Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:24 - ಕನ್ನಡ ಸಮಕಾಲಿಕ ಅನುವಾದ

24 ಅವರು ಕುರುಡನಾಗಿದ್ದವನನ್ನು ಮತ್ತೊಮ್ಮೆ ಕರೆದು ಅವನಿಗೆ, “ದೇವರಿಗೆ ಮಹಿಮೆಯನ್ನು ಸಲ್ಲಿಸು, ಆ ಮನುಷ್ಯ ಪಾಪಿ ಎಂದು ನಾವು ಬಲ್ಲೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು, “ನೀನು ದೇವರಿಗೆ ಗೌರವವನ್ನು ಸಲ್ಲಿಸು; ಈ ಮನುಷ್ಯನು ಪಾಪಿಷ್ಠನೆಂದು ನಾವು ಬಲ್ಲೆವು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅಧಿಕಾರಿಗಳು ಆ ಹುಟ್ಟು ಕುರುಡನನ್ನು ಮತ್ತೆ ಕರೆಯಿಸಿ, “ನೀನು ದೇವರ ಮುಂದೆ ಪ್ರಮಾಣಮಾಡಿ ಹೇಳು. ಆ ಮನುಷ್ಯ ಪಾಪಿಯೆಂದು ನಮಗೆ ಗೊತ್ತು,” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು - ನೀನು ದೇವರಿಗೆ ಮಾನಬರುವಂತೆ ಹೇಳು; ಆ ಮನುಷ್ಯನು ಭಕ್ತಿಹೀನನೆಂದು ನಾವು ಬಲ್ಲೆವು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೂದ್ಯನಾಯಕರು ಕುರುಡನಾಗಿದ್ದ ಆ ಮನುಷ್ಯನನ್ನು ಒಳಗೆ ಕರೆದು, “ನೀನು ದೇವರನ್ನು ಮಹಿಮೆಪಡಿಸಬೇಕು. ಈ ಮನುಷ್ಯನು (ಯೇಸು) ಪಾಪಿಯೆಂದು ನಮಗೆ ಗೊತ್ತಿದೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅನಿ ಎಗ್ದಾ ದೊನ್ವೆಪಟಿ ತ್ಯಾ ಉಪಾಜಲ್ಲ್ಯಾಕ್ನಾ ಕುಡ್ಡೊ ಹೊತ್ತ್ಯಾ ಮಾನ್ಸಾಕ್ ಪಾರಿಜೆವಾನಿ ಬಲ್ವುಲ್ಯಾನಿ, “ಅನಿ ದೆವಾಚ್ಯಾ ನಾವಾನ್ ಮಹಿಮಾ ಘಾಲುನ್ ಅಮ್ಕಾ ಖರೆಚ್! ಸಾಂಗ್!. ತುಕಾ ಬರೆ ಕರಲ್ಲೊ ಮಾನುಸ್ ಪಾಪಿ ಮನುನ್ ಅಮ್ಕಾ ಗೊತ್ತ್ ಹಾಯ್”. ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:24
22 ತಿಳಿವುಗಳ ಹೋಲಿಕೆ  

ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ. ಏಕೆಂದರೆ ಆತನು ಯೆಹೂದ್ಯರ ಸಬ್ಬತ್ ದಿನವನ್ನು ಕೈಗೊಳ್ಳುವುದಿಲ್ಲ,” ಎಂದರು. ಬೇರೆ ಕೆಲವರು, “ಹಾಗಾದರೆ ಪಾಪಿಯಾದ ಮನುಷ್ಯನು ಇಂಥ ಸೂಚಕಕಾರ್ಯಗಳನ್ನು ಮಾಡುವುದು ಹೇಗೆ?” ಎಂದರು. ಹೀಗೆ ಅವರಲ್ಲಿ ಭೇದ ಉಂಟಾಯಿತು.


ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ನೀನು ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಘನಪಡಿಸಿ, ಅವರಿಗೆ ಸ್ತೋತ್ರ ಸಲ್ಲಿಸು. ಏನು ಮಾಡಿದೆಯೋ ಅದನ್ನು ನನಗೆ ತಿಳಿಸು, ನನಗೆ ಮರೆಮಾಡಬೇಡ,” ಎಂದನು.


ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ನೋಡಿದಾಗ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡುಹೋಗಿ ಶಿಲುಬೆಗೆ ಹಾಕಿರಿ. ಏಕೆಂದರೆ ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ,” ಎಂದನು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ಯೆಹೂದಿ ನಾಯಕರು, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ್ಲ,” ಎಂದು ಹೇಳಿದರು.


ಜನರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು. ಆದರೆ ನಿಮ್ಮನ್ನು ಕೊಲ್ಲುವವರು ದೇವರಿಗೆ ಸೇವೆ ಸಲ್ಲಿಸುತ್ತಾರೆಂದು ಭಾವಿಸುವ ಸಮಯ ಬರುತ್ತದೆ.


ಇನ್ನು ಮೇಲೆ ನಾನು ನಿಮ್ಮೊಂದಿಗೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕದ ಅಧಿಪತಿಯು ಬರಲಿದ್ದಾನೆ. ನನ್ನಲ್ಲಿ ಅವನಿಗೆ ಸೇರಿದ್ದು ಒಂದೂ ಇರುವುದಿಲ್ಲ.


ಅದಕ್ಕೆ ಯೇಸು, “ನನಗೆ ದೆವ್ವ ಹಿಡಿದಿಲ್ಲ. ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ. ನೀವು ನನ್ನನ್ನು ಅವಮಾನಪಡಿಸುತ್ತೀರಿ.


ನನ್ನಲ್ಲಿ ಪಾಪವಿದೆಯೆಂದು ರುಜುವಾತು ಪಡಿಸುವವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಹೇಳುವುದಾದರೆ ನೀವು ನನ್ನನ್ನು ಏಕೆ ನಂಬುವುದಿಲ್ಲ?


ಎಲ್ಲರೂ ತಂದೆಯನ್ನು ಸನ್ಮಾನಿಸುವಂತೆಯೇ ಪುತ್ರನನ್ನೂ ಸನ್ಮಾನಿಸಬೇಕು. ಪುತ್ರನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿದ ತಂದೆಯನ್ನೂ ಸನ್ಮಾನಿಸುವುದಿಲ್ಲ.


ಇದನ್ನು ಕಂಡವರೆಲ್ಲರೂ, “ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ,” ಎಂದು ಗೊಣಗುಟ್ಟಿದರು.


ಫರಿಸಾಯರು ಮತ್ತು ನಿಯಮ ಬೋಧಕರು, “ಈತನು ಪಾಪಿಗಳನ್ನು ಸ್ವೀಕರಿಸಿ ಅವರೊಂದಿಗೆ ಊಟಮಾಡುತ್ತಾನೆ,” ಎಂದು ಗೊಣಗುಟ್ಟಿದರು.


ಆಗ ಯೇಸುವನ್ನು ಆಮಂತ್ರಿಸಿದ ಫರಿಸಾಯನು, ಅದನ್ನು ಕಂಡು ತನ್ನೊಳಗೆ, “ಈ ಮನುಷ್ಯ ಒಬ್ಬ ಪ್ರವಾದಿಯಾಗಿದ್ದರೆ, ತನ್ನನ್ನು ಮುಟ್ಟುತ್ತಿದ್ದವಳು ಯಾರು, ಎಂಥಾ ಹೆಂಗಸು ಎಂದು ತಿಳಿದುಕೊಳ್ಳುತ್ತಿದ್ದನು. ಅವಳು ಒಬ್ಬ ಪಾಪಿ,” ಎಂದು ಅಂದುಕೊಂಡನು.


ಯೇಸುವಿನೊಂದಿಗೆ ಇಬ್ಬರು ಕಳ್ಳರನ್ನು ತಂದು, ಒಬ್ಬನನ್ನು ಬಲಗಡೆಯಲ್ಲಿ ಇನ್ನೊಬ್ಬನನ್ನು ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.


ಯೆಹೋವ ದೇವರ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! “ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, ‘ಯೆಹೋವ ದೇವರು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ’ ಎಂದು ಹೇಳಿದ್ದಾರಲ್ಲಾ. ಅವರಿಗಂತೂ ಅವಮಾನವಾಗುವುದು.


ಆದ್ದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರ ಮುಂದೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತದ ಪ್ರಕಾರಮಾಡಿ, ಈ ದೇಶದ ಜನರಿಂದಲೂ, ಅನ್ಯ ಸ್ತ್ರೀಯರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ,” ಎಂದನು.


ಅದಕ್ಕೆ ಅವನು, “ಅವರು ಪಾಪಿಯೋ ಏನೋ ನನಗೆ ಗೊತ್ತಿಲ್ಲ. ಒಂದು ಮಾತ್ರ ಬಲ್ಲೆ, ನಾನು ಕುರುಡನಾಗಿದ್ದೆನು; ಈಗ ನನಗೆ ಕಾಣುತ್ತದೆ,” ಎಂದು ಉತ್ತರಕೊಟ್ಟನು.


ಅದೇ ಗಳಿಗೆಯಲ್ಲಿ, ಮಹಾ ಭೂಕಂಪ ಉಂಟಾಗಿ ಆ ಪಟ್ಟಣದ ಹತ್ತರಲ್ಲೊಂದು ಭಾಗವು ಬಿದ್ದುಹೋಯಿತು. ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರಿಗೆ ಮಹಿಮೆಯನ್ನು ಸಲ್ಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು