ರೂತಳು 3:2 - ಕನ್ನಡ ಸಮಕಾಲಿಕ ಅನುವಾದ2 ಈಗ ನೀನು ಯಾರ ದಾಸಿಯರ ಸಂಗಡ ಇದ್ದೀಯೋ, ಆ ಬೋವಜನು ನಮ್ಮ ಬಂಧುವಾಗಿದ್ದಾನೆ. ಇಗೋ, ಅವನು ರಾತ್ರಿಯಲ್ಲಿ ಕಣದಲ್ಲಿ ಜವೆಗೋಧಿಯನ್ನು ತೂರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಈಗ ನೀನು ಯಾರ ಹೆಣ್ಣಾಳುಗಳ ಜೊತೆಯಲ್ಲಿರುತ್ತೀಯೋ ಆ ಬೋವಜನು ನಮ್ಮ ಸಂಬಂಧಿಕನಲ್ಲವೇ? ಅವನು ಈ ರಾತ್ರಿ ಕಣದಲ್ಲಿ ಜವೆಗೋದಿಯನ್ನು ತೂರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆ ಬೋವಜನು ನಮ್ಮ ನೆಂಟ. ಅವನ ಹೆಣ್ಣಾಳುಗಳ ಜೊತೆಯಲ್ಲಿ ನೀನು ತೆನೆ ಆರಿಸಿಕೊಳ್ಳುತ್ತಿದ್ದೀಯಲ್ಲವೇ? ಈಗ ನಾನು ಹೇಳುವುದನ್ನು ಗಮನಿಸು; ಈ ಸಂಜೆ ಬೋವಜನು ಕಣದಲ್ಲಿ ಜವೆಗೋದಿಯನ್ನು ತೂರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ಯಾವನ ಹೆಣ್ಣಾಳುಗಳ ಜೊತೆಯಲ್ಲಿರುತ್ತೀಯೋ ಆ ಬೋವಜನು ನಮ್ಮ ಸಂಬಂಧಿಕನಾಗಿರುತ್ತಾನಲ್ಲಾ! ಅವನು ಇಂದಿನ ರಾತ್ರಿ ಕಣದಲ್ಲಿ ಜವೆಗೋದಿಯನ್ನು ತೂರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಬೋವಜನು ನಮ್ಮ ಸಂಬಂಧಿಕನಾಗಿದ್ದಾನೆ. ನೀನು ಅವನ ಹೆಣ್ಣಾಳುಗಳ ಜೊತೆಯಲ್ಲಿದ್ದುಕೊಂಡು ಹಕ್ಕಲಾಯ್ದಿರುವೆ. ಇಂದು ರಾತ್ರಿ ಅವನು ಕಣದಲ್ಲಿ ಜವೆಗೋಧಿಯನ್ನು ತೂರುವನು. ಅಧ್ಯಾಯವನ್ನು ನೋಡಿ |