ರೂತಳು 3:13 - ಕನ್ನಡ ಸಮಕಾಲಿಕ ಅನುವಾದ13 ಈ ರಾತ್ರಿಯಲ್ಲಿ ಇಲ್ಲಿರು. ನಾಳೆ ಬೆಳಿಗ್ಗೆ ಅವನು ನಿನಗೆ ವಿಮೋಚಕ ಬಂಧುವಿನ ಕರ್ತವ್ಯ ಮಾಡಿದರೆ ಒಳ್ಳೆಯದು. ಅವನು ನಿನಗೆ ವಿಮೋಚಕ ಬಂಧುವಿನ ಕರ್ತವ್ಯ ಮಾಡಲು ಮನಸ್ಸಿಲ್ಲದಿದ್ದರೆ ಯೆಹೋವ ದೇವರ ಜೀವದಾಣೆ, ನಾನೇ ಅದನ್ನು ಮಾಡುವೆನು. ಉದಯಕಾಲದವರೆಗೂ ಇಲ್ಲಿಯೇ ಮಲಗಿರು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಈ ರಾತ್ರಿ ಇಲ್ಲೇ ಇರು; ನಾಳೆ ಅವನು ಮೈದುನಧರ್ಮವನ್ನು ನೆರವೇರಿಸಿದರೆ ಸರಿ; ಇಲ್ಲವಾದರೆ ಯೆಹೋವನಾಣೆ, ನಾನೇ ಅದನ್ನು ನೆರವೇರಿಸುವೆನು. ಬೆಳಗಾಗುವ ತನಕ ಇಲ್ಲೇ ಮಲಗಿಕೋ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಈ ರಾತ್ರಿ ಇಲ್ಲೇ ಇರು. ಅವನು ನಿನ್ನನ್ನು ಸಲಹುವ ಜವಾಬ್ದಾರಿ ವಹಿಸಿಕೊಳ್ಳುವನೋ ಇಲ್ಲವೋ ಎಂಬುದನ್ನು ನಾಳೆ ವಿಚಾರಿಸಿಕೊಳ್ಳೋಣ. ಅವನು ಅದನ್ನು ವಹಿಸಿಕೊಳ್ಳುವುದಾದರೆ ಒಳ್ಳೆಯದು. ಇಲ್ಲವಾದರೆ ನಾನೇ ಆ ಕರ್ತವ್ಯವನ್ನು ವಹಿಸಿಕೊಳ್ಳುತ್ತೇನೆ ಎಂದು ಜೀವಸ್ವರೂಪರಾದ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ಇನ್ನು ನಿಶ್ಚಿಂತಳಾಗಿ ಮಲಗು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಈ ರಾತ್ರಿ ಇಲ್ಲೇ ಇರು; ನಾಳೆ ಅವನು ಮೈದುನಧರ್ಮವನ್ನು ನಡಿಸಿದರೆ ಸರಿ; ಇಲ್ಲವಾದರೆ ಯೆಹೋವನಾಣೆ, ನಾನೇ ಅದನ್ನು ನಡಿಸುವೆನು. ಬೆಳಗಾಗುವ ತನಕ ಇಲ್ಲೇ ಮಲಗಿಕೋ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಈ ರಾತ್ರಿ ಇಲ್ಲಿಯೇ ಇರು. ಆ ಮನುಷ್ಯನು ನಿನಗೆ ಸಹಾಯ ಮಾಡುವನೋ ಎಂಬುದನ್ನು ನಾಳೆ ಬೆಳಿಗ್ಗೆ ನೋಡೋಣ. ಅವನು ನಿನಗೆ ಸಹಾಯ ಮಾಡಲು ಒಪ್ಪಿದರೆ ಒಳ್ಳೆಯದು. ಅವನು ನಿನಗೆ ಸಹಾಯ ಮಾಡಲು ಒಪ್ಪದಿದ್ದರೆ ನಾನು ನಿನ್ನನ್ನು ಮದುವೆಯಾಗುತ್ತೇನೆ. ಅಲ್ಲದೆ ಎಲೀಮೆಲೆಕನ ಭೂಮಿಯನ್ನು ನಿನಗೋಸ್ಕರ ಕೊಂಡುಕೊಳ್ಳುತ್ತೇನೆಂದು ಯೆಹೋವನ ಆಣೆಯಾಗಿ ಹೇಳುತ್ತೇನೆ. ಬೆಳಗಾಗುವವರೆಗೆ ಇಲ್ಲಿ ಮಲಗಿರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |