Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:3 - ಕನ್ನಡ ಸಮಕಾಲಿಕ ಅನುವಾದ

3 ರೂತಳು ಹೊಲದಲ್ಲಿ ಕೊಯ್ಯುವವರ ಹಿಂದೆ ಹೋಗಿ ತೆನೆಗಳನ್ನು ಆಯ್ದುಕೊಳ್ಳುತ್ತಿದ್ದಳು. ಆ ಹೊಲದ ಭಾಗ ಎಲೀಮೆಲೆಕನ ಕುಲದವನಾದ ಬೋವಜನದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಕೆಯು ದೈವಯೋಗದಿಂದ ಎಲೀಮೆಲೆಕನ ಗೋತ್ರದವನಾದ ಬೋವಜನ ಸ್ವತ್ತಾಗಿದ್ದ ಹೊಲಕ್ಕೆ ಹೋಗಿ ತೆನೆ ಕೊಯ್ಯುವವರ ಹಿಂದಿನಿಂದ ಹಕ್ಕಲಾಯುತ್ತಾ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ರೂತಳು ಕೊಯ್ಯುವವರ ಹಿಂದೆ ಹೋಗುತ್ತಾ ಅಲ್ಲಲ್ಲಿ ಬಿದ್ದ ತೆನೆಗಳನ್ನು ಆಯ್ದುಕೊಳ್ಳುತ್ತಿದ್ದಳು. ಸುದೈವದಿಂದ ಅದು ಎಲಿಮೆಲೆಕನ ನೆಂಟನಾದ ಬೋವಜನ ಹೊಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದಕ್ಕವಳು - ನನ್ನ ಮಗಳೇ, ಹೋಗು ಎನ್ನಲು ಆಕೆಯು ದೈವಯೋಗದಿಂದ ಎಲೀಮೆಲೆಕನ ಗೋತ್ರದವನಾದ ಬೋವಜನ ಸ್ವಾಸ್ತ್ಯವಾಗಿದ್ದ ಹೊಲಕ್ಕೆ ಹೋಗಿ ಕೊಯ್ಯುವವರ ಹಿಂದಿನಿಂದ ಹಕ್ಕಲಾಯುತ್ತಾ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೊವೊಮಿಯು, “ಆಗಲಿ ಮಗಳೇ, ಹಾಗೆಯೇ ಮಾಡು” ಅಂದಳು. ರೂತಳು ಹೊಲಗಳಿಗೆ ಹೋದಳು. ಅವಳು ಅಲ್ಲಿ ಫಸಲು ಕೊಯ್ಯುವವರ ಹಿಂದೆ ಹೋಗಿ ಹಕ್ಕಲಾಯುತ್ತಾ ಎಲೀಮೆಲೆಕನ ಗೋತ್ರದವನಾದ ಬೋವಜನ ಹೊಲಕ್ಕೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:3
10 ತಿಳಿವುಗಳ ಹೋಲಿಕೆ  

ಅಂಥವರು ಶಾಂತವಾಗಿ ಕೆಲಸಮಾಡಿ ತಮ್ಮ ಸ್ವಂತ ಆಹಾರವನ್ನೇ ಊಟ ಮಾಡಬೇಕೆಂದು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.


ಆಗ ಒಬ್ಬ ಯಾಜಕನು ಅದೇ ಮಾರ್ಗವಾಗಿ ಬಂದು ಅವನನ್ನು ಕಂಡು, ದಾರಿಯ ಬೇರೆ ಕಡೆಹೋದನು.


ಒಂದು ರೂಪಾಯಿಗೆ ಎರಡು ಗುಬ್ಬಿಗಳನ್ನು ಮಾರುವುದಿಲ್ಲವೇ? ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ.


ಗೇಹಜಿಯು ಸತ್ತ ಹುಡುಗನನ್ನು ಹೇಗೆ ಎಲೀಷನು ಬದುಕಿಸಿದನೆಂದು ಅರಸನಿಗೆ ವಿವರವಾಗಿ ಹೇಳುತ್ತಿರುವಾಗಲೇ, ಎಲೀಷನು ಬದುಕಿಸಿದ ಹುಡುಗನ ತಾಯಿಯು ತನ್ನ ಹೊಲಮನೆಗೋಸ್ಕರ, ಮೊರೆಯಿಡಲು ಅರಸನ ಬಳಿಗೆ ಬಂದಳು. ಕೂಡಲೆ ಗೇಹಜಿಯು, “ನನ್ನ ಒಡೆಯನೇ, ಅರಸನೇ, ಇವಳೇ ಆ ಸ್ತ್ರೀಯು, ಎಲೀಷನು ಬದುಕಿಸಿದ ಆ ಹುಡುಗನು ಇವನೇ,” ಎಂದನು.


ಮೋವಾಬ್ಯಳಾದ ರೂತಳು ನೊವೊಮಿಗೆ, “ನಾನು ಹೊಲಕ್ಕೆ ಹೋಗಿ ಯಾರ ದಯೆಯು ನನಗೆ ಆಗುವುದೋ ಅವನ ಹೊಲದಲ್ಲಿ ಹಕ್ಕಲ ತೆನೆಗಳನ್ನು ಕೂಡಿಸಿ ಕೊಳ್ಳುವೆನು,” ಎಂದಳು. ನೊವೊಮಿ, “ಹೋಗಿ ಬಾ, ಮಗಳೇ,” ಎಂದಳು.


ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ, “ಯೆಹೋವ ದೇವರು ನಿಮ್ಮ ಸಂಗಡ ಇರಲಿ,” ಎಂದನು. ಅದಕ್ಕೆ ಅವರು, “ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,” ಎಂದರು.


ಆಗ ಅವನು, “ನಾನು ಅಕಸ್ಮಾತ್ತಾಗಿ ಗಿಲ್ಬೋವ ಬೆಟ್ಟಕ್ಕೆ ಹೋಗಿದ್ದೆನು. ಅಲ್ಲಿ ಸೌಲನು ತನ್ನ ಈಟಿಯನ್ನು ಊರಿಕೊಂಡು ನಿಂತಿದ್ದನು. ಆಗ ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು.


ಬೆನ್ಯಾಮೀನ್ಯನಾದ ಬಿಕ್ರಿಯ ಮಗ ಶೆಬನೆಂಬ ಹೆಸರುಳ್ಳ ಒಬ್ಬ ನೀಚ ವ್ಯಕ್ತಿ ಅಲ್ಲಿದ್ದನು. ಅವನು ತುತೂರಿಯನ್ನು ಊದಿ ಹೀಗಂದನು, “ನಮಗೆ ದಾವೀದನಲ್ಲಿ ಪಾಲಿಲ್ಲ, ಇಷಯನ ಮಗನ ಬಳಿಯಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು