ರೂತಳು 2:22 - ಕನ್ನಡ ಸಮಕಾಲಿಕ ಅನುವಾದ22 ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ, “ನನ್ನ ಮಗಳೇ, ಮತ್ತೊಂದು ಹೊಲದಲ್ಲಿ ಮನುಷ್ಯರು ನಿನ್ನನ್ನು ಕಂಡುಕೊಳ್ಳದ ಹಾಗೆ ನೀನು ಅವನ ದಾಸಿಗಳ ಸಂಗಡ ಹೊರಟುಹೋಗುವುದು ಒಳ್ಳೆಯದು,” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನವೊಮಿಯು ತನ್ನ ಸೊಸೆಯಾದ ರೂತಳಿಗೆ “ನನ್ನ ಮಗಳೇ, ನೀನು ಅವನ ಹೆಣ್ಣಾಳುಗಳ ಸಂಗಡಲೇ ಹೊರಟುಹೋಗುವುದು ಒಳ್ಳೆಯದು; ಬೇರೆ ಹೊಲದಲ್ಲಿ ನಿನಗೆ ತೊಂದರೆಯಾದೀತು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದಕ್ಕೆ ನವೊಮಿ ತನ್ನ ಸೊಸೆಗೆ, “ಹೌದು, ಮಗಳೇ, ನೀನು ಆತನ ಹೆಣ್ಣಾಳುಗಳ ಸಂಗಡ ಇರುವುದೇ ಒಳ್ಳೆಯದು; ಬೇರೆಯವರ ಹೊಲದಲ್ಲಿ ನಿನಗೆ ತೊಂದರೆಯಾದೀತು,” ಎಂದು ಸಲಹೆಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನೊವೊವಿುಯು ತನ್ನ ಸೊಸೆಯಾದ ರೂತಳಿಗೆ - ನನ್ನ ಮಗಳೇ, ನೀನು ಅವನ ಹೆಣ್ಣಾಳುಗಳ ಸಂಗಡಲೇ ಹೊರಟುಹೋಗುವದು ಒಳ್ಳೇದು; ಬೇರೆ ಹೊಲದಲ್ಲಿ ನಿನಗೆ ತೊಂದರೆಯಾದೀತು ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ, “ನೀನು ಅವನ ಹೆಣ್ಣಾಳುಗಳ ಜೊತೆಯಲ್ಲಿ ಹೋಗುವುದೇ ಒಳ್ಳೆಯದು. ನೀನು ಬೇರೆ ಹೊಲಕ್ಕೆ ಹೋದರೆ ನಿನಗೆ ತೊಂದರೆಯಾಗಬಹುದು” ಎಂದಳು. ಅಧ್ಯಾಯವನ್ನು ನೋಡಿ |