Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:12 - ಕನ್ನಡ ಸಮಕಾಲಿಕ ಅನುವಾದ

12 ನನ್ನ ಮಕ್ಕಳೇ, ನೀವು ನಿಮ್ಮ ಮನೆಗೆ ಹಿಂದಿರುಗಿ ಹೋಗಿರಿ. ಏಕೆಂದರೆ ನಾನು ಪುನಃ ಮದುವೆಮಾಡಿಕೊಳ್ಳುವ ಪ್ರಾಯ ನನಗೆ ದಾಟಿಹೋಗಿದೆ. ಒಂದು ವೇಳೆ, ನಾನು ಸಂತಾನವಾಗುವ ನಿರೀಕ್ಷೆಯಿಂದ ಈ ಹೊತ್ತೇ ಮದುವೆಯಾಗಿ ಮಕ್ಕಳನ್ನು ಹೆತ್ತರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ಮತ್ತೊಬ್ಬನನ್ನು ಪುನಃ ಮದುವೆಮಾಡಿಕೊಳ್ಳುವ ಪ್ರಾಯವೂ ನನಗೆ ದಾಟಿಹೋಗಿದೆ. ಆದುದರಿಂದ ನನ್ನ ಮಕ್ಕಳೇ, ನೀವು ಹಿಂದಿರುಗಿ ಹೋಗಿರಿ. ಒಂದು ವೇಳೆ ಆ ನಿರೀಕ್ಷೆಯಿಂದ ಈ ಹೊತ್ತೇ ನಾನು ಪುನಃ ಮದುವೆಯಾಗಿ ಮಕ್ಕಳನ್ನು ಹೆತ್ತರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮಕ್ಕಳೇ, ನೀವು ಹಿಂದಿರುಗಿ ಹೋಗಿರಿ. ಪುನಃ ಮದುವೆಮಾಡಿಕೊಳ್ಳುವ ಪ್ರಾಯ ನನಗೆ ದಾಟಿಹೋಗಿದೆ. ಒಂದು ವೇಳೆ ಸಂತಾನಭಾಗ್ಯದ ನಿರೀಕ್ಷೆಯಿಂದ ಈ ಹೊತ್ತೇ ಮದುವೆಯಾಗಿ ಮಕ್ಕಳನ್ನು ಹಡೆದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮತ್ತೊಬ್ಬನನ್ನು ಮದುವೆಮಾಡಿಕೊಳ್ಳುವ ಪ್ರಾಯವೂ ನನಗೆ ದಾಟಿಹೋಯಿತು. ಆದದರಿಂದ ನನ್ನ ಮಕ್ಕಳೇ, ನೀವು ಹಿಂದಿರುಗಿ ಹೋಗಿರಿ. ಒಂದು ವೇಳೆ ನಿರೀಕ್ಷೆಯಿಂದ ಈ ಹೊತ್ತೇ ಒಬ್ಬ ಗಂಡನನ್ನು ಕೂಡಿ ಮಕ್ಕಳನ್ನು ಹೆತ್ತರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿಮ್ಮ ತವರೂರಿಗೆ ಹೋಗಿರಿ! ನಾನು ಇನ್ನೊಂದು ಮದುವೆಯಾಗುವುದಕ್ಕೂ ಸಾಧ್ಯವಿಲ್ಲ. ನನಗೆ ತುಂಬಾ ವಯಸ್ಸಾಗಿದೆ. ನಾನು ನಿಮಗೆ ಸಹಾಯ ಮಾಡಲಾರೆ. ನಾನು ಇಂದು ರಾತ್ರಿಯೇ ಗರ್ಭಧರಿಸಿ ಇಬ್ಬರು ಗಂಡುಮಕ್ಕಳನ್ನು ಹೆತ್ತರೂ ನಿಮಗೆ ಅದರಿಂದ ಪ್ರಯೋಜನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:12
5 ತಿಳಿವುಗಳ ಹೋಲಿಕೆ  

ಅಬ್ರಹಾಮನು ಅಡ್ಡಬಿದ್ದು ನಕ್ಕು, “ನೂರು ವರ್ಷದವನಿಗೆ ಮಗುವು ಹುಟ್ಟುವುದುಂಟೇ? ತೊಂಬತ್ತು ವರ್ಷದವಳಾದ ಸಾರಳು ಹೆರುವುದುಂಟೋ?” ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.


ವಯಸ್ಸಿನಲ್ಲಿ ಅರವತ್ತಕ್ಕೆ ಕಡಿಮೆಯಿಲ್ಲದ ವಿಧವೆಯರನ್ನು ಮಾತ್ರ ವಿಧವೆಯರ ಪಟ್ಟಿಯಲ್ಲಿ ಸೇರಿಸು. ಅಂಥವಳು ಗಂಡನಿಗೆ ನಂಬಿಗಸ್ತಳಾಗಿದ್ದಿರಬೇಕು.


ಆಗ ಯೆಹೂದನು ತನ್ನ ಸೊಸೆ ತಾಮಾರಳಿಗೆ, “ನನ್ನ ಮಗ ಶೇಲಹನು ದೊಡ್ಡವನಾಗುವವರೆಗೆ ವಿಧವೆಯಾಗಿದ್ದು, ನಿನ್ನ ತಂದೆಯ ಮನೆಯಲ್ಲಿರು,” ಎಂದನು. ಏಕೆಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳಾದರೋ ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.


ಅದಕ್ಕೆ ನೊವೊಮಿಯು, “ಬೇಡ ನನ್ನ ಮಕ್ಕಳೇ, ನೀವು ಹಿಂತಿರುಗಿ ಹೋಗಿರಿ. ನನ್ನ ಸಂಗಡ ಏಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ಮುಂದೆ ನನ್ನ ಗರ್ಭದಲ್ಲಿ ನನಗೆ ಪುತ್ರರಾಗುವರೋ?


ಅವರು ದೊಡ್ಡವರಾಗುವವರೆಗೂ ಕಾದು ಕೊಳ್ಳುವಿರೋ? ಗಂಡನಿಲ್ಲದೆ ನೀವು ತಾಳಿಕೊಂಡಿರುವಿರೋ? ಇಲ್ಲ, ನನ್ನ ಮಕ್ಕಳೇ; ಯೆಹೋವ ದೇವರ ಹಸ್ತವು ನನಗೆ ವಿರೋಧವಾಗಿದೆ. ಆದ್ದರಿಂದ ನಿಮಗಿಂತ ನನಗೆ ಬಹು ದುಃಖವಾಗಿದೆ,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು