Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:1 - ಕನ್ನಡ ಸಮಕಾಲಿಕ ಅನುವಾದ

1 ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನಾಗುವುದಕ್ಕೆ ಕರೆಹೊಂದಿದವನೂ ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಗೊಂಡವನೂ ಆಗಿರುವ ಪೌಲನು ಬರೆಯುವ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1-7 ದೇವರಿಗೆ ಅತ್ಯಂತ ಪ್ರಿಯರು ಹಾಗು ದೇವಜನರಾಗಲು ಕರೆಹೊಂದಿದವರು ಆದ ರೋಮ್‍ನಗರ ನಿವಾಸಿಗಳೆಲ್ಲರಿಗೆ: ಕ್ರಿಸ್ತಯೇಸುವಿನ ದಾಸನೂ ಪ್ರೇಷಿತನಾಗಲು ಕರೆಹೊಂದಿದವನೂ ದೇವರ ಶುಭಸಂದೇಶವನ್ನು ಸಾರಲು ನೇಮಕಗೊಂಡವನೂ ಆದ ಪೌಲನು ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಹಾಗು ಪ್ರಭುವಾದ ಯೇಸುಕ್ರಿಸ್ತರು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗುವದಕ್ಕೆ ಕರೆಯಲ್ಪಟ್ಟವನೂ ದೇವರ ಸುವಾರ್ತೆಯನ್ನು ಸಾರುವದಕ್ಕೆ ನೇವಿುಸಲ್ಪಟ್ಟವನೂ ಆಗಿರುವ ಪೌಲನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕ್ರಿಸ್ತ ಯೇಸುವಿನ ಸೇವಕನಾದ ಪೌಲನು ಬರೆಯುವ ಪತ್ರ. ದೇವರು ನನ್ನನ್ನು ಅಪೊಸ್ತಲನಾಗುವುದಕ್ಕೆ ಕರೆದನು. ದೇವರ ಸುವಾರ್ತೆಯನ್ನು ಎಲ್ಲಾ ಜನರಿಗೆ ತಿಳಿಸುವುದಕ್ಕಾಗಿ ನಾನು ಆರಿಸಲ್ಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಿಯಾ ಪಾವ್ಲು ಜೆಜು ಕ್ರಿಸ್ತಾಚೊ ಎಕ್ ಸೆವಕ್ ಅನಿ ಅಪ್ನಾಚಿ ಬರಿ ಖಬರ್ ಸಾಂಗುಕ್ ಮನುನ್ ದೆವಾನ್ ಎಚುನ್ ಕಾಡಲ್ಲೊ ಎಕ್ ಅಪೊಸ್ತಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:1
73 ತಿಳಿವುಗಳ ಹೋಲಿಕೆ  

ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ.


ಯೆಹೂದ್ಯರಲ್ಲದವರು ಪವಿತ್ರಾತ್ಮನಿಂದ ಪರಿಶುದ್ಧರಾಗಿ, ದೇವರಿಗೆ ಅಂಗೀಕೃತವಾದ ಕಾಣಿಕೆಗಳಾಗಬೇಕೆಂಬ ಕಾರಣದಿಂದ, ನಾನು ಯೆಹೂದ್ಯರಲ್ಲದವರಿಗೆ ಕ್ರಿಸ್ತ ಯೇಸುವಿನ ಸೇವಕನಾಗಿ ದೇವರ ಸುವಾರ್ತೆಯನ್ನು ಪ್ರಕಟಿಸಲು ದೇವರು ನನಗೆ ಕೃಪೆ ನೀಡಿದ್ದಾರೆ.


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನಿಂದ ಅಪೊಸ್ತಲನಾಗಲು ಕರೆಯಲಾದ ಪೌಲನೆಂಬ ನಾನು ಮತ್ತು ನಮ್ಮ ಸಹೋದರ ಸೊಸ್ಥೆನನು,


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ,


“ನಾನು ನಿನ್ನನ್ನು ತಾಯಿಯ ಗರ್ಭದಲ್ಲಿ ನಿರ್ಮಿಸುವುದಕ್ಕಿಂತ ಮುಂಚೆಯೇ ನಿನ್ನನ್ನು ತಿಳಿದಿದ್ದೆನು. ನೀನು ಹುಟ್ಟುವುದಕ್ಕಿಂತ ಮುಂಚೆ ನಿನ್ನನ್ನು ಪ್ರತಿಷ್ಠಿಸಿದ್ದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯಾಗಿ ನೇಮಿಸಿದ್ದೇನೆ.”


ದೇವರು ಆಯ್ದುಕೊಂಡವರ ನಂಬಿಕೆಗನುಸಾರವೂ ಭಕ್ತಿಗನುಸಾರವಾದ ಸತ್ಯದ ತಿಳುವಳಿಕೆಗನುಸಾರವೂ ದೇವರ ಸೇವಕನೂ ಕ್ರಿಸ್ತ ಯೇಸುವಿನ ಅಪೊಸ್ತಲನೂ ಆಗಿರುವ ಪೌಲನೆಂಬ ನನಗೆ


ದೇವಪುತ್ರನ ಸುವಾರ್ತೆಯನ್ನು ಸಾರುವುದರಿಂದ ದೇವರನ್ನೇ ನನ್ನ ಆತ್ಮದಲ್ಲಿ ಸೇವೆ ಮಾಡುವವನಾಗಿದ್ದೇನೆ. ಇದಕ್ಕೆ ದೇವರೇ ನನ್ನ ಸಾಕ್ಷಿ.


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, ಕೊರಿಂಥದಲ್ಲಿರುವ ದೇವರ ಸಭೆಗೆ ಮತ್ತು ಅಖಾಯ ಪ್ರಾಂತದಲ್ಲಿರುವ ಎಲ್ಲಾ ಪವಿತ್ರ ಜನರಿಗೆ ಬರೆಯುವ ಪತ್ರ:


ನಾನು ಸ್ವತಂತ್ರನಲ್ಲವೇ? ನಾನೂ ಅಪೊಸ್ತಲನಲ್ಲವೇ? ನಾನು ನಮ್ಮ ಕರ್ತ ಆಗಿರುವ ಯೇಸುವನ್ನು ಕಂಡವನಲ್ಲವೇ? ನಾನು ಕರ್ತ ದೇವರಲ್ಲಿ ಮಾಡಿದ ಕೆಲಸದ ಫಲವು ನೀವಲ್ಲವೇ?


ಈ ಸುವಾರ್ತೆಯನ್ನು ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಯೆಹೂದ್ಯರಲ್ಲದವರಿಗೆ ಉಪದೇಶಕನಾಗಿಯೂ ದೇವರಿಂದ ನೇಮಕವಾದೆನು.


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ನಮಗೆ ರಕ್ಷಕ ಆಗಿರುವ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತ ಯೇಸುವಿನ ಆಜ್ಞಾನುಸಾರ,


ಮನುಷ್ಯರಿಂದಾಗಲಿ, ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಕ್ರಿಸ್ತ ಯೇಸುವಿನ ಮುಖಾಂತರವೂ ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ


ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ.


ಫಿಲಿಪ್ಪಿ ಪಟ್ಟಣದಲ್ಲಿ ಮುಂಚೆ ನಮಗೆ ಹಿಂಸೆ ಮತ್ತು ಅವಮಾನವು ಸಂಭವಿಸಿದ್ದನ್ನು ನೀವು ಬಲ್ಲಿರಿ. ಹಾಗಿದ್ದರೂ ನಾವು ನಮ್ಮ ದೇವರ ಸಹಾಯದಿಂದ ಧೈರ್ಯಗೊಂಡು ಬಹು ವಿರೋಧದ ನಡುವೆ ನಿಮಗೆ ಸುವಾರ್ತೆಯನ್ನು ತಿಳಿಸಿದೆವು.


ಯೇಸುವಿನ ನಾಮದ ಮಹಿಮೆಗಾಗಿ ಯೆಹೂದ್ಯರಲ್ಲದವರಲ್ಲಿಯೂ ನಂಬಿಕೆಯ ವಿಧೇಯತೆ ಉಂಟಾಗುವುದಕ್ಕಾಗಿ ನಾವು ಯೇಸುವಿನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲರಾಗಿರುವುದನ್ನೂ ಹೊಂದಿದೆವು.


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು, ಕ್ರಿಸ್ತ ಯೇಸುವಿನಲ್ಲಿರುವ ಫಿಲಿಪ್ಪಿಯ ದೇವರ ಪರಿಶುದ್ಧರೆಲ್ಲರಿಗೂ, ಅವರೊಂದಿಗಿರುವ ಮೇಲ್ವಿಚಾರಕರಿಗೂ ಸಭಾಸೇವಕರಿಗೂ ಬರೆಯುವ ಪತ್ರ:


ಇದು ಕ್ರಿಸ್ತ ಯೇಸುವಿನ ಪ್ರಕಟನೆ. ಶೀಘ್ರವೇ ಸಂಭವಿಸಲಿಕ್ಕಿರುವ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದರು. ಇದಲ್ಲದೆ ದೇವರು ತಮ್ಮ ದೇವದೂತನನ್ನು ಕಳುಹಿಸಿ, ಅವನ ಮುಖಾಂತರ ಆ ಸಂಗತಿಗಳನ್ನು ತಮ್ಮ ದಾಸನಾದ ಯೋಹಾನನಿಗೆ ತಿಳಿಸಿದರು.


ಕ್ರಿಸ್ತ ಯೇಸುವಿನ ದಾಸನೂ ಯಾಕೋಬನ ಸಹೋದರನೂ ಆಗಿರುವ ಯೂದನು, ತಂದೆಯಾದ ದೇವರಿಗೆ ಪ್ರಿಯರಾದವವರಿಗೂ ಕ್ರಿಸ್ತ ಯೇಸು ಸುರಕ್ಷತೆಯನ್ನೂ ಅವರ ಕರೆಯುವಿಕೆಯನ್ನೂ ಹೊಂದಿದವರಿಗೆ ಬರೆಯುವ ಪತ್ರ:


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:


ದೇವರಿಗೂ ಕರ್ತ ಆಗಿರುವ ಯೇಸು ಕ್ರಿಸ್ತರಿಗೂ ದಾಸನಾಗಿರುವ ಯಾಕೋಬನು, ವಿವಿಧ ದೇಶಗಳಲ್ಲಿ ಚದರಿರುವ ಇಸ್ರಾಯೇಲರ ಹನ್ನೆರಡು ಗೋತ್ರದವರಿಗೆ ಬರೆಯುವುದು: ನಿಮಗೆ ಶುಭವಾಗಲಿ.


ಆರೋನನಂತೆ ದೇವರಿಂದ ಕರೆ ಹೊಂದದ ಹೊರತು ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳಲಾರನು.


ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತದೇವರು ಎಂಬುದಾಗಿ ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವುದು.


ಕ್ರಿಸ್ತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಕೆಲವರನ್ನು ಉಪದೇಶಿಗಳನ್ನಾಗಿಯೂ ಸಭೆಗೆ ಕೊಟ್ಟರು.


ನೀವು ಸಹ ನಿಮ್ಮ ರಕ್ಷಣೆಯ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿದ ಮೇಲೆ ಕ್ರಿಸ್ತನಲ್ಲಿ ನಂಬಿಕೆಯಿಟ್ಟು ವಾಗ್ದಾನದ ಪವಿತ್ರಾತ್ಮರಿಂದ ಮುದ್ರೆಹೊಂದಿದ್ದೀರಿ.


ನೀವೇ ನನ್ನನ್ನು ಹೊಗಳಿಕೊಳ್ಳುವಂತೆ ಮಾಡಿ, ನಾನು ಬುದ್ಧಿಹೀನನಾಗಿ ನಡೆಯಲು ಒತ್ತಾಯಿಸಿದ್ದೀರಿ. ನನಗೆ ನಿಮ್ಮಿಂದಲೇ ಹೊಗಳಿಕೆಯು ಬೇಕಾಗಿತ್ತು. ಏಕೆಂದರೆ ನಾನು ಕೇವಲ ಅತ್ಯಲ್ಪನಾದರೂ “ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ” ಕಡಿಮೆ ಅಲ್ಲ.


“ಅತ್ಯಂತ ಮಹಾ ಅಪೊಸ್ತಲರು” ಎಂದೆನಿಸಿದ ಇತರ ಅಪೊಸ್ತಲರಿಗಿಂತಲೂ ನಾನು ಕಡಿಮೆಯಾದವನಲ್ಲ ಎಂದು ಭಾವಿಸುತ್ತೇನೆ.


ನಾವು ನಮ್ಮ ಬಗ್ಗೆಯೇ ಪ್ರಚಾರ ಮಾಡುವುದಿಲ್ಲ. ಆದರೆ ಕ್ರಿಸ್ತ ಯೇಸು ಕರ್ತ ದೇವರೆಂದೂ ನಾವು ಯೇಸುವಿಗಾಗಿ ನಿಮ್ಮ ಸೇವಕರಾಗಿದ್ದೇವೆ ಎಂದೂ ಪ್ರಚುರಪಡಿಸುತ್ತೇವೆ.


ನಾನು ಸುವಾರ್ತೆಯ ವಿಷಯದಲ್ಲಿ ನಾಚಿಕೊಳ್ಳುವವನಲ್ಲ. ಏಕೆಂದರೆ ಅದು ಮೊದಲು ಯೆಹೂದ್ಯರಿಗೆ ಆಮೇಲೆ ಯೆಹೂದ್ಯರಲ್ಲದವರಿಗೆ, ಹೀಗೆ ನಂಬುವವರೆಲ್ಲರಿಗೂ ರಕ್ಷಣೆಯನ್ನು ಉಂಟುಮಾಡುವ ದೇವರ ಶಕ್ತಿಯಾಗಿದೆ.


“ಆಗ ಕರ್ತ ಯೇಸುವು, ‘ಹೋಗು, ನಾನು ಯೆಹೂದ್ಯರಲ್ಲದವರ ಬಳಿಗೆ ನಿನ್ನನ್ನು ದೂರಪ್ರದೇಶಗಳಿಗೆ ಕಳುಹಿಸುವೆನು,’ ಎಂದು ನನಗೆ ಹೇಳಿದರು.”


ನಾನು ನೆಲದ ಮೇಲೆ ಬಿದ್ದೆನು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?’ ಎಂದು ಒಂದು ಸ್ವರವು ನನಗೆ ಹೇಳುವುದನ್ನು ಕೇಳಿಸಿಕೊಂಡೆನು.


ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.


ಅವನು ನನಗೆ, “ನೋಡು, ನೀನು ಹಾಗೆ ಮಾಡಬೇಡ. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಳ್ಳುವವರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು!” ಎಂದು ಹೇಳಿದನು.


ನಿಮಗೋಸ್ಕರವಾಗಿ ನನಗೆ ದೇವರು ಕೊಟ್ಟಿರುವ ಜವಾಬ್ದಾರಿಗೆ ಅನುಸಾರವಾಗಿ, ದೇವರ ವಾಕ್ಯವನ್ನು ಸಂಪೂರ್ಣವಾಗಿ ಸಾರಲು ನಾನು ಸಭೆಗೆ ಸೇವಕನಾದೆನು.


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ಎಫೆಸದಲ್ಲಿರುವ ಭಕ್ತರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ ಬರೆಯುತ್ತಿರುವುದು:


ನನ್ನ ಸುವಾರ್ತೆಯು ಹೇಳುವಂತೆಯೇ ನಿಮ್ಮನ್ನು ಬಲಪಡಿಸುವ ದೇವರಿಗೆ ಈಗ ಎಲ್ಲಾ ಮಹಿಮೆಯಾಗಲಿ. ಕ್ರಿಸ್ತ ಯೇಸುವಿನ ಕುರಿತಾಗಿರುವ ಈ ಸಂದೇಶವು ಆದಿಯಿಂದಲೂ ಗುಪ್ತವಾಗಿರುವ ರಹಸ್ಯದ ದೇವರ ಯೋಜನೆಯು ಯೆಹೂದ್ಯರಲ್ಲದವರಾದ ನಿಮಗಾಗಿ ಈಗ ಪ್ರಕಟವಾಗಿದೆ.


ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ನಾನು ನಿಮ್ಮ ಬಳಿಗೆ ಬರುವಾಗ ಕ್ರಿಸ್ತನ ಆಶೀರ್ವಾದದಿಂದ ತುಂಬಿದವನಾಗಿ ಬರುತ್ತೇನೆಂದು ಬಲ್ಲೆನು.


ಯೆಹೂದ್ಯರಲ್ಲದವರಾಗಿರುವ ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ನಾನು ಯೆಹೂದ್ಯರಲ್ಲದವರಿಗೆ ಅಪೊಸ್ತಲನಾಗಿರುವಷ್ಟರ ಮಟ್ಟಿಗೆ ನನ್ನ ಸೇವೆಯನ್ನು ಪ್ರಭಾವಗೊಳಿಸುತ್ತೇನೆ.


ನಾನು ಯಾವ ದೇವರಿಗೆ ಸೇರಿದ್ದೇನೋ ಮತ್ತು ಯಾರನ್ನು ಸೇವೆ ಮಾಡುತ್ತಿದ್ದೇನೋ ಆ ದೇವರ ದೂತನೊಬ್ಬನು ನಿನ್ನೆ ರಾತ್ರಿ ನನ್ನ ಬಳಿ ನಿಂತುಕೊಂಡು,


ಆಗ ಅಗ್ರಿಪ್ಪನು, “ನಿನ್ನ ಪರವಾಗಿ ಮಾತನಾಡಲು ನಿನಗೆ ಅಪ್ಪಣೆಯಿದೆ,” ಎಂದು ಪೌಲನಿಗೆ ಹೇಳಿದನು. ಆಗ ಪೌಲನು ಕೈಯೆತ್ತಿ ಹೀಗೆ ಪ್ರತಿವಾದಿಸತೊಡಗಿದನು:


ಆಗ ಪೌಲನೆಂದೂ ಕರೆಯಲಾಗುತ್ತಿದ್ದ ಸೌಲನು, ಪವಿತ್ರಾತ್ಮಭರಿತನಾಗಿ, ಎಲುಮನನ್ನು ನೇರವಾಗಿ ದೃಷ್ಟಿಸಿ,


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ. ಏಕೆಂದರೆ ತನ್ನ ಧಣಿಯು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.


ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.


ದ್ವೀಪಗಳೇ, ನನ್ನ ಮಾತನ್ನು ಕೇಳಿರಿ. ದೂರದ ರಾಷ್ಟ್ರಗಳೇ, ಕಿವಿಗೊಡಿರಿ! ನನ್ನ ಜನನದ ಮುಂಚೆಯೇ ಯೆಹೋವ ದೇವರು ನನ್ನನ್ನು ಕರೆದರು. ತಾಯಿಯ ಉದರದಲ್ಲಿದ್ದಾಗಲೇ ನನಗೆ ಹೆಸರಿಟ್ಟರು.


ಅಮ್ರಾಮನ ಪುತ್ರರು: ಆರೋನ್ ಮತ್ತು ಮೋಶೆ; ಆರೋನನನ್ನು ಮತ್ತು ಅವನ ಪುತ್ರರನ್ನು ಮಹಾಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಶಾಶ್ವತವಾಗಿ ಪ್ರತ್ಯೇಕಿಸಲಾಯಿತು. ಇವರು ಯೆಹೋವ ದೇವರ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಅವರ ಸೇವೆ ಮಾಡುವವರೂ, ಅವರ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.


ಆ ಕಾಲದಲ್ಲಿ ಯೆಹೋವ ದೇವರು ಲೇವಿ ಗೋತ್ರವನ್ನು ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ಯೆಹೋವ ದೇವರ ಮುಂದೆ ನಿಂತುಕೊಂಡು ಅವರಿಗೆ ಸೇವೆಮಾಡಿ, ಅವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದರು. ಅವರು ಈ ದಿನದವರೆಗೂ ಆ ಕೆಲಸವನ್ನು ನಡೆಸುತ್ತಿದ್ದಾರೆ.


ಆಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ!” ಎಂದನು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನು ನೀಡುವ ಕರ್ತದೇವರು ಬೇಗನೆ ಸಂಭವಿಸತಕ್ಕ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿಯೇ ತಮ್ಮ ದೇವದೂತನನ್ನು ಕಳುಹಿಸಿದರು.


ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರೂ ಗಗನ ಮಂಡಲಗಳಿಗಿಂತ ಉನ್ನತಕ್ಕೇರಿದಾತರೂ ಆಗಿರುವ ಇಂಥಾ ಮಹಾಯಾಜಕ ನಮಗಿದ್ದಾರೆ.


ನಾವೆಲ್ಲರೂ ನೆಲದ ಮೇಲೆ ಬಿದ್ದೆವು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿ,’ ಎಂದು ಹೀಬ್ರೂ ಭಾಷೆಯಲ್ಲಿ ಹೇಳುವ ವಾಣಿಯನ್ನು ಕೇಳಿದೆನು.


ಸಹಸ್ರಾಧಿಪತಿಯ ಅಪ್ಪಣೆ ಪಡೆದುಕೊಂಡು, ಪೌಲನು ಮೆಟ್ಟಲುಗಳ ಮೇಲೆ ನಿಂತುಕೊಂಡು ಜನಸಮೂಹಕ್ಕೆ ಸುಮ್ಮನಿರುವಂತೆ ಸನ್ನೆಮಾಡಲು, ಅವರು ಬಹು ನಿಶ್ಶಬ್ದರಾದಾಗ ಅವನು ಹೀಬ್ರೂ ಭಾಷೆಯಲ್ಲಿ ಅವರಿಗೆ ಹೀಗೆಂದನು:


‘ಧಣಿಗಿಂತ ಆಳು ದೊಡ್ಡವನಲ್ಲ,’ ಎಂದು ನಾನು ನಿಮಗೆ ಹೇಳಿದ ಮಾತನ್ನು ನೆನಪಿಗೆ ತಂದುಕೊಳ್ಳಿರಿ. ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಅನುಸರಿಸಿದರೆ ನಿಮ್ಮ ಮಾತನ್ನು ಸಹ ಅನುಸರಿಸುವರು.


ಯೋಹಾನನು ಬಂಧಿತನಾಗಿ ಸೆರೆಯಾದ ತರುವಾಯ, ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಸಾರಿದರು:


ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದಕ್ಕೆ ನಾನು ತ್ರೋವಕ್ಕೆ ಹೋದಾಗ, ಅಲ್ಲಿ ಕರ್ತ ಯೇಸುವು ನನಗೆ ಬಾಗಿಲು ತೆರೆದಿರುವುದನ್ನು ಕಂಡೆನು.


ಪ್ರತಿಫಲವನ್ನು ಎದುರುನೋಡದೇ, ದೇವರ ಸುವಾರ್ತೆಯನ್ನು ನೀವು ಉನ್ನತರಾಗಬೇಕೆಂದು, ನನ್ನನ್ನು ನಾನೇ ತಗ್ಗಿಸಿಕೊಂಡು ಉಚಿತವಾಗಿ ಸಾರಿದ್ದು ನನ್ನ ಪಾಪವೋ?


ನಿಮ್ಮನ್ನು ಪೋಷಿಸಿದೆವು. ಏಕೆಂದರೆ ನಾವು ನಿಮ್ಮನ್ನು ಬಹಳವಾಗಿ ಪ್ರೀತಿಸಿದ್ದರಿಂದ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಮಾತ್ರವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವುದಕ್ಕೂ ಇಷ್ಟವುಳ್ಳವರಾಗಿದ್ದೆವು.


ಪ್ರಿಯರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕಬಾರದೆಂದು ಹಗಲಿರುಳು ದುಡಿದು ಕಷ್ಟ ಪ್ರಯಾಸದಿಂದ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವೆಂಬುದು ನಿಮ್ಮ ನೆನಪಿನಲ್ಲಿರುವುದಷ್ಟೆ.


ಏಕೆಂದರೆ ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯತೀರ್ಪಿನ ಸಮಯವು ಬಂದಿದೆ. ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರಬಹುದು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು