Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:12 - ಕನ್ನಡ ಸಮಕಾಲಿಕ ಅನುವಾದ

12 ನೀನು ಮಾಡಿದ್ದಕ್ಕೆ ಯೆಹೋವ ದೇವರು ನಿನಗೆ ಬದಲು ಕೊಡಲಿ. ಇಸ್ರಾಯೇಲ್ ದೇವರಾದ ಯೆಹೋವ ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಅವರಿಂದ ದೊಡ್ಡ ಪ್ರತಿಫಲ ಅನುಗ್ರಹಿಸಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀನು ಮಾಡಿದ್ದಕ್ಕೆಲ್ಲಾ ದೇವರು ನಿನಗೆ ತಕ್ಕ ಪ್ರತಿಫಲವನ್ನೀಯಲಿ. ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಆಶ್ರಯವನ್ನರಸಿ ಬಂದಿರುವೆ. ಅವರು ನಿನಗೆ ಹೇರಳವಾದ ಆಶೀರ್ವಾದವನ್ನು ಅನುಗ್ರಹಿಸಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀನು ಮಾಡಿದ ಉಪಕಾರಕ್ಕೆ ಪ್ರತಿಯಾಗಿ ಯೆಹೋವನು ನಿನಗೆ ಉಪಕಾರಮಾಡಲಿ; ನೀನು ಯಾವಾತನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳ ಬಂದಿಯೋ ಆ ಇಸ್ರಾಯೇಲ್‍ದೇವರಾದ ಯೆಹೋವನು ನಿನಗೆ ಉತ್ತಮವಾದ ಪ್ರತಿಫಲವನ್ನು ಅನುಗ್ರಹಿಸಲಿ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀನು ಮಾಡಿದ ಎಲ್ಲ ಸತ್ಕಾರ್ಯಕ್ಕೆ ಯೆಹೋವನು ನಿನಗೆ ಸಂಪೂರ್ಣ ಪ್ರತಿಫಲ ಕೊಡುವನು; ಯಾಕೆಂದರೆ ನೀನು ಯಾವಾತನ ಆಶ್ರಯವನ್ನು ಕೋರಿ ಬಂದಿರುವಿಯೋ ಆತನು ನಿನ್ನನ್ನು ರಕ್ಷಿಸುತ್ತಾನೆ” ಎಂದು ಸಮಾಧಾನ ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:12
29 ತಿಳಿವುಗಳ ಹೋಲಿಕೆ  

ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ಎಷ್ಟೋ ಅಮೂಲ್ಯವಾದದ್ದು! ಮನುಷ್ಯರು ನಿಮ್ಮ ರೆಕ್ಕೆಗಳ ನೆರಳಿನಲ್ಲಿ ಆಶ್ರಯಪಡೆಯುತ್ತಾರೆ.


ತಮ್ಮ ರೆಕ್ಕೆಗಳಿಂದ ನಿಮ್ಮನ್ನು ಹೊದಿಸುವರು. ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿರಿ. ದೇವರ ಸತ್ಯತೆಯು ನಿಮ್ಮ ಖೇಡ್ಯವೂ ಕೋಟೆಯೂ ಆಗಿರುವುದು.


ಏಕೆಂದರೆ ನೀವೇ ನನಗೆ ಸಹಾಯಕರಾಗಿದ್ದೀರಿ. ನಿಮ್ಮ ರೆಕ್ಕೆಗಳ ನೆರಳಿನಲ್ಲಿ ಹಾಡುತ್ತಿರುವೆನು.


ನಿಮ್ಮ ಕಣ್ಣುಗುಡ್ಡೆಯ ಹಾಗೆ ನನ್ನನ್ನು ಕಾಪಾಡಿರಿ, ನಿಮ್ಮ ರೆಕ್ಕೆಗಳ ನೆರಳಿನಲ್ಲಿ ನನ್ನನ್ನು ಮರೆಮಾಡಿರಿ.


ನಿಮ್ಮ ಗುಡಾರದಲ್ಲಿ ನಿತ್ಯವಾಗಿ ನಿವಾಸಿಸಲು ಹಾರೈಸುತ್ತಿದ್ದೇನೆ. ನಿಮ್ಮ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ.


ಈಜಿಪ್ಟಿನ ನಿಕ್ಷೇಪಕ್ಕಿಂತಲೂ ಕ್ರಿಸ್ತ ಯೇಸುವಿಗಾಗಿ ನಿಂದೆಯನ್ನು ಹೊಂದುವುದು ಮಹಾಐಶ್ವರ್ಯವೆಂದೆಣಿಸಿಕೊಂಡನು. ಏಕೆಂದರೆ ಅವನು ತನ್ನ ಬಹುಮಾನಕ್ಕಾಗಿ ಎದುರು ನೋಡಿದನು.


ಏಕೆಂದರೆ ಯಾವನಾದರೂ ತನ್ನ ಶತ್ರುವನ್ನು ಹಿಡಿದುಕೊಂಡರೆ, ಅವನನ್ನು ಸುರಕ್ಷಿತನಾಗಿ ಬಿಟ್ಟುಬಿಡುವನೋ? ಈ ಹೊತ್ತು ನೀನು ನನಗೆ ಒಳ್ಳೆಯದನ್ನು ಮಾಡಿದ್ದರಿಂದ ಯೆಹೋವ ದೇವರು ನಿನಗೆ ಒಳ್ಳೆಯದನ್ನು ಮಾಡಲಿ.


ಅದಕ್ಕೆ ರೂತಳು, “ನಿಮ್ಮನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡಿರಿ. ಏಕೆಂದರೆ ನೀವು ಎಲ್ಲಿ ಹೋಗುವಿರೋ ನಾನು ಅಲ್ಲಿಗೇ ಬರುವೆನು. ನೀವು ಎಲ್ಲಿ ಇಳುಕೊಳ್ಳುವಿರೋ ನಾನು ಅಲ್ಲಿ ಇಳುಕೊಳ್ಳುವೆನು. ನಿಮ್ಮ ಜನರೇ ನನ್ನ ಜನರು; ನಿಮ್ಮ ದೇವರೇ ನನ್ನ ದೇವರು.


ದೇವರೇ ನನ್ನನ್ನು ಕರುಣಿಸಿರಿ, ನನ್ನನ್ನು ಕರುಣಿಸಿರಿ. ನನ್ನ ಪ್ರಾಣವು ನಿಮ್ಮನ್ನು ಆಶ್ರಯಿಸಿಕೊಂಡಿದೆ; ಆಪತ್ತುಗಳು ದಾಟುವವರೆಗೂ ನಿಮ್ಮ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.


ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವರು, ದೇವರು ಇದ್ದಾರೆಂತಲೂ ತಮ್ಮನ್ನು ಜಾಗ್ರತೆಯಿಂದ ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾರೆಂತಲೂ ನಂಬಬೇಕು.


ಆದರೆ ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಅವರಿಗೆ ಒಳ್ಳೆಯದನ್ನು ಮಾಡಿರಿ. ಏನನ್ನೂ ತಿರುಗಿ ನಿರೀಕ್ಷಿಸದೆ ಸಾಲ ಕೊಡಿರಿ, ಆಗ ನಿಮ್ಮ ಪ್ರತಿಫಲ ದೊಡ್ಡದಾಗಿರುವುದು. ನೀವು ಮಹೋನ್ನತ ದೇವರ ಮಕ್ಕಳಾಗಿರುವಿರಿ, ಅವರು ಕೃತಜ್ಞತೆಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವರಾಗಿದ್ದಾರೆ.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ಸಂತೋಷಪಟ್ಟು ಆನಂದಿಸಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಅವರು ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನು ಸಹ ಇದೇ ರೀತಿಯಲ್ಲಿ ಹಿಂಸೆಪಡಿಸಿದರು.


ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು.


ಅವನು ಆ ದಿನದಲ್ಲಿ ಕರ್ತ ಯೇಸುವಿನಿಂದ ಕರುಣೆಯನ್ನು ಕಂಡುಕೊಳ್ಳುವಂತೆ ಕರ್ತ ಯೇಸುವೇ ಅವನಿಗೆ ಅನುಗ್ರಹ ಮಾಡಲಿ. ಎಫೆಸದಲ್ಲಿ ಅವನು ನನಗೆ ಎಷ್ಟು ಸಹಾಯಮಾಡಿದನೆಂಬುದು ನಿನಗೆ ಚೆನ್ನಾಗಿ ಗೊತ್ತಿದೆ.


“ಜನರು ನೋಡಲಿ ಎಂದು ಅವರ ಮುಂದೆ, ನಿಮ್ಮ ದಾನಧರ್ಮಗಳನ್ನು ಮಾಡದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಕ್ಕುವುದಿಲ್ಲ.


ಖಂಡಿತವಾಗಿಯೂ ನಿನಗೆ ಮುಂದಿನ ನಿರೀಕ್ಷೆಯಿದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು.


ದುಷ್ಟನು ಮೋಸದ ಸಂಬಳವನ್ನು ಸಂಪಾದಿಸುತ್ತಾನೆ, ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹವಾದ ಬಹುಮಾನವಿರುವುದು.


ಆಗ ಜನರು ಹೀಗೆ ಹೇಳಿಕೊಳ್ಳುವರು, “ನಿಶ್ಚಯವಾಗಿ ನೀತಿವಂತನಿಗೆ ಫಲವಿದೆ. ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯತೀರಿಸುವ ದೇವರು ಇದ್ದಾರೆ.”


ನಿಮ್ಮ ಸೇವಕನು ಅವುಗಳಿಂದ ಎಚ್ಚರಿಕೆ ಪಡೆಯುತ್ತಾನೆ; ಅವುಗಳನ್ನು ಕೈಗೊಳ್ಳುವುದರಲ್ಲಿ ದೊಡ್ಡ ಪ್ರತಿಫಲವುಂಟು.


ಕೆಲವರು ತಾವು ದರ್ಶನ ಕಂಡದ್ದರ ಬಗ್ಗೆ ಬಹಳ ಮಾತನಾಡಿ, ತಮ್ಮ ನಿರರ್ಥಕವಾದ ಪ್ರಾಪಂಚಿಕ ಬುದ್ಧಿಯಿಂದ ಉಬ್ಬಿಕೊಳ್ಳುತ್ತಾರೆ. ಇಂಥವರು ಕಪಟ ದೀನತೆಯಲ್ಲಿಯೂ ದೂತರ ಆರಾಧನೆಯಲ್ಲಿಯೂ ಆನಂದಿಸುವವರಾಗಿರುತ್ತಾರೆ. ಇವರು ನಿಮ್ಮ ಬಳಿಗೆ, ನೀವು ಪ್ರತಿಫಲಹೊಂದದೆ ಇರುವಂತೆ ಅಡ್ಡಿಮಾಡಲು ಅವಕಾಶಕೊಡಬೇಡಿರಿ.


ಆಗ ಬೋವಜನು ಅವಳಿಗೆ ಉತ್ತರವಾಗಿ, “ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿದ್ದೆಲ್ಲವೂ ನೀನು ನಿನ್ನ ತಂದೆತಾಯಿಗಳನ್ನೂ ನೀನು ಹುಟ್ಟಿದ ದೇಶವನ್ನೂ ಬಿಟ್ಟು ನೀನು ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿದಿದೆ.


ಅದಕ್ಕೆ ಅವಳು, “ನನ್ನ ಒಡೆಯನೇ, ನನಗೆ ನಿಮ್ಮ ದೃಷ್ಟಿಯಲ್ಲಿ ಉಪಕಾರವಾಗಲಿ. ಏಕೆಂದರೆ ನಾನು ನಿಮ್ಮ ದಾಸಿಯರಲ್ಲಿ ಒಬ್ಬಳಂತೆ ನಿಲ್ಲುವುದಕ್ಕೂ ಯೋಗ್ಯಳಲ್ಲ ಆದರೂ ದಯೆಯಿಂದ ಮಾತನಾಡಿಸಿದಿರಿ” ಎಂದಳು.


ಅವನು ನಿನಗೆ ಪ್ರಾಣವನ್ನು ಪುನರುಜ್ಜೀವಿಸುವವನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವನಾಗಿಯೂ ಇರುವನು. ಏಕೆಂದರೆ ನಿನ್ನನ್ನು ಪ್ರೀತಿ ಮಾಡುವ ಏಳುಮಂದಿ ಮಕ್ಕಳಿಗಿಂತ ನಿನಗೆ ಉತ್ತಮಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು,” ಎಂದರು.


ಯೆಹೋವ ದೇವರು ಇಂತೆನ್ನುತ್ತಾರೆ: “ನಿನ್ನ ಧ್ವನಿಯು ಗೋಳಾಡದಿರಲಿ; ನಿನ್ನ ಕಣ್ಣು ನೀರು ಸುರಿಸದಿರಲಿ; ನಿನ್ನ ಪ್ರಯಾಸವು ಸಾರ್ಥಕವಾಗುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು.


ಈಗ ಇಗೋ, ನೀನು ನಿಶ್ಚಯವಾಗಿ ಅರಸನಾಗುವೆ ಎಂದೂ, ಇಸ್ರಾಯೇಲಿನ ರಾಜ್ಯವು ನಿನ್ನ ಕೈಯಲ್ಲಿ ಸ್ಥಿರವಾಗುವುದೆಂದೂ ನಾನು ಚೆನ್ನಾಗಿ ಬಲ್ಲೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು