Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:11 - ಕನ್ನಡ ಸಮಕಾಲಿಕ ಅನುವಾದ

11 ಆಗ ಬೋವಜನು ಅವಳಿಗೆ ಉತ್ತರವಾಗಿ, “ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿದ್ದೆಲ್ಲವೂ ನೀನು ನಿನ್ನ ತಂದೆತಾಯಿಗಳನ್ನೂ ನೀನು ಹುಟ್ಟಿದ ದೇಶವನ್ನೂ ಬಿಟ್ಟು ನೀನು ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಬೋವಜನು, “ನಿನ್ನ ಗಂಡನು ಮರಣ ಹೊಂದಿದ ದಿನದಿಂದ ನಿನ್ನ ಅತ್ತೆಗಾಗಿ ನೀನು ಮಾಡಿದ್ದೆಲ್ಲವೂ, ನನಗೆ ತಿಳಿದಿದೆ. ಹಾಗೂ ನಿನ್ನ ತಂದೆತಾಯಿಗಳನ್ನೂ, ಸ್ವದೇಶವನ್ನೂ ಬಿಟ್ಟು, ನಿನಗೆ ಅರಿಯದ ಜನರ ಬಳಿಗೆ ಬಂದಿರುವಿಯೆಂಬುದು ನನಗೆ ಚೆನ್ನಾಗಿ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಬೋವಜನು, “ನಿನ್ನ ಪತಿ ತೀರಿಹೋದಂದಿನಿಂದ ನೀನು ಅತ್ತೆಗಾಗಿ ಮಾಡಿದ್ದ ಎಲ್ಲವನ್ನೂ ಕುರಿತು ಕೇಳಿದ್ದೇನೆ. ನೀನು ಹೇಗೆ ನಿನ್ನ ತಂದೆತಾಯಿಗಳನ್ನು ಮತ್ತು ಸ್ವಂತ ನಾಡನ್ನು ಬಿಟ್ಟು, ಅಪರಿಚಿತರಾದ ಜನರ ಮಧ್ಯೆ ವಾಸಿಸಲು ಬಂದಿರುವೆ ಎಂಬುದು ಸಹ ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಬೋವಜನು - ನಿನ್ನ ಗಂಡನು ಸತ್ತ ಮೇಲೆ ನೀನು ಅತ್ತೆಯನ್ನು ಪ್ರೀತಿಸಿ ತಂದೆತಾಯಿಗಳನ್ನೂ ಸ್ವದೇಶವನ್ನೂ ಬಿಟ್ಟು ನೀನು ಈವರೆಗೂ ಅರಿಯದ ಜನರ ಬಳಿಗೆ ಬಂದಿರುವಿಯೆಂಬದು ನನಗೆ ಚೆನ್ನಾಗಿ ಗೊತ್ತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬೋವಜನು ಅವಳಿಗೆ, “ನೀನು ನಿನ್ನ ಅತ್ತೆಯಾದ ನೊವೊಮಿಗೆ ಮಾಡಿದ ಎಲ್ಲ ಸಹಾಯದ ಬಗ್ಗೆ ನನಗೆ ಗೊತ್ತಿದೆ. ನಿನ್ನ ಗಂಡನು ಸತ್ತ ಮೇಲೆಯೂ ನೀನು ಅವಳಿಗೆ ಸಹಾಯ ಮಾಡಿದೆ ಎಂಬುದು ನನಗೆ ಗೊತ್ತಿದೆ. ನೀನು ನಿನ್ನ ತಂದೆತಾಯಿಗಳನ್ನೂ ನಿನ್ನ ದೇಶವನ್ನೂ ಬಿಟ್ಟು ಈ ದೇಶಕ್ಕೆ ಬಂದಿರುವಿ ಎಂಬುದು ನನಗೆ ಗೊತ್ತು. ನಿನಗೆ ಈ ದೇಶದಲ್ಲಿ ಯಾರ ಪರಿಚಯವೂ ಇರಲಿಲ್ಲ; ಆದರೂ ನೀನು ನೊವೊಮಿಯ ಜೊತೆ ಇಲ್ಲಿಗೆ ಬಂದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:11
15 ತಿಳಿವುಗಳ ಹೋಲಿಕೆ  

ಆದ್ದರಿಂದ ನಿಮ್ಮಲ್ಲಿ ಯಾರಾದರೂ ತಮಗಿರುವುದನ್ನೆಲ್ಲಾ ಬಿಟ್ಟುಬಿಡದಿದ್ದರೆ, ಅವರು ನನ್ನ ಶಿಷ್ಯರಾಗಲಾರರು.


ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಎಲ್ಲವನ್ನು ಬಿಟ್ಟು, ಯೇಸುವನ್ನೇ ಹಿಂಬಾಲಿಸಿದರು.


ಕೇಳು ಮಗಳೇ, ಇದನ್ನು ಆಲೋಚಿಸಿ, ಕಿವಿಗೊಡು. ನಿಮ್ಮ ಜನರನ್ನೂ, ನಿಮ್ಮ ತಂದೆಯ ಮನೆಯನ್ನೂ ಮರೆತುಬಿಡು.


ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ ‘ಎದ್ದು ನಡೆ,’ ಎನ್ನುವುದೋ?


ಅದಕ್ಕೆ ನೊವೊಮಿಯು, “ಬೇಡ ನನ್ನ ಮಕ್ಕಳೇ, ನೀವು ಹಿಂತಿರುಗಿ ಹೋಗಿರಿ. ನನ್ನ ಸಂಗಡ ಏಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ಮುಂದೆ ನನ್ನ ಗರ್ಭದಲ್ಲಿ ನನಗೆ ಪುತ್ರರಾಗುವರೋ?


ಆಗ ಅವಳು ಅವನಿಗೆ ಸಾಷ್ಟಾಂಗಬಿದ್ದು ವಂದಿಸಿ ಅವನಿಗೆ, “ಪರದೇಶಿಯಾದ ನನ್ನನ್ನು ಕಂಡು ನನ್ನ ಮೇಲೆ ನಿಮ್ಮ ದಯೆಯನ್ನು ತೋರಿಸಿದ್ದು ಏಕೆ?” ಎಂದಳು.


ನೀನು ಮಾಡಿದ್ದಕ್ಕೆ ಯೆಹೋವ ದೇವರು ನಿನಗೆ ಬದಲು ಕೊಡಲಿ. ಇಸ್ರಾಯೇಲ್ ದೇವರಾದ ಯೆಹೋವ ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಅವರಿಂದ ದೊಡ್ಡ ಪ್ರತಿಫಲ ಅನುಗ್ರಹಿಸಲಿ,” ಎಂದನು.


ಅವನು ನಿನಗೆ ಪ್ರಾಣವನ್ನು ಪುನರುಜ್ಜೀವಿಸುವವನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವನಾಗಿಯೂ ಇರುವನು. ಏಕೆಂದರೆ ನಿನ್ನನ್ನು ಪ್ರೀತಿ ಮಾಡುವ ಏಳುಮಂದಿ ಮಕ್ಕಳಿಗಿಂತ ನಿನಗೆ ಉತ್ತಮಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು,” ಎಂದರು.


ಅದಕ್ಕೆ ಅವನು, “ನನ್ನ ಮಗಳೇ, ಯೆಹೋವ ದೇವರಿಂದ ನಿನಗೆ ಆಶೀರ್ವಾದವಾಗಲಿ, ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದುದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದ ದಯೆಯು ಹೆಚ್ಚಾಗಿದೆ.


ಅಯ್ಯಾಹನ ಮಗಳಾದ ರಿಚ್ಪಳೆಂಬ ಸೌಲನ ಉಪಪತ್ನಿ ಮಾಡಿದ್ದು ದಾವೀದನಿಗೆ ತಿಳಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು