Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಅವರು ಗಟ್ಟಿಯಾಗಿ ಅತ್ತು ಆಕೆಗೆ, “ನಿಶ್ಚಯವಾಗಿ ನಿಮ್ಮ ಜನರ ಬಳಿಗೆ ನಿಮ್ಮ ಸಂಗಡ ತಿರುಗಿ ಬರುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಅವರು ಬಹಳ ದುಃಖದಿಂದ ಗಟ್ಟಿಯಾಗಿ ಅತ್ತು ನಾವೂ ನಿನ್ನ ಜೊತೆಯಲ್ಲೇ ನಿನ್ನ ಸ್ವಜನರ ಬಳಿಗೆ ಬರುತ್ತೇವೆ ಅನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೆ ಅವರು, “ಇಲ್ಲಮ್ಮಾ, ನಿಮ್ಮನ್ನು ಬಿಟ್ಟು ಹೋಗಲಾರೆವು. ನಾವೂ ನಿಮ್ಮ ಜೊತೆಯಲ್ಲಿಯೇ ನಿಮ್ಮ ಸ್ವಜನರ ಬಳಿಗೆ ಬರುತ್ತೇವೆ,” ಎಂದು ಅಳಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾವೂ ನಿನ್ನ ಜೊತೆಯಲ್ಲೇ ನಿನ್ನ ಸ್ವಜನರ ಬಳಿಗೆ ಬರುತ್ತೇವೆ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವಳ ಸೊಸೆಯಂದಿರು, “ನಾವು ನಿನ್ನ ಸಂಗಡ ಬಂದು ನಿನ್ನ ಜನರೊಡನೆ ಇರುತ್ತೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:10
6 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಆ ದಿವಸಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು, ನಾವು ನಿಮ್ಮ ಸಂಗಡ ಬರುತ್ತೇವೆ, ಏಕೆಂದರೆ ನಿಮ್ಮ ಸಂಗಡ ದೇವರು ಇದ್ದಾರೆಂದು ಕೇಳಿದ್ದೇವೆ,” ಎಂದು ಹೇಳುವರು.


ನಿಮಗೆ ಭಯಪಡುವವರೆಲ್ಲರಿಗೂ, ನಿಮ್ಮ ಸೂತ್ರಗಳನ್ನು ಹಿಂಬಾಲಿಸುವವರಿಗೂ ನಾನು ಮಿತ್ರನಾಗಿದ್ದೇನೆ.


ಭೂಲೋಕದಲ್ಲಿರುವ ದೇವಜನರ ಕುರಿತು, “ಇವರೇ ನನಗೆ ಶ್ರೇಷ್ಠರು. ಇವರಲ್ಲಿಯೇ ನನ್ನ ಎಲ್ಲಾ ಆನಂದವು,” ಎಂದು ಹೇಳುವೆನು.


ನೀವು ಮದುವೆಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದುವಂತೆ, ಯೆಹೋವ ದೇವರು ಆಶೀರ್ವದಿಸಲಿ,” ಎಂದು ಹೇಳಿದಳು. ನಂತರ ನೊವೊಮಿಯು ಅವರಿಗೆ ಮುದ್ದಿಟ್ಟಳು.


ಅದಕ್ಕೆ ನೊವೊಮಿಯು, “ಬೇಡ ನನ್ನ ಮಕ್ಕಳೇ, ನೀವು ಹಿಂತಿರುಗಿ ಹೋಗಿರಿ. ನನ್ನ ಸಂಗಡ ಏಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ಮುಂದೆ ನನ್ನ ಗರ್ಭದಲ್ಲಿ ನನಗೆ ಪುತ್ರರಾಗುವರೋ?


ಆಕೆಯು ಇಬ್ಬರು ಸೊಸೆಯರೊಡನೆ ತಾನಿದ್ದ ಸ್ಥಳದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ಹೊರಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು