Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:7 - ಕನ್ನಡ ಸಮಕಾಲಿಕ ಅನುವಾದ

7 ಅವನಿಗೆ, “ಹೋಗು, ಸಿಲೋವ ಕೊಳದಲ್ಲಿ ತೊಳೆದುಕೋ,” ಎಂದರು. ಸಿಲೋವ ಎಂದರೆ, “ಕಳುಹಿಸಲಾದವನು” ಎಂದರ್ಥ. ಕುರುಡನು ಹೋಗಿ ಕಣ್ಣು ತೊಳೆದುಕೊಂಡು ದೃಷ್ಟಿಹೊಂದಿದವನಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ಅವನಿಗೆ, “ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ” ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 (’ಶಿಲೋವಾಮ್’ ಎಂದರೆ ಕಳುಹಿಸಲಾದವನು ಎಂದರ್ಥ). ಅದರಂತೆಯೇ ಆ ಕುರುಡನು ಹೋಗಿ ಕಣ್ಣುಗಳನ್ನು ತೊಳೆದುಕೊಂಡನು; ಹಿಂದಿರುಗಿದಾಗ ಅವನಿಗೆ ಕಣ್ಣು ಬಂದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನು ಸಿಲೋವ ಕೊಳಕ್ಕೆ ಹೋಗಿ ತೊಳಕೋ ಅಂದನು. (ಸಿಲೋವ ಎಂಬ ಮಾತಿಗೆ ಕಳುಹಿಸಲ್ಪಟ್ಟವನು ಎಂದರ್ಥ.) ಅವನು ಹೋಗಿ ತೊಳಕೊಂಡು ಕಣ್ಣು ಹೊಂದಿದವನಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೇಸು ಆ ಮನುಷ್ಯನಿಗೆ, “ಹೋಗಿ ಸಿಲೋವ ಕೊಳದಲ್ಲಿ ತೊಳೆದುಕೊ” ಎಂದು ಹೇಳಿದನು. (ಸಿಲೋವ ಅಂದರೆ “ಕಳುಹಿಸಲ್ಪಟ್ಟವನು.”) ಅಂತೆಯೇ ಅವನು ಹೋಗಿ ತೊಳೆದುಕೊಂಡನು. ಆ ಕೂಡಲೇ ಅವನಿಗೆ ದೃಷ್ಟಿಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅನಿ ಜಾವ್ನ್ ಸಿಲೊಆಮ್ ತಳ್ಯಾತ್ ಧುವ್ನ್ ಘೆ ಮಟ್ಲ್ಯಾನ್ ಸಿಲೊಆಮ್ ಮಟ್ಲ್ಯಾರ್ ಧಾಡಲ್ಲೊ ಮನುನ್ ಅರ್ತ್ ತನ್ನಾ ತೊ ಮಾನುಸ್ ಗೆಲೊ ಅನಿ ಅಪ್ನಾಚೆ ತೊಂಡ್ ಧುವ್ನ್ ಘೆವ್ನ್ ಯೆಲೊ. ತನ್ನಾ ತೆಕಾ ದಿಸುಕ್‍ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:7
21 ತಿಳಿವುಗಳ ಹೋಲಿಕೆ  

ಆಗ, ಕುರುಡರ ಕಣ್ಣು ಕಾಣುವುದು. ಕಿವುಡರ ಕಿವಿಗಳು ಕೇಳಿಸುವುವು.


ಅವರಲ್ಲಿ ಕೆಲವರು, “ಆ ಕುರುಡನ ಕಣ್ಣುಗಳನ್ನು ತೆರೆದ ಈತನು ಲಾಜರನನ್ನೂ ಸಾಯದಂತೆ ಮಾಡಬಾರದಿತ್ತೆ?” ಎಂದರು.


ಅವನು, “ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನ ಲೇಪಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ,’ ಎಂದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು, ನನಗೆ ದೃಷ್ಟಿ ಬಂತು,” ಎಂದನು.


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


“ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ ರೆಮಲ್ಯನ ಮಗನನ್ನೂ ನೆಚ್ಚಿಕೊಂಡು ಮೆರೆದಿದ್ದರಿಂದ,


ಯೆಹೋವ ದೇವರು ಕುರುಡರ ಕಣ್ಣುಗಳನ್ನು ತೆರೆಯುತ್ತಾರೆ. ಅವರು ದೀನರನ್ನು ಎತ್ತುತ್ತಾರೆ. ನೀತಿವಂತರನ್ನು ಪ್ರೀತಿಸುತ್ತಾರೆ.


ಇಲ್ಲವೆ ಸಿಲೋವ ಎಂಬಲ್ಲಿ ಗೋಪುರವು ಬಿದ್ದು ಸತ್ತು ಹೋದ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ದೋಷಿಗಳೆಂದು ಭಾವಿಸುತ್ತೀರೋ?


ಬುಗ್ಗೆಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಮಿಚ್ಪದ ನಾಡೊಡೆಯನೂ, ಕೊಲ್ಹೋಜೆಯ ಮಗನೂ ಆದ ಶಲ್ಲೂನ್, ಇವನು ಅದರ ಗೋಡೆಯನ್ನು ಕಟ್ಟಿ, ಅದಕ್ಕೆ ಮಾಳಿಗೆಯನ್ನು ಹಾಕಿ, ಕದ ತಿರುಗಣಿ ಅಗುಳಿಗಳನ್ನು ಹಚ್ಚಿ, ದಾವೀದನ ನಗರದಿಂದಿಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು.


ಅದಕ್ಕೆ ಯೆಹೋವ ದೇವರು ಅವನಿಗೆ, “ಮನುಷ್ಯರಿಗೆ ಬಾಯಿ ಕೊಟ್ಟಾತನೂ ಯಾರು? ಮೂಕರನ್ನೂ ಕಿವುಡರನ್ನೂ ಮಾಡಿದಾತನೂ ಯಾರು? ದೃಷ್ಟಿಯುಳ್ಳವರನ್ನೂ ದೃಷ್ಟಿಯಿಲ್ಲದವರನ್ನೂ ಮಾಡಿದಾತನೂ ಯಾರು? ಯೆಹೋವ ದೇವರಾದ ನಾನೇ ಅಲ್ಲವೋ?


ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು.


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ಹೀಗಿರುವಾಗ ತಂದೆಯು ಪ್ರತಿಷ್ಠಿಸಿ ನನ್ನನ್ನು ಲೋಕಕ್ಕೆ ಕಳುಹಿಸಿಕೊಟ್ಟಿರುವ ನಾನು, ‘ದೇವರ ಪುತ್ರನಾಗಿದ್ದೇನೆ,’ ಎಂದು ಹೇಳಿದ್ದಕ್ಕೆ, ‘ನೀನು ದೇವದೂಷಣೆ ಮಾಡುತ್ತೀ,’ ಎಂದು ನೀವು ನನಗೆ ಹೇಳುತ್ತೀರಲ್ಲಾ?


ಯೇಸು, “ಕುರುಡರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನಾನು ನ್ಯಾಯತೀರ್ಪು ಮಾಡುವುದಕ್ಕಾಗಿ ಈ ಲೋಕಕ್ಕೆ ಬಂದಿದ್ದೇನೆ,” ಎಂದರು.


ಅದು ಯೆಹೂದ್ಯರಲ್ಲದವರಿಗೆ ಪ್ರಕಟಣೆಯ ಬೆಳಕೂ, ನಿಮ್ಮ ಪ್ರಜೆಯಾದ ಇಸ್ರಾಯೇಲರ ಮಹಿಮೆಯೂ ಆಗಿದೆ.”


ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡರಾದ ಜನರನ್ನು ಕರೆ.


ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು