Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:11 - ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ನೊವೊಮಿಯು, “ಬೇಡ ನನ್ನ ಮಕ್ಕಳೇ, ನೀವು ಹಿಂತಿರುಗಿ ಹೋಗಿರಿ. ನನ್ನ ಸಂಗಡ ಏಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ಮುಂದೆ ನನ್ನ ಗರ್ಭದಲ್ಲಿ ನನಗೆ ಪುತ್ರರಾಗುವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಕೆಯು, “ನನ್ನ ಮಕ್ಕಳೇ, ನೀವು ನನ್ನೊಡನೆ ಬರುವುದೇಕೆ? ಹಿಂದಿರುಗಿ ಹೋಗಿರಿ. ನಿಮಗೆ ಗಂಡಂದಿರನ್ನು ಕೊಡುವುದಕ್ಕೆ ನನ್ನ ಗರ್ಭದಲ್ಲಿ ಬೇರೆ ಮಕ್ಕಳಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ನವೊಮಿ, “ಮಕ್ಕಳೇ, ನೀವು ಹಿಂತಿರುಗುವುದು ಒಳ್ಳೆಯದು. ನನ್ನ ಸಂಗಡ ಏಕೆ ಬರಬೇಕೆಂದಿರುವಿರಿ? ನೀವು ಪುನಃ ಮದುವೆಯಾಗುವುದಕ್ಕೆ ನನಗೆ ಬೇರೆ ಮಕ್ಕಳಿರುವರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಕೆಯು - ನನ್ನ ಮಕ್ಕಳೇ, ನೀವು ನನ್ನೊಡನೆ ಬರುವದೇಕೆ? ಹಿಂದಿರುಗಿ ಹೋಗಿರಿ; ನಿಮಗೆ ಗಂಡಂದಿರನ್ನು ಕೊಡುವದಕ್ಕೆ ನನ್ನ ಗರ್ಭದಲ್ಲಿ ಬೇರೆ ಮಕ್ಕಳಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ನೊವೊಮಿ, “ಬೇಡ ಮಕ್ಕಳೆ, ನಿಮ್ಮ ಮನೆಗಳಿಗೆ ಹಿಂತಿರುಗಿಹೋಗಿರಿ. ನನ್ನ ಸಂಗಡ ನೀವೇಕೆ ಬರಬೇಕು? ನಾನು ನಿಮಗೆ ಸಹಾಯ ಮಾಡಲಾರೆ. ನಿಮ್ಮನ್ನು ಮದುವೆಯಾಗುವಂಥ ಗಂಡುಮಕ್ಕಳು ನನ್ನಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:11
5 ತಿಳಿವುಗಳ ಹೋಲಿಕೆ  

ಸಹೋದರರು ಕೂಡಿ ವಾಸಮಾಡುವಾಗ, ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಆ ಸತ್ತವನ ಹೆಂಡತಿ ಮನೆಬಿಟ್ಟು ಅನ್ಯನನ್ನು ಮದುವೆಯಾಗಬಾರದು. ಗಂಡನ ಸಹೋದರನು ಅವಳನ್ನು ಹೆಂಡತಿಯಾಗಿ ತೆಗೆದುಕೊಂಡು ಮೈದುನನ ಕರ್ತವ್ಯವನ್ನು ಪೂರೈಸಬೇಕು.


ಆಗ ಯೆಹೂದನು ತನ್ನ ಸೊಸೆ ತಾಮಾರಳಿಗೆ, “ನನ್ನ ಮಗ ಶೇಲಹನು ದೊಡ್ಡವನಾಗುವವರೆಗೆ ವಿಧವೆಯಾಗಿದ್ದು, ನಿನ್ನ ತಂದೆಯ ಮನೆಯಲ್ಲಿರು,” ಎಂದನು. ಏಕೆಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳಾದರೋ ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.


ಆಗ ಅವರು ಗಟ್ಟಿಯಾಗಿ ಅತ್ತು ಆಕೆಗೆ, “ನಿಶ್ಚಯವಾಗಿ ನಿಮ್ಮ ಜನರ ಬಳಿಗೆ ನಿಮ್ಮ ಸಂಗಡ ತಿರುಗಿ ಬರುತ್ತೇವೆ,” ಎಂದರು.


ನನ್ನ ಮಕ್ಕಳೇ, ನೀವು ನಿಮ್ಮ ಮನೆಗೆ ಹಿಂದಿರುಗಿ ಹೋಗಿರಿ. ಏಕೆಂದರೆ ನಾನು ಪುನಃ ಮದುವೆಮಾಡಿಕೊಳ್ಳುವ ಪ್ರಾಯ ನನಗೆ ದಾಟಿಹೋಗಿದೆ. ಒಂದು ವೇಳೆ, ನಾನು ಸಂತಾನವಾಗುವ ನಿರೀಕ್ಷೆಯಿಂದ ಈ ಹೊತ್ತೇ ಮದುವೆಯಾಗಿ ಮಕ್ಕಳನ್ನು ಹೆತ್ತರೂ,


ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು, ತನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡದ ಹಾಗೆ, ತನ್ನ ವೀರ್ಯವನ್ನು ನೆಲದ ಮೇಲೆ ಚೆಲ್ಲಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು