Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 4:2 - ಕನ್ನಡ ಸಮಕಾಲಿಕ ಅನುವಾದ

2 ಆಗ ಬೋವಜನು ಪಟ್ಟಣದ ಹಿರಿಯರಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ, “ಇಲ್ಲಿ ಕುಳಿತುಕೊಳ್ಳಿರಿ,” ಎಂದನು. ಅವರು ಕುಳಿತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದಲ್ಲದೆ ಅವನು ಊರಿನ ಹಿರಿಯರಲ್ಲಿ ಹತ್ತು ಮಂದಿಯನ್ನು ಕರೆದಾಗ ಅವರೂ ಬಂದು ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಷ್ಟರಲ್ಲಿ, ಬೋವಜನು ಮುಂಚೆ ಹೇಳಿದ್ದ ಎಲಿಮೆಲೆಕನಿಗೆ ಹತ್ತಿರದ ನೆಂಟನಾಗಿದ್ದವನು ಅಲ್ಲಿಗೆ ಬಂದನು. ಆಗ ಬೋವಜನು ಅವನಿಗೆ: “ಬಾರಪ್ಪಾ, ಇಲ್ಲಿ ಕುಳಿತುಕೊ,” ಎಂದು ಕರೆಯಲು, ಅವನು ಬಂದು ಪಕ್ಕದಲ್ಲೇ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದಲ್ಲದೆ ಅವನು ಊರಿನ ಹಿರಿಯರಲ್ಲಿ ಹತ್ತು ಮಂದಿಯನ್ನು ಕರೆದಾಗ ಅವರೂ ಬಂದು ಕೂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಮೇಲೆ ಬೋವಜನು ನಗರದ ಹಿರಿಯರಲ್ಲಿ ಹತ್ತುಮಂದಿಯನ್ನು ಕರೆದು ಅವರಿಗೆ, “ಇಲ್ಲಿ ಕುಳಿತುಕೊಳ್ಳಿ” ಎಂದು ಹೇಳಿದನು. ಅವರೂ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 4:2
9 ತಿಳಿವುಗಳ ಹೋಲಿಕೆ  

ಆಕೆಯ ಪತಿಯು ಪಟ್ಟಣದಲ್ಲಿ ಸನ್ಮಾನಿತ. ದೇಶದ ಹಿರಿಯರ ಮಧ್ಯದಲ್ಲಿ ಪ್ರಸಿದ್ಧನಾಗಿ ಕುಳಿತಿರುವನು.


ಹೀಗೆ ಅವಳು ಅಹಾಬನ ಹೆಸರಿನಲ್ಲಿ ಪತ್ರಗಳನ್ನು ಬರೆದು, ಅವುಗಳಿಗೆ ಅವನ ಮುದ್ರೆಹಾಕಿ, ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯರಿಗೂ, ಗೌರವಸ್ಥರಿಗೂ ಕಳುಹಿಸಿದಳು.


ಹೀಗೆ ಅವರು ಜನರನ್ನೂ ಹಿರಿಯರನ್ನೂ ನಿಯಮ ಬೋಧಕರನ್ನೂ ಪ್ರಚೋದಿಸಿ ಸ್ತೆಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ತಂದು ನಿಲ್ಲಿಸಿದರು.


ಪಟ್ಟಣದ ದ್ವಾರದಿಂದ ಹಿರಿಯರು ಹೋಗಿದ್ದಾರೆ. ಯುವಜನರು ತಮ್ಮ ಸಂಗೀತವನ್ನು ನಿಲ್ಲಿಸಿದ್ದಾರೆ.


ಅವಳನ್ನು ನಿಶ್ಚಯಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ, ಆಗ ಅವಳು ಬಿಡುಗಡೆಯಾಗುವಂತೆ ಮಾಡಲಿ. ಅವನು ಅವಳನ್ನು ವಂಚಿಸಿದ್ದರಿಂದ ಯೆಹೂದ್ಯರಲ್ಲದವರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.


ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ, ನಿಮ್ಮ ಅಧಿಕಾರಿಗಳನ್ನೂ ನನ್ನ ಬಳಿಗೆ ಸೇರಿಸಿರಿ. ಆಗ ಈ ಮಾತುಗಳನ್ನು ಅವರು ಕೇಳುವ ಹಾಗೆ ಆಕಾಶವನ್ನೂ, ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.


ನೀವೆಲ್ಲರು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನಿಂತಿದ್ದೀರಿ. ನಿಮ್ಮ ಗೋತ್ರಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಜನರೆಲ್ಲರೂ


ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತೆಗೆದುಕೊಳ್ಳವ ಮನಸ್ಸಿಲ್ಲದಿದ್ದರೆ, ಅತ್ತಿಗೆಯು ಚಾವಡಿಗೆ ಹೋಗಿ ಹಿರಿಯರ ಹತ್ತಿರ ಬಂದು, “ನನ್ನ ಗಂಡನ ಸಹೋದರನು ತನ್ನ ಸಹೋದರನ ಹೆಸರನ್ನು ಇಸ್ರಾಯೇಲಿನಲ್ಲಿ ಮುಂದುವರಿಸಲು ಸಿದ್ಧನಿಲ್ಲ. ಅವನು ತನ್ನ ಮೈದುನನ ಕರ್ತವ್ಯವನ್ನು ನಡೆಸಲು ಮನಸ್ಸಿಲ್ಲದವನಾಗಿದ್ದಾನೆ,” ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು