ಯೋಹಾನ 9:31 - ಕನ್ನಡ ಸಮಕಾಲಿಕ ಅನುವಾದ31 ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲ; ಆದರೆ ಯಾರು ದೇವರಿಗೆ ಭಯಪಡುವವರಾಗಿದ್ದು ಅವರ ಚಿತ್ತದಂತೆ ನಡೆಯುತ್ತಾರೋ, ಅಂಥವರಿಗೆ ಕಿವಿಗೊಡುತ್ತಾರೆಂದು ನಾವು ಬಲ್ಲೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ದೇವರು ಪಾಪಿಗಳಿಗೆ ಓಗೊಡುವುದಿಲ್ಲ. ಯಾರು ಭಕ್ತಿಯಿಂದ ಅವರ ಚಿತ್ತದಂತೆ ನಡೆಯುತ್ತಾರೋ ಅವರಿಗೆ ಓಗೊಡುತ್ತಾರೆಂದು ನಮಗೆಲ್ಲಾ ಚೆನ್ನಾಗಿ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಭಕ್ತಿಹೀನರ ಪ್ರಾರ್ಥನೆಯನ್ನು ದೇವರು ಕೇಳುವದಿಲ್ಲ; ಯಾವನು ಭಕ್ತನಾಗಿದ್ದು ಆತನ ಚಿತ್ತದಂತೆ ನಡೆಯುತ್ತಾನೋ ಅವನ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲವೆಂಬುದು ನಮ್ಮೆಲರಿಗೂ ಗೊತ್ತಿದೆ. ಆದರೆ ದೇವರು ತನ್ನನ್ನು ಆರಾಧಿಸುವವನಿಗೂ ಮತ್ತು ತನಗೆ ವಿಧೇಯನಾಗುವವನಿಗೂ ಕಿವಿಗೊಡುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಪಾಪಿ ಲೊಕಾಂಚೆ ದೆವ್ ಆಯ್ಕಿನಾ, ಮನುನ್ ಅಮ್ಕಾ ಗೊತ್ತ್ ಹಾಯ್, ಜೆ ಕೊನ್ ತೆಕಾ ಮಾನ್ ದಿತಾ ತೆಂಚೆ ದೆವ್ ಆಯಿಕ್ತಾ, ಅನಿ ತೆಂಕಾ ಪಾಜೆ ಹೊಲ್ಲೆ ಕರ್‍ತಾ. ಅಧ್ಯಾಯವನ್ನು ನೋಡಿ |
ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು.