ರೂತಳು 2:9 - ಕನ್ನಡ ಸಮಕಾಲಿಕ ಅನುವಾದ9 ನಿನ್ನ ಕಣ್ಣುಗಳು ಅವರು ಕೊಯ್ಯುವ ಹೊಲದ ಮೇಲೆ ಇರಲಿ. ಅವರ ಹಿಂದೆಯೇ ಹೋಗು, ಯಾರೂ ನಿನ್ನನ್ನು ಮುಟ್ಟದಹಾಗೆ ಅವರಿಗೆ ಆಜ್ಞಾಪಿಸಿದ್ದೇನೆ. ನಿನಗೆ ದಾಹವಾದರೆ ನೀನು ಪಾತ್ರೆಗಳ ಬಳಿಗೆ ಹೋಗಿ ನನ್ನ ಸೇವಕರು ಸೇದಿಟ್ಟ ನೀರನ್ನು ಕುಡಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನನ್ನ ಆಳುಗಳು ತೆನೆ ಕೊಯ್ಯುವುದಕ್ಕೋಸ್ಕರ ಯಾವ ಹೊಲಕ್ಕೆ ಹೋಗುತ್ತಾರೋ ಆ ಹೊಲಕ್ಕೆ ನೀನೂ ಹೋಗು. ನಿನ್ನನ್ನು ಯಾರೂ ಮುಟ್ಟಬಾರದೆಂದು ನನ್ನ ಸೇವಕರಿಗೆ ಅಪ್ಪಣೆಕೊಟ್ಟಿದ್ದೇನೆ. ನಿನಗೆ ಬಾಯಾರಿಕೆಯಾದರೆ ಹೋಗಿ ನನ್ನ ಸೇವಕರೇ ತುಂಬಿಸಿದ ನೀರಿನ ಪಾತ್ರೆಗಳಿಂದ ನೀರು ಕುಡಿಯಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವರು ಎಲ್ಲಿ ಪೈರು ಕೊಯ್ಯುತ್ತಾರೋ ಅವರ ಹಿಂದೆ ಹೋಗಿ ತೆನೆಗಳನ್ನು ಆರಿಸಿಕೊ. ನಿನಗೆ ಯಾರೂ ತೊಂದರೆ ಕೊಡಬಾರದೆಂದು ನನ್ನ ಆಳುಗಳಿಗೆ ಆಜ್ಞಾಪಿಸಿದ್ದೇನೆ. ನಿನಗೆ ಬಾಯಾರಿಕೆಯಾದರೆ ಹೋಗಿ ನನ್ನ ಆಳುಗಳು ತುಂಬಿಸಿರುವ ನೀರಿನ ಬಾನೆಗಳಿಂದ ಕುಡಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನನ್ನ ಆಳುಗಳು ಕೊಯ್ಯುವದಕ್ಕೋಸ್ಕರ ಯಾವ ಹೊಲಕ್ಕೆ ಹೋಗುತ್ತಾರೋ ಆ ಹೊಲಕ್ಕೆ ನೀನೂ ಹೋಗು. ನಿನ್ನನ್ನು ಯಾರೂ ಮುಟ್ಟಬಾರದೆಂದು ನನ್ನ ಸೇವಕರಿಗೆ ಅಪ್ಪಣೆಕೊಟ್ಟಿದ್ದೇನೆ. ನಿನಗೆ ದಾಹವಾದರೆ ನನ್ನ ಸೇವಕರೇ ನೀರು ತಂದು ತುಂಬಿಸಿದ ನೀರಿನ ಪಾತ್ರೆಗಳ ಬಳಿಗೆ ಹೋಗಿ ಕುಡಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವರು ಯಾವ ಹೊಲಕ್ಕೆ ಹೋಗುತ್ತಾರೆಂಬುದನ್ನು ತಿಳಿದುಕೊಂಡು ಅವರನ್ನು ಹಿಂಬಾಲಿಸು; ನಿನಗೆ ತೊಂದರೆ ಕೊಡಕೂಡದೆಂದು ನನ್ನ ಸೇವಕರಿಗೆ ಆಜ್ಞಾಪಿಸಿದ್ದೇನೆ. ನಿನಗೆ ಬಾಯಾರಿಕೆಯಾದರೆ ನೀರಿನ ಕೊಡಗಳ ಬಳಿಗೆ ಹೋಗಿ ನನ್ನ ಆಳುಗಳು ಸೇದುವ ನೀರನ್ನೇ ಕುಡಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |