Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:20 - ಕನ್ನಡ ಸಮಕಾಲಿಕ ಅನುವಾದ

20 ಆಗ ಆಕೆಯು ಅವರಿಗೆ, “ನನ್ನನ್ನು ‘ನೊವೊಮಿ’ ಎಂದು ಕರೆಯಬೇಡಿರಿ. ಮಾರಾ ಎಂದು ಕರೆಯಿರಿ ಏಕೆಂದರೆ ಸರ್ವಶಕ್ತರು ನನ್ನನ್ನು ಬಹು ದುಃಖದಿಂದ ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಕೆಯು ಅವರಿಗೆ, “ನನ್ನನ್ನು ನವೊಮಿಯೆಂದು ಕರೆಯಬೇಡಿರಿ; ನನ್ನನ್ನು ‘ಮಾರಾ’ (ಕಹಿ) ಎಂದು ಕರೆಯಿರಿ. ಏಕೆಂದರೆ, ಸರ್ವಶಕ್ತನಾದ ದೇವರು ಬಹಳ ತೀಕ್ಷ್ಣವಾಗಿ ನನ್ನ ಜೀವಿತವನ್ನು ಮಾರ್ಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಅವಳು, “ನನ್ನನ್ನು ‘ನವೊಮಿ’ ಎಂದು ಕರೆಯಬೇಡಿ; ‘ಮಾರಾ’ ಎಂದು ಕರೆಯಿರಿ. ಏಕೆಂದರೆ ಸರ್ವಶಕ್ತ ದೇವರು ನನ್ನನ್ನು ಬಹಳ ದುಃಖಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಕೆಯು ಅವರಿಗೆ - ನನ್ನನ್ನು ನೊವೊವಿುಯೆಂದು ಕರೆಯಬೇಡಿರಿ; ಸರ್ವಶಕ್ತನು ನನ್ನನ್ನು ಬಹಳವಾಗಿ ದುಃಖಪಡಿಸಿದ್ದಾನೆ. ಆದದರಿಂದ ಮಾರಾ ಎಂದು ಕರೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ನೊವೊಮಿಯು ಜನರಿಗೆ, “ನನ್ನನ್ನು ನೊವೊಮಿ ಎಂದು ಕರೆಯದೆ, ನನ್ನನ್ನು ಮಾರಾ ಎಂದು ಕರೆಯಿರಿ. ಏಕೆಂದರೆ ಸರ್ವಶಕ್ತನಾದ ದೇವರು ನನ್ನ ಜೀವನವನ್ನು ದುಃಖಕರವನ್ನಾಗಿ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:20
16 ತಿಳಿವುಗಳ ಹೋಲಿಕೆ  

ಸರ್ವಶಕ್ತರ ಬಾಣಗಳು ನನ್ನಲ್ಲಿ ನಾಟಿವೆ; ಅವುಗಳ ವಿಷವನ್ನು ನನ್ನ ಆತ್ಮವು ಹೀರುತ್ತಿದೆ; ದೇವರ ವಿಷಯವಾದ ಹೆದರಿಕೆಗಳು ನನ್ನನ್ನು ಸುತ್ತುವರೆದಿವೆ.


ಯಾವ ಶಿಕ್ಷೆಯಾದರೂ ಆ ಸಮಯಕ್ಕೆ ಸಂತೋಷಕರವಾಗಿ ತೋಚದೆ, ದುಃಖಕರವಾಗಿ ತೋಚುತ್ತದೆ. ತರುವಾಯ, ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನವುಳ್ಳ ನೀತಿಯ ಫಲವನ್ನು ಕೊಡುತ್ತದೆ.


ಹೌದು, ದೇವರು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ, ಬೆಳಗಿನತನಕ ತಡೆದುಕೊಂಡೇ ಇದ್ದೆನು. ನೀವು ನನ್ನನ್ನು ಅಂತ್ಯಗೊಳಿಸುತ್ತೀರಲ್ಲಾ ಎಂದು ಹಗಲುರಾತ್ರಿ ಪ್ರಲಾಪಿಸಿದೆನು.


ಬಾಲ್ಯದಿಂದಲೂ ನಾನು ಬಾಧಿತನು ಸಾಯುವುದಕ್ಕೆ ಸಿದ್ಧನೂ ಆಗಿದ್ದೇನೆ. ನಿಮ್ಮ ದಂಡನೆಯನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.


ಏಕೆಂದರೆ ನಾನು ದಿನವೆಲ್ಲಾ ಬಾಧೆಪಡುತ್ತಿದ್ದೇನೆ. ಪ್ರತಿ ಉದಯವೂ ನನಗೆ ಹೊಸ ಶಿಕ್ಷೆಯಾಗುತ್ತಿದೆ.


ದೇವರಿಂದಲೇ ನನಗೆ ಅನ್ಯಾಯವಾಗಿದೆ; ದೇವರು ತಮ್ಮ ಬಲೆಯನ್ನು ನನ್ನ ಮೇಲೆ ಬೀಸಿದ್ದಾರೆಂದು ನಿಮಗೆ ತಿಳಿದಿರಲಿ.


“ಇಗೋ, ದೇವರು ಗದರಿಸುವ ಮನುಷ್ಯನು ಧನ್ಯನು; ಸರ್ವಶಕ್ತರ ಶಿಕ್ಷೆಯನ್ನು ತಿರಸ್ಕರಿಸಬೇಡ.


“ನೀನು ದೇವರ ರಹಸ್ಯಗಳನ್ನು ಕಂಡುಕೊಳ್ಳುವಿಯಾ? ಸರ್ವಶಕ್ತರ ಮಿತಿಯನ್ನು ನಿನ್ನಿಂದ ಪರೀಕ್ಷಿಸಲಾದೀತೇ?


ನಾನೇ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಸರ್ವಶಕ್ತ ದೇವರೆಂದು ಪ್ರಕಟಿಸಿಗೊಂಡೆನು. ಆದರೆ ಯೆಹೋವ ದೇವರೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಪೂರ್ಣವಾಗಿ ತಿಳಿಸಲಿಲ್ಲ.


ಸರ್ವಶಕ್ತ ದೇವರು ನಿಮ್ಮ ಮತ್ತೊಬ್ಬ ಸಹೋದರನನ್ನೂ ಬೆನ್ಯಾಮೀನನನ್ನೂ ಕಳುಹಿಸಿಕೊಡುವ ಹಾಗೆ, ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ,” ಎಂದನು.


ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.


ಪಟ್ಟಣದಲ್ಲಿ ನಾನು ಆಲಯವನ್ನೇ ಕಾಣಲಿಲ್ಲ. ಏಕೆಂದರೆ ಕರ್ತ ಆಗಿರುವ ಸರ್ವಶಕ್ತ ದೇವರೂ, ಕುರಿಮರಿಯಾಗಿರುವವರೂ ಆಲಯವಾಗಿದ್ದಾರೆ.


“ನಾನೇ ಆದಿಯೂ ಅಂತ್ಯವೂ ಗತಕಾಲ, ವರ್ತಮಾನ, ಭವಿಷ್ಯತ್ಕಾಲಗಳಲ್ಲಿರುವವನೂ ಮತ್ತು ಸರ್ವಶಕ್ತನೂ ಆಗಿದ್ದೇನೆ,” ಎಂದು ಕರ್ತದೇವರು ಹೇಳುತ್ತಾರೆ.


ಅವರು ಮಾರಾ ಎಂಬಲ್ಲಿಗೆ ಬಂದ ಮೇಲೆ ಅಲ್ಲಿಯ ನೀರನ್ನು ಕುಡಿಯಲಾರದೆ ಇದ್ದರು; ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು “ಮಾರಾ” ಎಂದು ಕರೆಯಲಾಯಿತು.


ನಾನು ಉಸಿರಾಡಲು ಕಷ್ಟಪಡುತ್ತಿದ್ದೇನೆ, ದೇವರು ಕಹಿಯಾದವುಗಳಿಂದ ನನ್ನನ್ನು ತುಂಬಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು