Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 3:10 - ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ಅವನು, “ನನ್ನ ಮಗಳೇ, ಯೆಹೋವ ದೇವರಿಂದ ನಿನಗೆ ಆಶೀರ್ವಾದವಾಗಲಿ, ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದುದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದ ದಯೆಯು ಹೆಚ್ಚಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಅವನು “ಮಗಳೇ, ಯೆಹೋವನಿಂದ ನಿನಗೆ ಆಶೀರ್ವಾದವಾಗಲಿ; ನೀನು ಬಡವರೂ ಅಥವಾ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ಹೋಗಲಿಲ್ಲ. ಈಗ ನಿನ್ನ ಪತಿಭಕ್ತಿಯು ಮೊದಲಗಿಂತ ವಿಶೇಷವಾಗಿ ಪ್ರತ್ಯಕ್ಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬೋವಜನು: “ಮಗಳೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ! ನೀನು ಬಡ ಯೌವನಸ್ಥನನ್ನಾಗಲೀ, ಸಿರಿವಂತ ಯೌವನಸ್ಥನನ್ನಾಗಲೀ ಅರಸಲಿಲ್ಲ. ನೀನು ನನಗೆ ತೋರಿದ ವಂಶ ಗೌರವವು ಇಲ್ಲಿಯವರೆಗೆ ನೀನು ಅತ್ತೆಗೆ ತೋರಿದ ಗೌರವಕ್ಕಿಂತಲೂ ಶ್ರೇಷ್ಠವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಅವನು - ನನ್ನ ಮಗಳೇ, ಯೆಹೋವನಿಂದ ನಿನಗೆ ಆಶೀರ್ವಾದವಾಗಲಿ; ನೀನು ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರನ್ನು ನೋಡಿ ಹೋಗಲಿಲ್ಲ. ಈಗ ನಿನ್ನ ಪತಿಭಕ್ತಿಯು ಮುಂಚಿಗಿಂತ ವಿಶೇಷವಾಗಿ ಪ್ರತ್ಯಕ್ಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಬೋವಜನು, “ಯುವತಿಯೇ, ಯೆಹೋವನು ನಿನಗೆ ದಯೆತೋರಲಿ. ನೀನು ನನ್ನ ಮೇಲೆ ತುಂಬಾ ಕರುಣೆಯನ್ನು ತೋರಿರುವೆ. ನೀನು ಮೊದಲು ನೊವೊಮಿಗೆ ತೋರಿದ ಕರುಣೆಗಿಂತಲೂ ಹೆಚ್ಚಿನ ಕರುಣೆಯನ್ನು ನನಗೆ ತೋರಿರುವೆ. ನೀನು ಒಬ್ಬ ತರುಣನನ್ನು ಅವನು ಬಡವನಾಗಿರಲಿ ಅಥವಾ ಶ್ರೀಮಂತನಾಗಿರಲಿ ಮದುವೆಗಾಗಿ ಆರಿಸಿಕೊಳ್ಳಬಹುದಾಗಿತ್ತು. ಆದರೆ ನೀನು ಹಾಗೆ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 3:10
8 ತಿಳಿವುಗಳ ಹೋಲಿಕೆ  

ನೊವೊಮಿ ತನ್ನ ಸೊಸೆಗೆ, “ಜೀವಂತ ಇರುವವರಿಗೂ ಸತ್ತವರಿಗೂ ದಯೆ ತೋರಿಸುತ್ತಿರುವ ಯೆಹೋವ ದೇವರಿಂದ ಅವನಿಗೆ ಆಶೀರ್ವಾದವಾಗಲಿ,” ಎಂದಳು. ಅನಂತರ ನೊವೊಮಿ ಅವಳಿಗೆ, “ಆ ಮನುಷ್ಯನು ನಮ್ಮ ಬಂಧುವೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ,” ಎಂದಳು.


ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ, “ನೀವು ನಿಮ್ಮ ನಿಮ್ಮ ತಾಯಿಯ ಮನೆಗೆ ತಿರುಗಿ ಹೋಗಿರಿ. ನೀವು ಮರಣ ಹೊಂದಿದ ಪತಿಯರಿಗೂ ನನಗೂ ದಯೆ ತೋರಿಸಿದ ಹಾಗೆಯೇ ಯೆಹೋವ ದೇವರು ನಿಮಗೆ ದಯೆ ತೋರಲಿ.


ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ, “ಯೆಹೋವ ದೇವರು ನಿಮ್ಮ ಸಂಗಡ ಇರಲಿ,” ಎಂದನು. ಅದಕ್ಕೆ ಅವರು, “ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,” ಎಂದರು.


ಲಾಬಾನನು ಅವನಿಗೆ, “ಯೆಹೋವ ದೇವರಿಂದ ಆಶೀರ್ವಾದ ಪಡೆದವನೇ, ಒಳಗೆ ಬಾ, ಏಕೆ ಹೊರಗೆ ನಿಂತಿರುವೆ? ನಾನು ಮನೆಯನ್ನೂ, ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ,” ಎಂದನು.


ಆಗ ಅವನು, “ನೀನು ಯಾರು?” ಎಂದನು. ಅದಕ್ಕವಳು, “ನಾನು ನಿಮ್ಮ ದಾಸಿಯಾದ ರೂತಳು. ನೀವು ನಿಮ್ಮ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕಿರಿ. ಏಕೆಂದರೆ ನೀವು ನನ್ನನ್ನು ವಿಮೋಚಿಸತಕ್ಕ ಹತ್ತಿರ ಸಂಬಂಧಿಕನು,” ಎಂದಳು.


ಸಮುಯೇಲನು ಸೌಲನ ಬಳಿಗೆ ಬಂದಾಗ, ಸೌಲನು ಅವನಿಗೆ, “ನಿನಗೆ ಯೆಹೋವ ದೇವರ ಆಶೀರ್ವಾದವಾಗಲಿ; ನಾನು ಯೆಹೋವ ದೇವರ ಆಜ್ಞೆಯನ್ನು ಈಡೇರಿಸಿದೆನು,” ಎಂದನು.


ಆಗ ಬೋವಜನು ಅವಳಿಗೆ ಉತ್ತರವಾಗಿ, “ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿದ್ದೆಲ್ಲವೂ ನೀನು ನಿನ್ನ ತಂದೆತಾಯಿಗಳನ್ನೂ ನೀನು ಹುಟ್ಟಿದ ದೇಶವನ್ನೂ ಬಿಟ್ಟು ನೀನು ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು