Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:22 - ಕನ್ನಡ ಸಮಕಾಲಿಕ ಅನುವಾದ

22 ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಭಯಪಟ್ಟಿದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ, ಅವರನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯ ನಾಯಕರು ಈ ಮೊದಲೇ ಗೊತ್ತುಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರು ಹೀಗೆ ಹೇಳಿದ್ದು ಯೆಹೂದ್ಯ ಅಧಿಕಾರಿಗಳ ಅಂಜಿಕೆಯಿಂದ. ಏಕೆಂದರೆ, ಯಾರಾದರೂ ಯೇಸುವನ್ನು ಲೋಕೋದ್ಧಾರಕ ಎಂದು ಒಪ್ಪಿಕೊಂಡರೆ ಅಂಥವರಿಗೆ ಪ್ರಾರ್ಥನಾಮಂದಿರದಿಂದ ಬಹಿಷ್ಕಾರ ಹಾಕಬೇಕೆಂದು ಅಧಿಕಾರಿಗಳು ಈ ಮೊದಲೇ ಗೊತ್ತುಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನ ತಂದೆತಾಯಿಗಳು ಯೆಹೂದ್ಯರಿಗೆ ಅಂಜಿದ ಕಾರಣ ಈ ಪ್ರಕಾರ ಹೇಳಿದರು. ಯಾಕಂದರೆ - ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡು ಹೇಳಿದರೆ ಅಂಥವನಿಗೆ ಬಹಿಷ್ಕಾರಹಾಕಬೇಕೆಂದು ಯೆಹೂದ್ಯರು ಅದಕ್ಕೆ ಮುಂಚೆ ಗೊತ್ತುಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಹೆದರಿಕೊಂಡಿದ್ದರಿಂದ ಹಾಗೆ ಹೇಳಿದರು. ಯೇಸುವನ್ನು ಕ್ರಿಸ್ತನೆಂದು ಹೇಳುವ ಯಾರನ್ನೇ ಆಗಲಿ ಸಭಾಮಂದಿರದಿಂದ ಬಹಿಷ್ಕರಿಸುವುದಾಗಿ ಯೆಹೂದ್ಯನಾಯಕರುಗಳು ಪ್ರಕಟಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜುದೆವಾಂಚ್ಯಾ ಫುಡಾರ್‍ಯಾಂಚ್ಯಾ ಭಿಂಯಾನ್ ತೆನಿ ಅದ್ದಿಚ್ ನಿರ್‍ದಾರ್ ಕರಲ್ಲ್ಯಾನಿ. ತ್ಯೆಚ್ಯಾ ಬಾಯ್ -ಬಾಬಾನಿ ಅಶೆ ಮಟ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ಜೆ ಕೊನ್ ಜೆಜುಕ್ ಮೆಸ್ಸಿಯಾ ಮನ್ತಾ ತೆಕಾ ಸಿನಾಗೊಗಾತ್ನಾ ಭಾಯ್ರ್ ಘಾಲ್ತಲೆ ಮನುನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:22
24 ತಿಳಿವುಗಳ ಹೋಲಿಕೆ  

ಜನರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು. ಆದರೆ ನಿಮ್ಮನ್ನು ಕೊಲ್ಲುವವರು ದೇವರಿಗೆ ಸೇವೆ ಸಲ್ಲಿಸುತ್ತಾರೆಂದು ಭಾವಿಸುವ ಸಮಯ ಬರುತ್ತದೆ.


ಆದರೂ ಯೆಹೂದ್ಯರ ಭಯದ ನಿಮಿತ್ತ ಯೇಸುವಿನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.


ಮನುಷ್ಯಪುತ್ರನಾದ ನನ್ನ ನಿಮಿತ್ತ ಜನರು ನಿಮ್ಮನ್ನು ದ್ವೇಷಮಾಡಿ, ನಿಮ್ಮನ್ನು ಬಹಿಷ್ಕರಿಸಿ, ನಿಂದಿಸಿ, ನಿಮ್ಮ ಹೆಸರನ್ನು ಕೆಟ್ಟದೆಂದು ತಿರಸ್ಕರಿಸಿದರೆ ನೀವು ಧನ್ಯರು.


ಅದಕ್ಕೆ ಅವರು, “ನೀನು ಪಾಪದಲ್ಲಿಯೇ ಪೂರ್ಣವಾಗಿ ಹುಟ್ಟಿದವನು. ನೀನು ನಮಗೆ ಬೋಧಿಸುತ್ತೀಯಾ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಅವರು ಗಮಲಿಯೇಲನ ಸಲಹೆಯನ್ನು ಒಪ್ಪಿದರು. ಅವರು ಅಪೊಸ್ತಲರನ್ನು ಕರೆಯಿರಿ ಅವರನ್ನು ಛಡಿಗಳಿಂದ ಹೊಡೆಸಿ, ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಆಜ್ಞಾಪಿಸಿ ಬಿಡುಗಡೆ ಮಾಡಿದರು.


ಅವರೆಲ್ಲರೂ ಜನರಿಂದ ಬಹಳ ಗೌರವಕ್ಕೆ ಪಾತ್ರರಾಗಿದ್ದರೂ ಬೇರೆಯವರು ಅವರ ಜೊತೆ ಸೇರಲು ಧೈರ್ಯಗೊಳ್ಳಲಿಲ್ಲ.


ಅವರು ಶಿಷ್ಯರನ್ನು ಸಭೆಯಲ್ಲಿ ಕರೆದು, “ಯೇಸುವಿನ ಹೆಸರಿನಲ್ಲಿ ಮಾತನಾಡಲೂಬಾರದು, ಬೋಧಿಸಲೂಬಾರದು,” ಎಂದು ಆಜ್ಞಾಪಿಸಿದರು.


ಅದೇ ಭಾನುವಾರದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿದ್ದ ಮನೆಯ ಬಾಗಿಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದು ಅವರಿಗೆ ಹೇಳಿದರು.


ತರುವಾಯ ಯೆಹೂದ್ಯರ ಭಯದ ನಿಮಿತ್ತದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಯೇಸುವಿನ ದೇಹವನ್ನು ತೆಗೆದುಕೊಂಡು ಹೋದನು.


“ನೀನು ಯಾರಿಗೆ ಹೆದರಿ, ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸ ಮಾಡಿರುವೆ. ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ, ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


“ನಾನೇ, ನಾನೇ ನಿಮ್ಮನ್ನು ಸಂತೈಸುವವನಾಗಿದ್ದೇನೆ. ಹಾಗಾದರೆ ಸಾಯುವ ಮನುಷ್ಯನಿಗೂ, ಹುಲ್ಲಿನಂತ್ತಿರುವ ಮಾನವನಿಗೂ ಭಯಪಡುವ ನೀನು ಯಾರು?


ನೀತಿಯನ್ನು ಅರಿತು, ನನ್ನ ನಿಯಮವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ, ನನಗೆ ಕಿವಿಗೊಡಿರಿ. ಮನುಷ್ಯರ ನಿಂದೆಗೆ ಭಯಪಡಬೇಡಿರಿ, ಅವರ ದೂಷಣೆಗೆ ಹೆದರಬೇಡಿರಿ.


ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.


ಯೆರೂಸಲೇಮಿನ ಯೆಹೂದ್ಯ ನಾಯಕರು, ಯಾಜಕರನ್ನು ಮತ್ತು ಲೇವಿಯರನ್ನು ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದರು.


ದೃಷ್ಟಿಹೊಂದಿದವನ ತಂದೆತಾಯಿಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ, ಅವನು ಕುರುಡನಾಗಿದ್ದು ದೃಷ್ಟಿಹೊಂದಿದನೆಂದು ನಂಬಲಿಲ್ಲ.


ಆದರೆ ಇವನಿಗೆ ಈಗ ಕಣ್ಣು ಕಾಣುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೆಂದೂ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ; ಇವನು ಪ್ರಾಯದವನಾಗಿದ್ದಾನೆ. ಇವನೇ ತನ್ನ ವಿಷಯವಾಗಿ ಮಾತನಾಡುವನು,” ಎಂದು ಹೇಳಿದರು.


ಯೆಹೂದಿ ನಾಯಕರು ಅವನನ್ನು ಸಭಾಮಂದಿರದಿಂದ ಹೊರಗೆ ಹಾಕಿದ್ದನ್ನು ಯೇಸು ಕೇಳಿ, ಅವನನ್ನು ಕಂಡು, “ನೀನು ಮನುಷ್ಯಪುತ್ರನನ್ನು ನಂಬುತ್ತೀಯಾ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು