, ‘ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನೇ ಅವರು ಕೇಳದೆ ಹೋದರೆ, ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವುದಿಲ್ಲ,’ ಎಂದು ಹೇಳಿದನು.”


ನಮ್ಮ ಸುದ್ದಿಯನ್ನು ಯಾರು ನಂಬಿದ್ದಾರೆ? ಯೆಹೋವ ದೇವರ ಬಾಹುವು ಯಾರಿಗೆ ಪ್ರಕಟವಾಯಿತು?


ಯೆಹೋವ ದೇವರೇ, ನಿಮ್ಮ ಕೈ ಮೇಲಕ್ಕೆ ಎತ್ತಲಾಗಿದೆ. ಆದರೆ ಅವರು ಅದನ್ನು ಕಾಣುವುದಿಲ್ಲ. ನಿಮ್ಮ ಜನರಿಗಾಗಿ ನಿಮ್ಮ ಉತ್ಸಾಹವನ್ನು ಅವರು ನೋಡಲಿ ಮತ್ತು ನಾಚಿಕೆಪಡಲಿ; ನಿನ್ನ ವಿರೋಧಿಗಳಿಗಾಗಿದ್ದ ಅಗ್ನಿಯು ಅದನ್ನು ದಹಿಸಿಬಿಡಲಿ.


ಆಗ ಲೋಟನು ಹೊರಟುಹೋಗಿ, ತನ್ನ ಪುತ್ರಿಯರನ್ನು ಗೊತ್ತುಮಾಡಿದ್ದ ಅಳಿಯಂದಿರ ಸಂಗಡ ಮಾತನಾಡಿ, “ಎದ್ದು ಈ ಸ್ಥಳದಿಂದ ಹೊರಡಿರಿ. ಏಕೆಂದರೆ ಯೆಹೋವ ದೇವರು ಈ ಪಟ್ಟಣವನ್ನು ನಾಶಮಾಡುವುದಕ್ಕಿದ್ದಾರೆ,” ಎಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಪರಿಹಾಸ್ಯಮಾಡುವಂತೆ ಕಾಣಿಸಿದನು.


ಅವರು, “ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಇವನಿಗೆ ಕಣ್ಣು ಕಾಣುವುದು ಹೇಗೆ?” ಎಂದು ಅವರನ್ನು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು